Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ...

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಆರಂಭ

ವಾರ್ತಾಭಾರತಿವಾರ್ತಾಭಾರತಿ9 Dec 2020 9:57 PM IST
share
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಆರಂಭ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಗುರುವಾರದಿಂದ ಆರಂಭ ಗೊಳ್ಳಲಿದೆ. ಡಿ. 13  ಮತ್ತು 14 ರಂದು 88ನೇ ವರ್ಷದ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಈ ಬಾರಿ ಸರಕಾರದ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಸರಳ ಕಾರ್ಯಕ್ರಮ ನಡೆಯಲಿದ್ದು, ಡಿ. 10ರಂದು ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಆರಂಭಗೊಂಡು, ಡಿ.14ರಂದು ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಂಪನ್ನಗೊಳ್ಳಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವದ ಯಶಸ್ವಿ ಕಾರ್ಯಕ್ರಮಕ್ಕೆ ಕ್ಷೇತ್ರದಿಂದ ಸಮಿತಿಗಳನ್ನು ರಚಿಸಲಾಗಿದ್ದು, ಸಕಲ ಸಿದ್ದತೆಗಳನ್ನು ನಡೆಸಲಾಗಿದೆ. ದೇವರು ಸವಾರಿ ಮಾಡುವ ರಥ ಬೀದಿ, ರಾಜ ಬೀದಿಗಳನ್ನು, ದೇವಸ್ಥಾನ, ಬೀಡು, ಅನ್ನಪೂರ್ಣ ಸೇರಿದಂತೆ ಕ್ಷೇತ್ರದಲ್ಲಿ ವಿದ್ಯುದ್ದೀಪಗಳಿಂದ ಅಲಂಕೃತಗೊಳಿಸಲಾಗಿದೆ.

ಕ್ಷೇತ್ರದಲ್ಲಿ ಕೊರೋನಾ ಹಿನ್ನಲೆಯಲ್ಲಿ ಭಕ್ತರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಕ್ಷೇತ್ರದಿಂದಲೂ ಸುರಕ್ಷತೆಯ ನಿಟ್ಟಿನಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಕ್ಷೇತ್ರಕ್ಕೆ ಬರುವ ಭಕ್ತರು ಮಾಸ್ಕ್ ಕಡ್ಡಾಯ ಧಾರಣೆ ಮಾಡಬೇಕು ಸುರಕ್ಷತೆಯ ದೃಷ್ಟಿಯಿಂದ ಕ್ಷೇತ್ರದಿಂದ ವಿನಂತಿಯಾಗಿದೆ. ವಸ್ತು ಪ್ರದರ್ಶನ ಹಾಗೂ ಬೀದಿ ಬದಿಯ ಅಂಗಡಿಗಳು ಇರುವುದಿಲ್ಲ. ಸರಕಾರದ ನಿಯಮದಂತೆ ಅಗತ್ಯ ಕ್ರಮಗಳೊಂದಿಗೆ ದೀಪೋತ್ಸವ ಸರಳವಾಗಿ ಆಚರಣೆಗೊಳ್ಳಲಿದೆ. ಈ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ವೀಕ್ಷಣೆ ಮಾಡಲು ಅವಕಾಶವಿದೆ. ’ಶ್ರೀ ಕ್ಷೇತ್ರ ಧರ್ಮಸ್ಥಳ’ ಯೂಟ್ಯೂಬ್, ಫೇಸ್‌ಬುಕ್ ಹಾಗೂ ನಮ್ಮ ಕುಡ್ಲ, ಶ್ರೀಶಂಕರ ಟಿವಿಯಲ್ಲಿ ನೇರ ವೀಕ್ಷಣೆಗೆ ಕ್ಷೇತ್ರದಿಂದ ಅವಕಾಶ ಮಾಡಲಾಗಿದೆ.

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪಾದಯಾತ್ರಿ ಸಮಿತಿ ವತಿಯಿಂದ ಗುರುವಾರ ಸಂಜೆ ಉಜಿರೆಯಿಂದ ಧರ್ಮಸ್ಥಳದ ವರೆಗೆ 8 ನೇ ವರ್ಷದ ಪಾದಯಾತ್ರೆ ನಡೆಯಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಭಾಗವಹಿಸುವ ಪಾದಯಾತ್ರಿಗಳು ಸರಕಾರದ ಎಲ್ಲಾ ನಿಯಮಗಳನ್ನು ಕಡ್ಡಾಯ ವಾಗಿ ಪಾಲಿಸಬೇಕು ಎಂದು ಪಾದಯಾತ್ರಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X