Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ವಾಧಿಕಾರಿ ನಡವಳಿಕೆಯಿಂದ ನಮ್ಮ ಬಾಯಿ...

ಸರ್ವಾಧಿಕಾರಿ ನಡವಳಿಕೆಯಿಂದ ನಮ್ಮ ಬಾಯಿ ಮುಚ್ಚಿಸಲಾಗದು: 'ಗೋಹತ್ಯೆ ನಿಷೇಧ' ಅಂಗೀಕಾರಕ್ಕೆ ಸಿದ್ದರಾಮಯ್ಯ ಕಿಡಿ

ವಾರ್ತಾಭಾರತಿವಾರ್ತಾಭಾರತಿ9 Dec 2020 10:27 PM IST
share
ಸರ್ವಾಧಿಕಾರಿ ನಡವಳಿಕೆಯಿಂದ ನಮ್ಮ ಬಾಯಿ ಮುಚ್ಚಿಸಲಾಗದು: ಗೋಹತ್ಯೆ ನಿಷೇಧ ಅಂಗೀಕಾರಕ್ಕೆ ಸಿದ್ದರಾಮಯ್ಯ ಕಿಡಿ

ಬೆಂಗಳೂರು, ಡಿ. 9: ಸಂಸದೀಯ ಪ್ರಜಾಪ್ರಭುತ್ವದಲ್ಲಿ ವಿಪಕ್ಷ ನಾಯಕನನ್ನು ‘Shadow Chief Minister’ ಎನ್ನುತ್ತಾರೆ. ಆದರೆ ಬಿಜೆಪಿ ಸರಕಾರ ಚುನಾಯಿತ ಪ್ರತಿನಿಧಿಗಳಿಗೆ ಮಾತ್ರವಲ್ಲ, ವಿಪಕ್ಷ ನಾಯಕನಿಗೂ ಗೌರವ ಇಲ್ಲ. ಕರ್ನಾಟಕದ ವಿಧಾನ ಮಂಡಲದ ಇತಿಹಾಸದಲ್ಲಿ ಇದೊಂದು ಕಪ್ಪು ದಿನ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ಮಂಗಳವಾರ ನಡೆದ ಕಲಾಪ ಸಲಹಾ ಸಮಿತಿಯಲ್ಲಿ ಯಾವ ಮಸೂದೆಯನ್ನೂ ಮಂಡಿಸುವುದಿಲ್ಲ ಎಂದು ಬಿಎಸ್ವೈ ಹೇಳಿದ್ದರು. ಇಂದಿನ ಕಲಾಪ ಪಟ್ಟಿಯಲ್ಲಿಯೂ ಈ ವಿಷಯ ಉಲ್ಲೇಖಿಸಲಾಗಿಲ್ಲ. ಆದರೆ, ಮಧ್ಯಾಹ್ನ ಏಕಾಏಕಿ ಗೋಹತ್ಯೆ ನಿಷೇಧ ಮಸೂದೆಯನ್ನು ಮಂಡಿಸಿ ಅಂಗೀಕರಿಸಲಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಿಶ್ಲೇಷಿಸಿದ್ದಾರೆ. 

ಚರ್ಚೆಗೆ ಅವಕಾಶವನ್ನೇ ಕೊಡದೆ, ಮಸೂದೆಯ ಪ್ರತಿಯನ್ನೂ ವಿರೋಧ ಪಕ್ಷಗಳ ಸದಸ್ಯರಿಗೂ ನೀಡದೆ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಿದ ರಾಜ್ಯ ಸರಕಾರದ ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಯನ್ನು ಖಂಡಿಸಿ ನಾಳೆ ಕಾಂಗ್ರೆಸ್ ಪಕ್ಷ ವಿಧಾನಸಭೆಯ ಕಲಾಪವನ್ನು ಬಹಿಷ್ಕರಿಸಲಿದೆ ಎಂದು ಎಚ್ವರಿಸಿದ್ದಾರೆ.

ಚರ್ಚೆಯನ್ನು ಎದುರಿಸಲು ಧೈರ್ಯ ಇಲ್ಲದ ಹೇಡಿ ಸರಕಾರ ಮಾತ್ರ ಈ ರೀತಿ ವರ್ತಿಸಲು ಸಾಧ್ಯ. ಈ ರೀತಿಯ ಸರ್ವಾಧಿಕಾರಿ ನಡವಳಿಕೆಯಿಂದ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಾಗದು. ಈ ಸರಕಾರದ ಭ್ರಷ್ಟಾಚಾರ ಮತ್ತು ದುಷ್ಟತನವನ್ನು ಬೀದಿಯಲ್ಲಿ ಜನರೊಂದಿಗೆ ನಿಂತು ವಿರೋಧಿಸುತ್ತೇವೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದು ಬಿದ್ದಿದೆ, ಒಂದೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಇನ್ನೊಂದೆಡೆ ಆಂತರಿಕ ಭಿನ್ನಮತದಿಂದಾಗಿ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಈ ಎಲ್ಲ ವೈಫಲ್ಯಗಳನ್ನು ಮುಚ್ಚಿಹಾಕಿ ಜನರ ಗಮನ ಬೇರೆಡೆ ಸೆಳೆಯಲು ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಮಸೂದೆಯಂತಹ ಅನಗತ್ಯ ವಿಷಯಗಳನ್ನು ವಿವಾದವನ್ನಾಗಿ ಮಾಡಲು ಹೊರಟಿದೆ ಎಂದು ಲೇವಡಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X