Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ವಿಧೇಯಕ ಉಭಯ ಸದನಗಳಲ್ಲಿ...

ಬಿಬಿಎಂಪಿ ವಿಧೇಯಕ ಉಭಯ ಸದನಗಳಲ್ಲಿ ಮಂಡನೆ: ವಾರ್ಡ್ ಸಂಖ್ಯೆ, ಮೇಯರ್ ಅಧಿಕಾರಾವಧಿ ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ9 Dec 2020 10:53 PM IST
share
ಬಿಬಿಎಂಪಿ ವಿಧೇಯಕ ಉಭಯ ಸದನಗಳಲ್ಲಿ ಮಂಡನೆ: ವಾರ್ಡ್ ಸಂಖ್ಯೆ, ಮೇಯರ್ ಅಧಿಕಾರಾವಧಿ ಹೆಚ್ಚಳ

ಬೆಂಗಳೂರು, ಡಿ.9: ಬಿಬಿಎಂಪಿ ವಾರ್ಡ್‍ಗಳ ಹೆಚ್ಚಳ, ಮೇಯರ್ ಅವಧಿ ವಿಸ್ತರಣೆ, ವಲಯಗಳ ಹೆಚ್ಚಳ, ಸ್ಥಾಯಿ ಸಮಿತಿಗಳ ಸದಸ್ಯರ ಏರಿಕೆ, ಪ್ರತಿ ವಲಯಕ್ಕೆ ಸದಸ್ಯರ ನೇಮಕ, ಮುಖ್ಯ ಕಾರ್ಯದರ್ಶಿ ಮಾದರಿಯ ಆಯುಕ್ತರ ನೇಮಕ ಒಳಗೊಂಡಂತೆ 2020ನೇ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಿ, ಅಂಗೀಕರಿಸಲಾಗಿದೆ.

ಬುಧವಾರ ಉಭಯ ಸದನಗಳಲ್ಲಿ ವಿಧೇಯಕವನ್ನು ಮಂಡಿಸಲಾಗಿದೆ. ಅದು ಚರ್ಚೆಯ ನಂತರ ಕಾಯ್ದೆ ಅನುಷ್ಠಾನಕ್ಕೆ ಬರಲಿದೆ. ಸಮಿತಿ ನೀಡಿರುವ ವರದಿಯಂತೆ ಇನ್ನು ಮುಂದೆ ಬಿಬಿಎಂಪಿಗೆ ಪ್ರತ್ಯೇಕ ಕಾಯ್ದೆ ಅಸ್ತಿತ್ವಕ್ಕೆ ಬರಲಿದ್ದು, ಹಾಲಿ ಇರುವ 198 ವಾರ್ಡ್ ಗಳಿಂದ 243 ವಾರ್ಡ್‍ಗಳಿಗೆ ಹೆಚ್ಚಳವಾಗಲಿದೆ.

ವರದಿಯಲ್ಲಿ ಪ್ರಮುಖವಾಗಿ ಸ್ಥಾಯಿ ಸಮಿತಿ ಸದಸ್ಯರ ಸಂಖ್ಯೆಯನ್ನು 12ರಿಂದ 15ಕ್ಕೆ ಹೆಚ್ಚಳ ಮಾಡುವುದು, ವಲಯಗಳನ್ನು 12ಕ್ಕೆ ಹೆಚ್ಚಳ ಮಾಡುವುದು, ಮುಖ್ಯ ಕಾರ್ಯದರ್ಶಿಗಳ ಮಾದರಿಯಲ್ಲಿ ಬಿಬಿಎಂಪಿಗೆ ಆಯುಕ್ತರನ್ನು ನೇಮಕ ಮಾಡಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಈವರೆಗೂ ಬಿಬಿಎಂಪಿ ಮೇಯರ್ ಅಧಿಕಾರ ಅವಧಿ ಒಂದು ವರ್ಷ ಇತ್ತು. ಇನ್ನು ಮುಂದೆ ಅವರ ಅಧಿಕಾರ ಅವಧಿ 30 ತಿಂಗಳಿಗೆ ನಿಗದಿಯಾಗಲಿದೆ. ಸ್ಥಾಯಿಸಮಿತಿ ಸದಸ್ಯರ ಸಂಖ್ಯೆ 12ರಿಂದ 15ಕ್ಕೆ ಏರಿಕೆಯಾದರೆ ಪ್ರತಿ ವಲಯಗಳಿಗೆ ಪಾಲಿಕೆ ಸದಸ್ಯರ ನೇತೃತ್ವದಲ್ಲಿ ಸಮಿತಿ ರಚನೆಗೆ ಅವಕಾಶ ನೀಡಲಾಗಿದೆ.

ವಲಯ ಮಟ್ಟದಲ್ಲಿ ಒಬ್ಬ ಪಾಲಿಕೆ ಸದಸ್ಯರನ್ನು ಅಧ್ಯಕ್ಷರನ್ನಾಗಿ ಮಾಡುವುದು, ಪ್ರತಿ ವಲಯಕ್ಕೂ ವಿಶೇಷ ಆಯುಕ್ತರು ಕಾರ್ಯ ನಿರ್ವಹಿಸಬೇಕೆಂದು ಸಮಿತಿ ಶಿಫಾರಸ್ಸು ಮಾಡಿದೆ. ಸಮಿತಿಯು 24-8-2020, 04-09-2020, 07-09-2020, 15-09-2020, 6-10-2020, 21-1-2020 ಹಾಗೂ 7-12-20202ರಲ್ಲಿ ಸಭೆ ನಡೆಸಿ ನಿಗದಿತ ಸಂದರ್ಭದಲ್ಲಿ ವರದಿಯನ್ನು ಸಲ್ಲಿಸಲಾಗದ ಕಾರಣ ವಿಸ್ತರಣೆ ಮಾಡಲಾಗಿತ್ತು. ಎಲ್ಲ ಸದಸ್ಯರ ಒಟ್ಟಾರೆ ಅಭಿಪ್ರಾಯವನ್ನು ಸಂಗ್ರಹಿಸಿ ವರದಿಯನ್ನು ಬುಧವಾರ ಸಲ್ಲಿಕೆ ಮಾಡಲಾಗಿದೆ.

ಸಚಿವರಾದ ಎಸ್.ಸುರೇಶ್ ಕುಮಾರ್, ಜೆ.ಸಿ.ಮಾಧುಸ್ವಾಮಿ, ಶಾಸಕರಾದ ಎನ್.ನಾರಾಯಣಸ್ವಾಮಿ, ರಾಮಲಿಂಗಾರೆಡ್ಡಿ, ಕೃಷ್ಣಭೈರೇಗೌಡ, ದಿನೇಶ್ ಗುಂಡೂರಾವ್, ಅರವಿಂದ ಲಿಂಬಾವಳಿ, ನರಸಿಂಹನಾಯಕ್, ಎಂ.ಕೃಷ್ಣಪ್ಪ, ರವಿಸುಬ್ರಹ್ಮಣ್ಯ, ಎಂ.ಸತೀಶ್ ರೆಡ್ಡಿ, ಎಸ್.ಆರ್.ವಿಶ್ವನಾಥ್, ಡಾ.ಕೆ.ಎಸ್.ಶ್ರೀನಿವಾಸ್ ಮೂರ್ತಿ, ಉದಯ ಡಿ. ಗರುಡಾಚಾರ್, ಆರ್.ಮಂಜುನಾಥ್ ಹಾಗೂ ವಿಧಾನಪರಿಷತ್ ಸದಸ್ಯರಾದ ತೇಜಸ್ವಿನಿಗೌಡ, ಕೆ.ಗೋವಿಂದ ರಾಜ್, ಪಿ.ಆರ್.ರಮೇಶ್, ಎನ್.ರವಿಕುಮಾರ್, ಆ.ದೇವೇಗೌಡ ಹಾಗೂ ಕೆ.ಎಸ್.ತಿಪ್ಪೇಸ್ವಾಮಿ ಸಮಿತಿಯ ಸದಸ್ಯರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X