Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರು ಆತ್ಮಹತ್ಯೆ ಮಾಡಿಕೊಂಡಾಗ ರೈತ...

ರೈತರು ಆತ್ಮಹತ್ಯೆ ಮಾಡಿಕೊಂಡಾಗ ರೈತ ನಾಯಕರು ಎಲ್ಲಿದ್ದರು?: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ10 Dec 2020 5:54 PM IST
share
ರೈತರು ಆತ್ಮಹತ್ಯೆ ಮಾಡಿಕೊಂಡಾಗ ರೈತ ನಾಯಕರು ಎಲ್ಲಿದ್ದರು?: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಡಿ.10: 2013-14ರ ಕಾಲ. ಕಾಂಗ್ರೆಸ್ ಅಧಿಕಾರದಲ್ಲಿತ್ತು. ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ರಾಮನಗರ, ಮಂಡ್ಯದಲ್ಲಿ ರೋಗದ ರುದ್ರ ನರ್ತನ. ಸರಕಾರ ಸುಮ್ಮನಿತ್ತು. ಆಗ ಚನ್ನಪಟ್ಟಣ, ರಾಮನಗರ, ಕನಕಪುರ, ಮಂಡ್ಯದಲ್ಲಿ ಪ್ರತಿ ಕುಟುಂಬಕ್ಕೆ 25 ಸಾವಿರ ರೂ.ನೆರವು ವೈಯಕ್ತಿಕವಾಗಿ ನೀಡಿದ್ದೆ. ಆಗ ಈ ರೈತ ನಾಯಕರು ಎಲ್ಲಿದ್ದರು? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ಮಹಾದಾಯಿಗಾಗಿ ಯಮನೂರಿನಲ್ಲಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕಾಂಗ್ರೆಸ್ ಸರಕಾರ ಹಲ್ಲೆ ಮಾಡಿತ್ತು. ಆ ದಾಳಿಯನ್ನು ರೈತರು ಇಂದೂ ಮರೆತಿಲ್ಲ ಎಂದು ಇತ್ತೀಚೆಗೆ ಪತ್ರಿಕೆಗಳೂ ವರದಿ ಮಾಡಿವೆ. ಅಂದು ಯಮನೂರಿಗೆ ಧಾವಿಸಿ ರೈತರಿಗೆ ಸಾಂತ್ವನ ಹೇಳಿದ್ದು ನಾನು. ಸರಕಾರ ರೈತರ ಮೇಲೆ ದಾಳಿ ನಡೆಸುತ್ತಿದ್ದಾಗ ಈ ರೈತ ನಾಯಕರು ಎಲ್ಲಿದ್ದರು? ಎಂದು ಕೇಳಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ನಿತ್ಯವೂ ಆತ್ಮಹತ್ಯೆಗಳು ವರದಿಯಾಗುತ್ತಿದ್ದವು. ಆಗ ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಂಕಷ್ಟದಲ್ಲಿದ್ದ ರೈತರಿಗೆ ಕೈಲಾದಷ್ಟು ನೆರವು ನೀಡಿ, ಅವರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ನಾನು ಮಾಡಿದೆ.  ಆಗ ಈ ರೈತ ನಾಯಕರು ಎಲ್ಲಿದ್ದರು? ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರೈತರ 25 ಸಾವಿರ ರೂ.ಕೋಟಿ ಮೊತ್ತದ ಸಾಲಮನ್ನಾ ಮಾಡುವಾಗ ರೈತ ಸಂಘಗಳ ಬಳಿ ಏನಾದರೂ ಕಮಿಷನ್ ಪಡೆದೆನೇ? ಕೆಲ ರೈತ ನಾಯಕರ ಬಾಯಲ್ಲಿ ಬರುತ್ತಿರುವ 'ಕಿಕ್‍ಬ್ಯಾಕ್' ಏನಾದರೂ ಪಡೆದೆನೇ? ರೈತ ನಾಯಕರು ಎನಿಸಿಕೊಂಡವರಿಗೆ ಸಾಲಮನ್ನಾ ವಿಚಾರವಾಗಿ ನನ್ನ ಕಡೆಗೆ ಕೃತಜ್ಞತೆ ಇದೆಯೇ? ರೈತರು ಸಾಲದ ಸುಳಿಯಲ್ಲಿದ್ದಾಗ ಈ ರೈತ ನಾಯಕರು ಎಲ್ಲಿದ್ದರು? ಎಂದು ಅವರು ಕೇಳಿದ್ದಾರೆ.

ರೈತರಿಗಾಗಿ ಇಂಥ ಹಲವು ಕಾರ್ಯಕ್ರಮಗಳನ್ನು ನಾನು ಸ್ವಯಂ ಪ್ರೇರಣೆಯಿಂದ ಮಾಡಿದ್ದೇನೆ. ಇವತ್ತು ನನ್ನ ವಿರುದ್ಧ ಅರಚುತ್ತಿರುವ ಇದೇ ರೈತ ನಾಯಕರೇನಾದರೂ ರೈತರ ಸಾಲಮನ್ನಾಕ್ಕಾಗಿ ನನ್ನ ಬಳಿ ಅರ್ಜಿ ಕೊಟ್ಟಿದ್ದರೇ? ಸಾಲಮನ್ನಾ ನನ್ನ ಕಾರ್ಯಕ್ರಮ. ಇಷ್ಟಾದರೂ 8 ಕೋಟಿ ರೂ.ಕಿಕ್ ಬ್ಯಾಕ್ ಪಡೆದ ಆರೋಪ ಮಾಡಿರುವ ಆ ನಾಯಕರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್ ಮಾತ್ರ. ನೀರಾವರಿ, ಕೃಷಿ, ರೈತರ ಆರ್ಥಿಕ ಸಬಲೀಕರಣಕ್ಕೆ ರಾಜ್ಯದಲ್ಲಿ ಏನಾದರೂ ಒಳ್ಳೆಯದಾಗಿದ್ದರೆ ಅದು ಜೆಡಿಎಸ್‍ನಿಂದ ಮಾತ್ರ. ಜೆಡಿಎಸ್ ರಾಜಕೀಯ ಪಕ್ಷ ಮಾತ್ರವಲ್ಲ. ಅದು ರೈತರಿಗಾಗಿ ಹೋರಾಡುವ ರೈತ ಸಂಘವೂ ಹೌದು ಎಂಬುದನ್ನು ಹೇಳಿಕೊಳ್ಳಲು ನನಗೆ ಹೆಮ್ಮೆ ಇದೆ ಎಂದು ಅವರು ತಿಳಿಸಿದ್ದಾರೆ.

ಇವತ್ತಿನ ಕೆಲ ರೈತ ಸಂಘಗಳು ರೈತರಿಗಾಗಿ ಹೋರಾಡುವುದನ್ನು ಬಿಟ್ಟು ಕಾಂಗ್ರೆಸ್‍ನಂಥ ಸಮಾಜವನ್ನು ಒಡೆಯುವ, ಜನರ ಆಶಯಗಳಿಗೆ ವಿರುದ್ಧವಾದ ಚಿಂತನೆಗಳನ್ನು ಹೊಂದಿರುವ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ. ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ಅನಗತ್ಯ ಹೋರಾಟ ನಡೆಸುತ್ತಿರುವ ಕೆಲ ರೈತ ಸಂಘಗಳ ಹಿಂದೆ ಕಾಂಗ್ರೆಸ್ ತೆರೆಮರೆಯ ರಾಜಕಾರಣ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.

ಕಾಂಗ್ರೆಸ್‍ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ ಮೂಲಕ ಕಾಂಗ್ರೆಸ್ ರೈತ ಸಂಘಗಳನ್ನೂ ಒಡೆಯುವ ಕೆಲಸಕ್ಕೆ ಕೈ ಹಾಕಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

2013-14ರ ಕಾಲ. ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ರಾಮನಗರ, ಮಂಡ್ಯದಲ್ಲಿ ರೋಗದ ರುದ್ರ ನರ್ತನ. ಸರ್ಕಾರ ಸುಮ್ಮನಿತ್ತು. ಆಗ ಚನ್ನಪಟ್ಟಣ, ರಾಮನಗರ, ಕನಕಪುರ, ಮಂಡ್ಯದಲ್ಲಿ ಪ್ರತಿ ಕುಟುಂಬಕ್ಕೆ ₹25 ಸಾವಿರ ನೆರವು ವೈಯಕ್ತಿವಾಗಿ ನೀಡಿದ್ದೆ. ಆಗ ಈ ರೈತ ನಾಯಕರು ಎಲ್ಲಿದ್ದರು? 1/8

— H D Kumaraswamy (@hd_kumaraswamy) December 10, 2020

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ನಿತ್ಯವೂ ಆತ್ಮಹತ್ಯೆಗಳು ವರದಿಯಾಗುತ್ತಿದ್ದವು. ಆಗ ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಂಕಷ್ಟದಲ್ಲಿದ್ದ ರೈತರಿಗೆ ಕೈಲಾದಷ್ಟು ನೆರವು ನೀಡಿ, ಅವರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ನಾನು ಮಾಡಿದೆ. ಆಗ ಈ ರೈತ ನಾಯಕರು ಎಲ್ಲಿದ್ದರು? 3/8

— H D Kumaraswamy (@hd_kumaraswamy) December 10, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X