Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನರ ಸಂಕಷ್ಟಕ್ಕೆ ಧ್ವನಿಯಾಗದ ಸರಕಾರ :...

ಜನರ ಸಂಕಷ್ಟಕ್ಕೆ ಧ್ವನಿಯಾಗದ ಸರಕಾರ : ಉಡುಪಿ ಜಿಲ್ಲಾ ಕಾಂಗ್ರೆಸ್

ತೈಲ, ಎಲ್ಪಿಜಿ ಬೆಲೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ10 Dec 2020 7:23 PM IST
share

ಉಡುಪಿ, ಡಿ.10: ಕೇಂದ್ರದಲ್ಲಿ ಮೋದಿ ನೇತೃತ್ವದಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ನಿರಂತರ ವಾಗಿ ಏರುಗತಿಯತ್ತ ಸಾಗುತ್ತಿದೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲಗಳ ಬೆಲೆ ಕಡಿಮೆ ಯಿದ್ದರೂ ದೇಶದಲ್ಲಿ ಅನಿಯಂತ್ರಿತವಾಗಿ ತೈಲ ಬೆಲೆ ಏರಿಕೆಯಾಗಿದ್ದು, ಇದರಿಂದ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿವೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಕಟಣೆಯಲ್ಲಿ ಟೀಕಿಸಿದೆ.

ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಜನರಿಗೆ ಹೊರೆಯಾಗದ ರೀತಿಯಲ್ಲಿ ಸ್ವಲ್ಪಏರಿಕೆ ಕಂಡರೂ ಅದನ್ನೇ ನೆಪವಾಗಿರಿಸಿಕೊಂಡು ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿತ್ತು.. ಆದರೆ ಈಗ ದಿನಂಪ್ರತಿ ಬೆಲೆ ಏರಿಕೆಕಂಡರೂ ಬಿಜೆಪಿ ಪಕ್ಷದ ನಾಯ ಕರು ಮೌನಕ್ಕೆ ಶರಣಾಗಿದ್ದಾರೆ. ಅಧಿಕಾರವಿಲ್ಲದಾಗ ಜನಪರ ಕಾಳಜಿಯ ನಾಟಕವಾಡುವ ಬಿಜೆಪಿ ಅಧಿಕಾರ ಪಡೆದಾಗ ಜನವಿರೋಧಿ ನಿಲುವು ತೆಗೆದುಕೊಳ್ಳುವುದು ಖಂಡನೀಯ ಎಂದು ಕಾಂಗ್ರೆಸ್ ಹೇಳಿದೆ.

ಪೆಟ್ರೋಲ್ ‌ದರ ಏರಿಕೆಯಿಂದ ಸಾರಿಗೆ ಹಾಗೂ ಸರಕು ಸಾಗಣೆ ದರ ಹೆಚ್ಚಳ, ಅದರಿಂದಉತ್ಪಾದಕ ವಸ್ತುಗಳ ಬೆಲೆ ಏರಿಕೆ, ಇದರಿಂದ ನಮ್ಮ ಅರ್ಥ ವ್ಯವಸ್ಥೆಗೆ ಹೊಡೆತ ಬೀಳಲಿದೆ. ಆದರೆ ಸರಕಾರ ಲಾಕ್‌ಡೌನ್ ಬಳಿಕ ಮಾರುಕಟ್ಟೆ ಚೇತರಿಸಲು ಪೂರಕ ಸನ್ನಿವೇಶ ಒದಗಿಸುವ ಬದಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಕೊಡುಗೆ ನೀಡಿ ಹಣದುಬ್ಬರದಿಂದ ಜನತೆ ಇನ್ನಷ್ಟು ಸಂಕಷ್ಟ ಪಡುವಂತಾಗಿದೆ. ಬಡವರನ್ನು ಅತಿಯಾಗಿ ಬಾಧಿಸುವ ತೈಲ, ಅಡುಗೆ ಅನಿಲ ಬೆಲೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರಕಟಣೆ ದೂರಿದೆ.

ಕೊರೋನ ಸೋಂಕಿನ ಭೀತಿಯಿಂದ ಆರ್ಥಿಕವಾಗಿ ಕಂಗೆಟ್ಟಿರುವ ಜನತೆ ಚೇತರಿಸಿಕೊಳ್ಳುವ ಮೊದಲೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಬೆನ್ನಲ್ಲೇ ಸಬ್ಸಿಡಿಯುಕ್ತ ಅನಿಲ (ಎಲ್‌ಪಿಜಿ) ಸಿಲಿಂಡರ್ ದರದಲ್ಲೂ 50ರೂ. ಸದ್ದಿಲ್ಲದೆ ಏರಿಕೆಯಾಗಿದೆ. ಈ ಹಿಂದೆ ಸಬ್ಸಿಡಿ ಮೊತ್ತವನ್ನು ಗ್ರಾಹಕರು ಸಿಲಿಂಡರ್ ಖರೀದಿಸಿದ ನಂತರ ಅವರ ಬ್ಯಾಂಕ್‌ಖಾತೆಗೆ ಹಾಕಲಾಗುತ್ತಿತ್ತು. ಆದರೆ ಕಳೆದ 6 ತಿಂಗಳಿಂದ ಎಲ್ಪಿಜಿ ಸಬ್ಸಿಡಿ ಬಿಡುಗಡೆಯಾಗು ತ್ತಿಲ್ಲ. ವಿವಿಧ ತೆರಿಗೆಗಳಿಂದ ಜನರನ್ನು ಲೂಟಿ ಮಾಡಿ ತಮ್ಮ ಅಧಿಕಾರವನ್ನು ಭದ್ರಪಡಿಸಿಕೊಳ್ಳುವುದೇ ಸರಕಾರದ ಉದ್ದೇಶವಾದರೆ ಜನರ ಸಂಕಷ್ಟಕ್ಕೆ ಸ್ಪಂದಿಸುವವರು ಯಾರು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್‌ರಾವ್ ಕಿದಿಯೂರು ಸರಕಾರವನ್ನು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X