Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ...

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವನೆ, ಉಗುಳುವುದು ಶಿಕ್ಷಾರ್ಹ ಅಪರಾಧ : ಜಿಲ್ಲಾಧಿಕಾರಿ ಡಾ.ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ10 Dec 2020 7:41 PM IST
share
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವನೆ, ಉಗುಳುವುದು ಶಿಕ್ಷಾರ್ಹ ಅಪರಾಧ : ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು, ಡಿ.10: ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಸೇವನೆ ಹಾಗೂ ತಂಬಾಕು ಉತ್ಪನ್ನ ಜಗಿದು ಉಗಿಯುವುದು ಅಪರಾಧ ವಾಗಿದ್ದು, ಇಂತಹ ಪ್ರಕರಣಗಳು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನುದ್ದೇಶಿ ಮಾತನಾಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದ್ದು ಇದನ್ನು ಉಲ್ಲಂಘನೆ ಮಾಡಿದವರಿಗೆ 200 ರೂ.ದಂಡ ವಿಧಿಸಲಾಗುವುದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಹಾಗೂ ಪಾನ್ ಮಸಾಲಗಳನ್ನು ಜಗಿದು ಉಗುಳುವುದರಿಂದ ಕೊವಿಡ್-19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇದನ್ನು ನಿಷೇಧಿಸಿದ್ದು, ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಲಾ ಕಾಲೇಜು ಆವರಣಗಳ 100 ಮೀಟರ್ ಅಂತರದಲ್ಲಿ ತಂಬಾಕು, ಗುಟ್ಕಾ ಮಾರಾಟ ಮಾಡುವುದು ಹಾಗೂ ಸೇವನೆ ಮಾಡುವುದನ್ನು ನಿಷೇಧಿಸಲಾಗಿದೆ, ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು ಎಚ್ಚರಿಕೆ ಫಲಕಗಳನ್ನು ಅಳವಡಿಸಿಕೊಳ್ಳಬೇಕು. ಇದನ್ನು ಉಲ್ಲಂಘಿಸಿದರೆ ಕಾನೂನು ರೀತಿಯ ಕ್ರಮ ಕೈಗೊಂಡು ಅಂತಹ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

18 ವರ್ಷದೊಳಗಿನವರೆಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಹಾಗೂ ಅವರಿಂದ ಮಾರಾಟ ಮಾಡಿಸುವುದು ಶಿಕ್ಷಾರ್ಹ ಅಪರಾಧ ಎಂದ ಅವರು, ತಂಬಾಕು ಉತ್ಪನ್ನಗಳ ಕುರಿತು ಜಾಹಿರಾತು ಪ್ರಚಾರ, ಪ್ರಯೋಜಕತ್ವದ ಫಲಕಗಳನ್ನು ಪ್ರದರ್ಶಿಸುವುವುದು ಅಪರಾಧ. ಅಂತವರಿಗೆ 1000 ರೂ. ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಚಂದ್ರ ಬಾಯರಿ, ವೈದ್ಯಕೀಯ ಅಧೀಕ್ಷಕರು ಲೇಡಿಗೋಶನ್ ಡಾ. ದುರ್ಗಾ ಪ್ರಸಾದ್, ಜಿಲ್ಲಾ ಶಸ್ರಚಿಕಿತ್ಸಕರು ಹಾಗೂ ಅಧೀಕ್ಷಕರು ಸದಾಶಿವ ಶಾನ್‌ಭೋಗ್, ಜಿಲ್ಲಾ ಸರ್ವೇಕ್ಷಣ ಘಟಕದ ಜಿಲ್ಲಾ ಕಾರ್ಯ ಕ್ರಮಾಧಿಕಾರಿ ಡಾ. ಜಗದೀಶ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್ ಎರಡನೆ ಅಲೆಯ ಬಗ್ಗೆ ಜಾಗರೂಕರಾಗಿರಿ

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು ಎರಡನೇ ಅಲೆ ಹರಡುವ ಸಾಧ್ಯತೆ ಹಿನ್ನೆಲೆ ತಡೆಗಟ್ಟಲು ಮುಂದಾಗಬೇಕು. ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಬೇಕು ಹಾಗೂ ಕೋವಿಡ್ ಸೋಂಕು ಹೊಂದಿರುವವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ ವರಿಗೂ ಸಹಕೋವಿಡ್ ಪರೀಕ್ಷೆ ಮಾಡಬೇಕು ಎಂದು ವೈದ್ಯಾಧಿಕಾರಿಗಳು ಸೂಚನೆ ನೀಡಿದರು.

ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆ ಕೋವಿಡ್ ಸೋಂಕು ಹರಡುವ ಸಾಧ್ಯತೆಗಳಿವೆ. ಇವುಗಳನ್ನು ನಿಯಂತ್ರಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ರಾತ್ರಿ ಸಮಯದಲ್ಲಿ ತುರ್ತು ಸೇವೆಗಳ 108 ಅಂಬ್ಯುಲೆನ್ಸ್ ಲಭ್ಯವಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ, ಈ ಬಗ್ಗೆ ಅಗತ್ಯ ಕ್ರಮ ವಹಿಸಬೇಕು ಸಂಬಂಧಪಟ್ಟ ಏಜೆನ್ಸಿಗಳು ಸ್ಪಂದಿಸದಿದ್ದಲ್ಲಿ ಅವರಿಗೆ ನೋಟಿಸ್ ಜಾರಿ ಮಾಡಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯ ಅಬಕಾರಿ ಇಲಾಖೆಯು ಎಲ್ಲಾ ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳ ಪ್ರವೇಶ ದ್ವಾರದಲ್ಲಿ ಕೋಟ್ಪಾ ಕಾಯ್ದೆಯ ನಾಮಫಲಕ ಪ್ರದರ್ಶಿಸಿ ಧೂಮಪಾನ ಮುಕ್ತ ವಾತಾವರಣವಾಗಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

''ಜಿಲ್ಲೆಯಲ್ಲಿ ಜನವರಿ ತಿಂಗಳಿನಿಂದ ಈವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಇನ್ನಿತರ ಒಟ್ಟು 4,778 ಪ್ರಕರಣಗಳು ದಾಖಲಾಗಿದ್ದು, ರೂ. 3,08,050 ದಂಡ ವಸೂಲಿ ಮಾಡಲಾಗಿದೆ''.

- ಡಾ. ಹನುಮಂತ ರಾಯಪ್ಪ, ಸಂಯೋಜಕರು, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ದ.ಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X