ಉಡುಪಿ ಜಿಲ್ಲೆಯ 20 ಮಂದಿಯಲ್ಲಿ ಕೊರೋನ ಸೋಂಕು ದೃಢ
![ಉಡುಪಿ ಜಿಲ್ಲೆಯ 20 ಮಂದಿಯಲ್ಲಿ ಕೊರೋನ ಸೋಂಕು ದೃಢ ಉಡುಪಿ ಜಿಲ್ಲೆಯ 20 ಮಂದಿಯಲ್ಲಿ ಕೊರೋನ ಸೋಂಕು ದೃಢ](https://www.varthabharati.in/sites/default/files/images/articles/2020/12/11/270807-1607694470.jpg)
ಉಡುಪಿ, ಡಿ.11: ಜಿಲ್ಲೆಯಲ್ಲಿ ಶುಕ್ರವಾರ 20 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. 15 ಮಂದಿ ಚಿಕಿತ್ಸೆ ಯಿಂದ ಗುಣಮುಖರಾದರೆ, 144 ಮಂದಿ ಈಗ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ತಲಾ 10 ಮಂದಿ ಪುರುಷರು ಹಾಗೂ ಮಹಿಳೆಯರು ಸೇರಿದ್ದಾರೆ. ಇವರಲ್ಲಿ ಏಳು ಮಂದಿ ಪುರುಷರು ಹಾಗೂ ಆರು ಮಂದಿ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 9, ಕುಂದಾಪುರ ತಾಲೂಕಿನ 8 ಹಾಗೂ ಕಾರ್ಕಳ ತಾಲೂಕಿನ ಮೂವರು ಇಂದು ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ. ಸೂಡ ತಿಳಿಸಿದರು.
15 ಮಂದಿ ಗುಣಮುಖ: ಗುರುವಾರ ಜಿಲ್ಲೆಯಲ್ಲಿ 15 ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,532ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 144 ಮಂದಿ ಕೋವಿಡ್ಗೆ ಸಕ್ರಿಯರಿದ್ದಾರೆ ಎಂದರು.
1345 ನೆಗೆಟಿವ್: ಜಿಲ್ಲೆಯಲ್ಲಿ ಗುರುವಾರ ಒಟ್ಟು 1367 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1345 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಉಳಿದ 22 (ಐಸಿಎಂಆರ್ ವರದಿ) ಮಂದಿಯಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,863ಕ್ಕೇರಿದೆ ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಗುರುವಾರದವರೆಗೆ ಒಟ್ಟು 2,62,380 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,39,517 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 22,863 ಮಂದಿ ಪಾಸಿಟಿವ್ ಬಂದಿದ್ದರೆ, 22,532 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ.
ಕೋವಿಡ್ಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಒಟ್ಟು ಸಂಖ್ಯೆ 187 ಮಾತ್ರ. ಕಳೆದ 34 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ಗೆ ಯಾರೂ ಬಲಿಯಾಗಿಲ್ಲ ಎಂದು ಇಲಾಖೆಯ ದೈನಂದಿನ ಬುಲೆಟಿನ್ನಲ್ಲಿ ಮಾಹಿತಿ ನೀಡಲಾಗಿದೆ.