Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ರಾಹ್ಮಣರನ್ನು ಬ್ರಾಹ್ಮಣರೆಂದಾಗ...

ಬ್ರಾಹ್ಮಣರನ್ನು ಬ್ರಾಹ್ಮಣರೆಂದಾಗ ಬೇಸರವಾಗುವುದಿಲ್ಲ, ಶೂದ್ರರಿಗೇಕೆ ಶೂದ್ರರೆಂದಾಗ ಬೇಸರ?: ಪ್ರಜ್ಞಾ ಠಾಕೂರ್

“ಕ್ಷತ್ರಿಯರು ಹೆಚ್ಚು ಹೆಚ್ಚು ಮಕ್ಕಳನ್ನು ಹೆರಬೇಕು”

ವಾರ್ತಾಭಾರತಿವಾರ್ತಾಭಾರತಿ14 Dec 2020 11:55 AM IST
share
ಬ್ರಾಹ್ಮಣರನ್ನು ಬ್ರಾಹ್ಮಣರೆಂದಾಗ ಬೇಸರವಾಗುವುದಿಲ್ಲ, ಶೂದ್ರರಿಗೇಕೆ ಶೂದ್ರರೆಂದಾಗ ಬೇಸರ?: ಪ್ರಜ್ಞಾ ಠಾಕೂರ್

ಭೋಪಾಲ್: ಸಾಮಾಜಿಕ ವ್ಯವಸ್ಥೆಯ ಕುರಿತಾದ ‘ಅಜ್ಞಾನ’ದಿಂದಾಗಿ ಶೂದ್ರರನ್ನು ಶೂದ್ರ ಎಂದು ಕರೆದಾಗ ಅವರಿಗೆ  ಬೇಸರವಾಗುತ್ತದೆ ಎಂದು ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಬಿಜೆಪಿಯ ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.

ಮಧ್ಯಪ್ರದೇಶದ ಸೇಹೋರ್ ನಲ್ಲಿ ಶನಿವಾರ ಕ್ಷತ್ರಿಯ ಮಹಾಸಭಾ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. “ನಮ್ಮ `ಧರ್ಮಶಾಸ್ತ್ರ’ಗಳಲ್ಲಿ ಸಮಾಜವನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ. ಕ್ಷತ್ರಿಯರೊಬ್ಬರನ್ನು ಕ್ಷತ್ರಿಯ ಎಂದು  ಕರೆದರೆ ಅವರಿಗೆ ಬೇಸರವಾಗುವುದಿಲ್ಲ, ಬ್ರಾಹ್ಮಣರನ್ನು ಬ್ರಾಹ್ಮಣ ಎಂದು ಕರೆದರೆ ಅವರಿಗೆ ಬೇಸರವಾಗುವುದಿಲ್ಲ, ವೈಶ್ಯರನ್ನು ವೈಶ್ಯ ಎಂದು ಕರೆದರೆ ಅವರಿಗೆ ಬೇಸರವಾಗುವುದಿಲ್ಲ, ಆದರೆ ನೀವು ಶೂದ್ರರೊಬ್ಬರನ್ನು ಶೂದ್ರ ಎಂದು ಕರೆದರೆ ಅವರಿಗೆ ಬೇಸರವಾಗುತ್ತದೆ. ಇದೇಕೆ ಹೀಗೆ? ಅವರಲ್ಲಿರುವ ಅಜ್ಞಾನದಿಂದಾಗಿ ಅವರಿಗೆ ಅರ್ಥವಾಗುವುದಿಲ್ಲ,'' ಎಂದು ಪ್ರಜ್ಞಾ ಹೇಳಿದ್ದಾರೆ.

“ಜನಸಂಖ್ಯಾ ನಿಯಂತ್ರಣ ಕಾನೂನನ್ನು ದೇಶವಿರೋಧಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವವರಿಗೆ ಅನ್ವಯಿಸಬೇಕು, ದೇಶಕ್ಕಾಗಿ ಬಾಳುವವರಿಗೆ ಅದು ಅನ್ವಯವಾಗುವುದಿಲ್ಲ,” ಎಂದು ಪ್ರಜ್ಞಾ ಠಾಕೂರ್ ಹೇಳಿದರು.

“ಮೀಸಲಾತಿಯನ್ನು ಜಾತಿ ಆಧಾರದ ಬದಲು ಆರ್ಥಿಕ ಮಾನದಂಡದ ಮೇಲೆ ನೀಡಬೇಕು ಹಾಗೂ ಇದರಿಂದ ಬಡವರಿಗೆ ಲಾಭವಾಗಿ ಅವರು ಉತ್ತಮವಾಗಿ ಬಾಳುವಂತಾಗಬೇಕು,'' ಎಂದು ಹೇಳಿದ ಅವರು  ಸಭಿಕರಲ್ಲಿದ್ದ ಮಹಿಳೆಯರನ್ನುದ್ದೇಶಿಸಿ ``ಇಂದು ಕ್ಷತ್ರಿಯರು ತಮ್ಮ ಕರ್ತವ್ಯಗಳನ್ನು ಅರಿತು ಹೆಚ್ಚು ಹೆಚ್ಚು ಮಕ್ಕಳನ್ನು  ಹೆತ್ತು ಅವರನ್ನು ಮುಂದೆ ಸೇನೆಗೆ ಸೇರಿಸಬೇಕು ಹಾಗೂ ಈ ಮೂಲಕ ಅವರು ದೇಶಕ್ಕಾಗಿ ಹೋರಾಡುವಂತೆ ಮಾಡಬೇಕು,'' ಎಂದರು.

ರೈತರ ಪ್ರತಿಭಟನೆಗಳನ್ನು ಉಲ್ಲೇಖಿಸಿದ ಅವರು “ರೈತರ ಹೆಸರಿನಲ್ಲಿ ಪ್ರತಿಭಟಿಸುವವರು ದೇಶ ವಿರೋಧಿಗಳು. ಅವರು ರೈತರಲ್ಲ ಬದಲು ರೈತರ ವೇಷದಲ್ಲಿರುವ ಕಾಂಗ್ರೆಸ್ಸಿಗರು ಹಾಗೂ ಎಡಪಂಥೀಯರು, ಅವರು ದೇಶದ ವಿರುದ್ಧ ದನಿಯೆತ್ತಿ ಶಾಹೀನ್ ಬಾಗ್ ಪ್ರತಿಭಟನೆ ವೇಳೆ ಮಾಡಿದಂತೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ,''ಎಂದರು.

ಸಂಸದೆ  ಕ್ಷತ್ರಿಯ ಮಹಾಸಭಾದ ಸ್ಥಾಪನಾ ದಿನದ ಕಾರ್ಯಕ್ರಮಕ್ಕೆ ದೊರೆತ ಆಹ್ವಾನದ ಮೇರೆಗೆ ಹೋಗಿದ್ದರು ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ,. ಆದರೆ  ತಮ್ಮ ಸಂಘಟನೆ ಈ ಕಾರ್ಯಕ್ರಮ ಆಯೋಜಿಸಿಲ್ಲ ಎಂದು ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ಕಾರ್ಯಾಧ್ಯಕ್ಷ  ಸುರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X