Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರಿಗೆ ನೌಕರರ ಮುಷ್ಕರ ವಾಪಸ್:...

ಸಾರಿಗೆ ನೌಕರರ ಮುಷ್ಕರ ವಾಪಸ್: ಸಂಜೆಯಿಂದಲೇ ಬಸ್‌ಗಳ ಸಂಚಾರ ಆರಂಭ

ಸರಕಾರಕ್ಕೆ 90 ದಿನಗಳ ಗಡುವು

ವಾರ್ತಾಭಾರತಿವಾರ್ತಾಭಾರತಿ14 Dec 2020 4:45 PM IST
share
ಸಾರಿಗೆ ನೌಕರರ ಮುಷ್ಕರ ವಾಪಸ್: ಸಂಜೆಯಿಂದಲೇ ಬಸ್‌ಗಳ ಸಂಚಾರ ಆರಂಭ

ಬೆಂಗಳೂರು, ಡಿ.14: ‘ಸರಕಾರಿ ನೌಕರ’ರೆಂದು ಪರಿಗಣಿಸುವ ಬೇಡಿಕೆ ಹೊರತುಪಡಿಸಿ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವುದಾಗಿ ರಾಜ್ಯ ಸರಕಾರ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಸತತ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಸಾರಿಗೆ ನೌಕರರ ಮುಷ್ಕರ ಕೊನೆಗೂ ಸುಖ್ಯಾಂತ ಕಂಡಿದ್ದು, ಸೋಮವಾರ ಸಂಜೆಯಿಂದಲೇ ಬಸ್ ಸಂಚಾರ ಪುನರಾರಂಭವಾಯಿತು.

ಬೆಂಗಳೂರಿನ ಫ್ರೀಡಂ ಪಾರ್ಕ್ ಮೈದಾನದಲ್ಲಿ ನಡೆಯುತ್ತಿದ್ದ ಸಾರಿಗೆ ನೌಕರರ ಧರಣಿಯಲ್ಲಿ ತಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಕೈಬಿಡುವ ಬಗ್ಗೆ ಅಧಿಕೃತವಾಗಿ ಘೋಷಿಸಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯ ಸರಕಾರ ಲಿಖಿತ ಭರವಸೆ ನೀಡಿರುವ ಹಿನ್ನೆಲೆ ಮುಷ್ಕರ ಅಂತ್ಯಗೊಳಿಸಿದ್ದು, ರಾಜ್ಯಾದ್ಯಂತ ಎಲ್ಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುತ್ತಾರೆ ಎಂದರು.

ಬಿಎಂಟಿಸಿ, ಕೆಎಸ್ಸಾರ್ಟಿಸಿ ಸೇರಿದಂತೆ ನಾಲ್ಕು ವಿಭಾಗಗಳ ಸಾರಿಗೆ ಸಿಬ್ಬಂದಿಗಳು ನಾಲ್ಕು ದಿನಗಳ ಮುಷ್ಕರ ವಾಪಸ್ಸು ಪಡೆಯುತ್ತೇವೆ. ಈ ಮುಷ್ಕರದಿಂದ ತೊಂದರೆ ಉಂಟಾಗಿದ್ದಕ್ಕೆ ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಅವರು ಹೇಳಿದರು.

ರಾಜ್ಯ ಸರಕಾರ ಒಪ್ಪಿದ್ದ 9 ಬೇಡಿಕೆಗಳು ಪರಿಷ್ಕರಣೆಯಾಗಿದೆ. ಆದರೆ, ಸರಕಾರಿ ನೌಕರರೆಂದು ಪರಿಗಣಿಸುವ ನಮ್ಮ ಮೊದಲ ಬೇಡಿಕೆ ಮಾತ್ರ ಘೋಷಣೆ ಮಾಡಿಲ್ಲ. ಅದೇ ರೀತಿ, 6ನೆ ವೇತನ ಆಯೋಗದ ಜಾರಿ 2021ರ ಜನವರಿಗೆ ಜಾರಿಯಾಗುತ್ತದೆ. ಕಾನೂನು ಪ್ರಕಾರವಾಗಿ ಜಾರಿಗೆ ಬರುತ್ತೆ, ಇದನ್ನು ತಡೆಯಲಾಗಲ್ಲ. ಈ ಎರಡೂ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದರು.

90 ದಿನಗಳ ಗಡುವು: ಸರಕಾರಕ್ಕೆ 3 ತಿಂಗಳ ಗಡುವು ನೀಡುತ್ತೇವೆ. ಇನ್ನುಳಿದ ಪ್ರಮುಖ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಹೋರಾಟದ ಹಾದಿಯಲ್ಲಿ ಸಾಗುತ್ತೇವೆ. ಜತೆಗೆ, ಮುಷ್ಕರ ನಿರತ ಸಾರಿಗೆ ಸಿಬ್ಬಂದಿ ಮೇಲೆ ದಾಖಲಾಗಿರುವ ಪ್ರಕರಣಗಳು ಹಾಗೂ ವಶಕ್ಕೆ ಪಡೆದವರನ್ನು ಬಿಡುಗಡೆಗೊಳಿಸಬೇಕು ಎಂದು ತಿಳಿಸಿದರು.

ಗೊಂದಲ-ತಕರಾರು: ಇದಕ್ಕೂ ಮೊದಲು ಬಿಎಂಟಿಸಿ ಅಧ್ಯಕ್ಷ ನಂದೀಶ್‍ ರೆಡ್ಡಿ ಅವರ ಮೂಲಕ ರಾಜ್ಯ ಸರಕಾರ ಸಾರಿಗೆ ನಿಗಮಗಳ ಮುಷ್ಕರದ ಸ್ಥಳಕ್ಕೆ ಸಂಧಾನ ಸೂತ್ರಗಳನ್ನು ಲಿಖಿತವಾಗಿ ಕಳುಹಿಸಿತ್ತು. ಅವರೊಂದಿಗೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಶಾಸಕ ರಾಜು ಪತ್ರದೊಂದಿಗೆ ಸ್ವಾತಂತ್ರ್ಯ ಉದ್ಯಾನದತ್ತ ಹಾಜರಾದರು.

ಬಳಿಕ ಭರವಸೆಯ ಪ್ರತಿಯನ್ನು ಹೋರಾಟದ ನೇತೃತ್ವ ವಹಿಸಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಒಪ್ಪಿಸಿದರು. ತದನಂತರ, ಅದರಲ್ಲಿನ ಅಂಶಗಳನ್ನು ಓದುವ ವೇಳೆ ಹಲವು ನೌಕರರು ತಕರಾರು ಎತ್ತಿದರು.

ಆರನೇ ವೇತನ ಆಯೋಗದ ಶಿಫಾರಸುಗಳ ಜಾರಿ ಕುರಿತು ಸರಕಾರದ ಪ್ರಮುಖರು ಸ್ಪಷ್ಟಪಡಿಸಿದರೆ ಹತ್ತು ನಿಮಿಷಗಳಲ್ಲಿ ಮುಷ್ಕರ ವಾಪಸ್ ಪಡೆಯುವುದಾಗಿ ನೌಕರರ ಒಕ್ಕೂಟದ ಪ್ರಮುಖರು ಹೇಳಿದರು. ಇದರಿಂದಾಗಿ ಮತ್ತೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ನಂತರ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ಮೊಬೈಲ್ ಕರೆ ಮೂಲಕ ಕೋಡಿಹಳ್ಳಿ ಚಂದ್ರಶೇಖರ್ ಮಾತುಕತೆ ನಡೆಸಿದರು. ನಂತರವೂ ನೌಕರರು ಮುಷ್ಕರ ಹಿಂಪಡೆಯಲು ಒಪ್ಪಲಿಲ್ಲ.

ಒಂದು ಗಂಟೆಗೂ ಹೆಚ್ಚು ಕಾಲ ಮನವೊಲಿಕೆ ನಡೆಸಿದ ಕೋಡಿಹಳ್ಳಿ ಚಂದ್ರಶೇಖರ್, ಅಂತಿಮವಾಗಿ ಮುಷ್ಕರ ವಾಪಸ್ ಪಡೆಯುವ ನಿರ್ಧಾರ ಪ್ರಕಟಿಸಿದರು. ಮುಷ್ಕರ ವಾಪಸ್ ಪಡೆದ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹೆಚ್ಚಿನ ಸಂಖ್ಯೆಯ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾದ ದೃಶ್ಯಕಂಡಿತು.

ಕೊನೆಗೂ ಬರಲಿಲ್ಲ ಸಚಿವರು

ಸ್ವತಃ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಮುಷ್ಕರ ನಿರತ ನೌಕರರ ಬಳಿ ಬರಲಿದ್ದಾರೆ ಎನ್ನುವ ವಿಶ್ವಾಸ ಹೋರಾಟಗಾರರಲ್ಲಿತ್ತು. ಆದರೆ, ಸಚಿವರು ಕೊನೆಗೂ ಬರಲಿಲ್ಲ. ಇದಕ್ಕೂ ಆಕ್ರೋಶ ವ್ಯಕ್ತಪಡಿಸಿದ ನೌಕರರು, ಸಾರಿಗೆ ಸಚಿವರು ಸ್ಥಳಕ್ಕೆ ಆಗಮಿಸಲೇಬೇಕೆಂದು ಪಟ್ಟು ಹಿಡಿದಿದ್ದರು. ಸಚಿವರು ಲಿಖಿತರೂಪದ ಹೇಳಿಕೆಯನ್ನು ವೇದಿಕೆಯಲ್ಲಿ ಘೋಷಿಸಬೇಕು. ಅಲ್ಲಿಯ ತನಕ ಯಾವುದೇ ಕಾರಣಕ್ಕೂ ಪ್ರತಿಭಟನೆ ನಿಲ್ಲಿಸುವುದಿಲ್ಲವೆಂದು ಘೋಷಣೆ ಕೂಗಿದರು.

ನಿಮ್ಮ ವಾದ ನೂರಕ್ಕೆ ನೂರು ಸರಿ ಇದೆ. ಆದರೆ, ನಮ್ಮ ಮೊದಲ ಬೇಡಿಕೆ ಸರಕಾರಿ ನೌಕರ ಎಂದು ಪರಿಗಣಿಸುವುದು. ಈ ಇದರಿಂದ ಹಿಂದೆ ಸರಿಯಲು ಸಾಧ್ಯವಿಲ್ಲ. ಇನ್ನು, ಆರನೇ ವೇತನ ಆಯೋಗವನ್ನು 2021ರ ಜನವರಿಯಲ್ಲಿ ಜಾರಿಗೊಳಿಸುವ ಭರವಸೆ ನೀಡಿದ್ದು, ಕಾನೂನಾತ್ಮಕವಾಗಿ ಎಲ್ಲವೂ ಸರಿಯಾಗಿ ಹೋಗುತ್ತಿದೆ.

-ಕೋಡಿಹಳ್ಳಿ ಚಂದ್ರಶೇಖರ್, ರೈತ ಮುಖಂಡ

ಸೂಟ್‍ಕೇಸ್ ಪಡೆದಿಲ್ಲ

ಯಾವುದೇ ಭಯ ಅಥವಾ ಸೂಟ್‍ಕೇಸ್ ಪಡೆದುಕೊಂಡು ಮುಷ್ಕರ ಹಿಂಪಡೆಯುವ ಚಿಂತನೆ ಮಾಡಿಲ್ಲ. ಸಾರಿಗೆ ಸಚಿವರು ತಾವು ನೀಡಿದ ಭರವಸೆಗಳನ್ನು ಲಿಖಿತರೂಪದಲ್ಲಿ ಕೊಡಬೇಕು. ಅಲ್ಲಿವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ.

-ಆರ್.ಚಂದ್ರಶೇಖರ್, ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ

ಮತ್ತೆ ಬಸ್‍ಗಳ ಮೇಲೆ ಕಲ್ಲು ತೂರಾಟ

ಸಾರಿಗೆ ಸಂಸ್ಥೆಗಳ ನೌಕರರ ಪ್ರತಿಭಟನೆ ನಡುವೆ ಸಂಚಾರ ಆರಂಭಿಸಿದ ಹಿನ್ನೆಲೆ ಎರಡಕ್ಕೂ ಅಧಿಕ ಬಸ್‍ಗಳ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದಕ್ಕೆ ದುಷ್ಕರ್ಮಿಗಳು ಸೋಮವಾರ ಬೆಳಗ್ಗೆ ಕಲ್ಲು ತೂರಾಟ ನಡೆಸಿದ್ದಾರೆ. ಅದೇ ರೀತಿ, ಕಲ್ಬುರ್ಗಿಯಿಂದ ಬೀದರ್ ಗೆ ಬರುತ್ತಿದ್ದ ಬಸ್‍ಗೆ ಶಿವನಗರದ ಬರೀದ್‍ಶಾಹಿ ಗಾರ್ಡನ್ ಬಳಿ ಕಲ್ಲುತೂರಾಟ ನಡೆಸಿರುವುದಾಗಿ ತಿಳಿದುಬಂದಿದೆ.

ನಿಟ್ಟುಸಿರು ಬಿಟ್ಟ ಪ್ರಯಾಣಿಕರು

ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರ ಕೊನೆಗೂ ಸೋಮವಾರ ಅಂತ್ಯ ಕಂಡ ಹಿನ್ನೆಲೆ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.

ಸರಕಾರಿ ಬಸ್ ಚಾಲಕರು ಮತ್ತು ನಿರ್ವಾಹಕರು ಆರಂಭಿಸಿದ್ದ ಮುಷ್ಕರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳು ನಿರ್ಮಾಣವಾದರೂ ಸೋಮವಾರ ಬೆಳಗ್ಗೆ ಕೆಲವು ಕಡೆಗಳಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ತದನಂತರ, ಮುಷ್ಕರ ಅಂತ್ಯವಾಗುತ್ತಿದ್ದಂತೆ ಸೋಮವಾರ ಸಂಜೆಯಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಸರಕಾರಿ ಬಸ್ಸುಗಳ ಸಂಚಾರ ವ್ಯವಸ್ಥೆಯು ಸಹಜ ಸ್ಥಿತಿಯತ್ತ ಮರಳಿತು. ಇನ್ನು, ಶೇಕಡ 45ರಷ್ಟು ನೌಕರರು ಕರ್ತವ್ಯಕ್ಕೆ ವಾಪಸ್ಸು ಆಗಿದ್ದು, ಬಹುತೇಕ ಕಡೆಗಳಲ್ಲಿ ಮಂಗಳವಾರದಿಂದ ವೇಳಾಪಟ್ಟಿಯಂತೆ ಬಸ್ಸುಗಳು ಸಂಚರಿಸಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X