Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಾವುದೇ ಶಾಲೆಗೆ ಮಕ್ಕಳ ಮರು ದಾಖಲಾತಿ...

ಯಾವುದೇ ಶಾಲೆಗೆ ಮಕ್ಕಳ ಮರು ದಾಖಲಾತಿ ಕಡ್ಡಾಯ: ಸಚಿವ ಸುರೇಶ್‍ ಕುಮಾರ್

ವಾರ್ತಾಭಾರತಿವಾರ್ತಾಭಾರತಿ14 Dec 2020 7:34 PM IST
share
ಯಾವುದೇ ಶಾಲೆಗೆ ಮಕ್ಕಳ ಮರು ದಾಖಲಾತಿ ಕಡ್ಡಾಯ: ಸಚಿವ ಸುರೇಶ್‍ ಕುಮಾರ್

ಬೆಂಗಳೂರು, ಡಿ.14: ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಪೋಷಕರ ಕರ್ತವ್ಯವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡಲು ಮುಂದಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸೋಮವಾರ ರಾಜ್ಯದ ವಿವಿಧ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳೊಂದಿಗೆ ಶಾಲಾ ಮಂಡಳಿಗಳು, ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಉಪಕ್ರಮಗಳ ಕುರಿತು ಚರ್ಚಿಸಿದ ಅವರು, ಪೋಷಕರು ತಮ್ಮ ಮಕ್ಕಳನ್ನು ತಮ್ಮ ಮಕ್ಕಳು ಓದಿದ ಶಾಲೆ ಇಲ್ಲವೇ ತಮಗೆ ಅನುಕೂಲವಾದ ಶಾಲೆಗಳಲ್ಲಿ ಮರು ದಾಖಲಾತಿಗೊಳಿಸಲು ಕ್ರಮ ವಹಿಸಬೇಕೆಂದರು.

ಕೋವಿಡ್ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಮುಂದಿನ ತರಗತಿಗೆ ದಾಖಲಾತಿ ಮಾಡದೇ ಇರುವುದು ಪರಿಹಾರವಾಗುವುದಿಲ್ಲ. ಇದು ಮಕ್ಕಳ ಹಕ್ಕಿನ ಕಸಿತವೂ ಆಗುತ್ತದೆ. ತಮ್ಮ ಮಕ್ಕಳನ್ನು ಮರುದಾಖಲಾತಿ ಮಾಡುವುದರಿಂದ ರಾಜ್ಯದ ಶಾಲೆಗಳಲ್ಲಿ ತರಗತಿವಾರು ಮಕ್ಕಳ ದಾಖಲಾತಿ ಸಂಖ್ಯೆ ಲೆಕ್ಕಕ್ಕೆ ದೊರೆಯಲಿದ್ದು, ಅದು ಮುಂದಿನ ತರಗತಿಗಳಿಗೆ ಮಕ್ಕಳನ್ನು ಉತ್ತೀರ್ಣಗೊಳಿಸಲು ಅನುವಾಗಲಿದೆ. ಮಕ್ಕಳ ಮರು ದಾಖಲಾತಿಗೆ ಎರಡು ಬಾರಿ ಸಮಯ ವಿಸ್ತರಿಸಲಾಗಿತ್ತು. ಆದರೂ ಕೆಲ ಪೋಷಕರು ತಮ್ಮ ಮಕ್ಕಳನ್ನು ಮುಂದಿನ ತರಗತಿಗಳಿಗೆ ಇನ್ನೂ ಮರು ದಾಖಲಾತಿ ಮಾಡದಿರುವುದಕ್ಕೆ ಕೋವಿಡ್ ಸಾಂಕ್ರಾಮಿಕ ಒಂದು ನೆಪವಾಗಬಾರದು ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ಮಕ್ಕಳ ಹಿತದೃಷ್ಟಿಯಿಂದ ಶಾಲಾ ಶುಲ್ಕ ಹೆಚ್ಚಳ ಮಾಡದಿರುವ ಮತ್ತು ಸಾಧ್ಯವಾದಷ್ಟು ಶುಲ್ಕ ಇಳಿಸುವಂತಹ ಮತ್ತು ಶುಲ್ಕ ಪಾವತಿಸಲು ಕಂತುಗಳನ್ನು ನೀಡುವಂತಹುದು ಸೇರಿದಂತೆ ಮಾನವೀಯ ನಿಲುವುಗಳನ್ನು ಕೈಗೊಳ್ಳಲು ಹಿಂಜರಿಯಬಾರದು. ಶಾಲಾ ಶುಲ್ಕ ನಿಗದಿ ವಿಚಾರದಲ್ಲಿ ಮಕ್ಕಳ ಪೋಷಕರೊಂದಿಗೆ ಚರ್ಚಿಸಿ ಶಾಲಾ ಸಂಘಟನೆಗಳು ಅವರ ವಿಶ್ವಾಸವನ್ನೂ ಪಡೆದುಕೊಂಡು ಶೀಘ್ರ ಒಂದು ನಿರ್ಧಾರಕ್ಕೆ ಬಂದು ಸರಕಾರಕ್ಕೆ ತಿಳಿಸಿದಲ್ಲಿ ಈ ಸಂಬಂಧ ಶಾಲಾ ಶುಲ್ಕ ನಿಗದಿ ಕುರಿತಂತೆ ಸರಕಾರವು ಒಂದು ನಿರ್ಧಾರಕ್ಕೆ ಬರಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು.

ಕೋವಿಡ್ ಸಮಸ್ಯೆ ಪ್ರತಿಯೊಬ್ಬರ ಜೀವನದ ಮೇಲೂ ತನ್ನದೇ ಆದ ರೀತಿಯ ಪರಿಣಾಮ ಬೀರಿದೆ. ಅದು ಮಕ್ಕಳ ಪೋಷಕರಿಗೆ ಆಗಿರುವಂತೆಯೇ ಶಾಲೆಗಳ ಮೇಲೂ ಆಗಿದೆ. ಇದು ಶಾಲೆ-ಮಕ್ಕಳು ಮಾತ್ರವೇ ಅಲ್ಲ, ದೇಶದ ಜನರ ಜೀವ ಮತ್ತು ಜೀವನದ ಮೇಲೆ ಸಾರ್ವತ್ರಿಕವಾದ ದುಷ್ಪರಿಣಾಮವನ್ನುಂಟು ಮಾಡಿರುವುದರಿಂದ ಪ್ರತಿಯೊಬ್ಬರೂ ಈ ಪರಿಸ್ಥಿತಿಯಲ್ಲಿ ಸಹ್ಯವಾದ ನಿರ್ಧಾರಗಳನ್ನೇ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಅವರು ಹೇಳಿದರು.

ಕೊರೋನ ಸಾಂಕ್ರಾಮಿಕ ರೋಗದ ಪರಿಣಾಮದಿಂದ ಇನ್ನೂ ಶಾಲೆಗಳನ್ನು ತೆರೆಯಲಾಗಿಲ್ಲ. ಖಾಸಗಿ ಸಂಸ್ಥೆಗಳು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದು, ಅವರ ಸೇವೆಯ ಕುರಿತು ಸರಕಾರಕ್ಕೆ ಗೌರವವಿದೆ. ಹಾಗೆಯೇ ನಮ್ಮ ಮಕ್ಕಳೂ ಬಹುಕಾಲ ಶಾಲೆಯಿಂದ ದೂರ ಉಳಿದಿರುವುದರಿಂದ ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ. ಇಂತಹ ಸಂಕಷ್ಟದ ಕಾಲದಲ್ಲಿ ಎಲ್ಲರೂ ತಮ್ಮ ತಮ್ಮ ಅನುಕೂಲಗಳತ್ತಲೇ ಗಮನಹರಿಸದೇ ಮಕ್ಕಳ ಹಿತದೃಷ್ಟಿಯಿಂದ ಆಡಳಿತ ಮಂಡಳಿಗಳು ಮತ್ತು ಪೋಷಕರು ತಮ್ಮ ಕೈಲಾದಷ್ಟು ತ್ಯಾಗಕ್ಕೆ ಮುಂದಾಗುವುದು ಒಳ್ಳೆಯದು ಎಂದರು.

ರಾಷ್ಟ್ರದ ಮತ್ತು ಸಮಾಜದ ಹಿತದೃಷ್ಟಿಯಿಂದ ಎಲ್ಲರಿಗೂ ತಮ್ಮ ಮಕ್ಕಳ ಹಿತವೇ ಮುಖ್ಯವಾಗಬೇಕು.  ನಾವೆಲ್ಲರೂ ಆ ದೃಷ್ಟಿಯಿಂದ ಇಂದಿನ ಪರಿಸ್ಥಿತಿಯನ್ನು ಮನಗಾಣಬೇಕು. ಶಾಲಾಡಳಿತ ಮಂಡಳಿಗಳು ಶಿಕ್ಷಣ ಕಾಯ್ದೆಯಡಿ ತಮ್ಮ ಶಾಲೆಗಳಲ್ಲಿ ಪೋಷಕರ ಪ್ರತಿನಿಧಿಗಳನ್ನೊಳಗೊಂಡ ಶಾಲಾ ಸಲಹಾ ಸಮಿತಿಗಳನ್ನು ರಚಿಸಿಕೊಂಡು ಸೌಹಾರ್ದದ ವಾತಾವರಣದಲ್ಲಿ ಚರ್ಚಿಸಿ ಪರಸ್ಪರ ಹೊಂದಾಣಿಕೆಯ ಸೂತ್ರದೊಂದಿಗೆ ಬಂದಲ್ಲಿ ಸರಕಾರ ಒಂದು ನಿರ್ಧಾರಕ್ಕೆ ಬರಲು ಸುಲಭವಾಗುತ್ತದೆ ಎಂದು ಅವರು ಹೇಳಿದರು.

ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ಆರೋಗ್ಯ ಇಲಾಖೆಯೊಂದಿಗೆ ಶಾಲೆಗಳನ್ನು ತೆರೆಯುವ ಸಂಬಂಧದಲ್ಲಿ ಶೀಘ್ರವೆ ಚರ್ಚೆ ನಡೆಸಲಾಗುವುದು. ಕೋವಿಡ್ ನಿಯಮಗಳನ್ನು ಪಾಲಿಸಿ 10ರಿಂದ 12ನೇ ತರಗತಿಗಳನ್ನು ಆರಂಭಿಸುವ ದೃಷ್ಟಿಯಿಂದ ಮುಖ್ಯಮಂತ್ರಿಗಳೊಂದಿಗೆ ಶೀಘ್ರದಲ್ಲೇ ವಿವಿಧ ಇಲಾಖೆಗಳ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುರೇಶ್‍ ಕುಮಾರ್ ಹೇಳಿದರು.

ಅನುದಾನ ರಹಿತ ಶಾಲಾ ಸಂಸ್ಥೆಗಳಿಗೆ ಅನುಷ್ಠಾನಯೋಗ್ಯ ರಿಯಾಯ್ತಿಗಳನ್ನು ವಿಸ್ತರಿಸುವ ಸಂಬಂಧದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸರಕಾರ ಸೂಕ್ತ ಕ್ರಮವಹಿಸಲಿದೆ ಎಂದೂ ಅವರು ತಿಳಿಸಿದರು.

ಸಭೆಯಲ್ಲಿ ವಿವಿಧ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಮುಖ್ಯಸ್ಥರು, ಪ್ರಾಚಾರ್ಯರು, ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X