Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2 ಸಾವಿರ ಇಎಸ್‍ಡಿಎಂ ನವೋದ್ಯಮಗಳ ಸ್ಥಾಪನೆ...

2 ಸಾವಿರ ಇಎಸ್‍ಡಿಎಂ ನವೋದ್ಯಮಗಳ ಸ್ಥಾಪನೆ ಗುರಿ: ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ

ತಾಂತ್ರಿಕ ನಾವೀನ್ಯತೆಗಾಗಿ ಐಇಎಸ್‍ಎ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ14 Dec 2020 7:38 PM IST
share
2 ಸಾವಿರ ಇಎಸ್‍ಡಿಎಂ ನವೋದ್ಯಮಗಳ ಸ್ಥಾಪನೆ ಗುರಿ: ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಡಿ. 14: ಎಲೆಕ್ಟ್ರಾನಿಕ್ಸ್ ವ್ಯವಸ್ಥೆ ವಿನ್ಯಾಸ ಮತ್ತು ತಯಾರಿಕೆ(ಇಎಸ್‍ಡಿಎಂ) ವಲಯದಲ್ಲಿ 2022ರ ವೇಳೆಗೆ ಸುಮಾರು 2 ಸಾವಿರ ನವೋದ್ಯಮಗಳ ಸ್ಥಾಪನೆ ಹಾಗೂ 2025ರ ವೇಳೆಗೆ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ಸೋಮವಾರ ಇಎಸ್‍ಡಿಎಂ ವಲಯದಲ್ಲಿ ನಾವೀನ್ಯತೆ ಉತ್ತೇಜಿಸುವ ಸಲುವಾಗಿ ಭಾರತೀಯ ವಿದ್ಯುನ್ಮಾನ ಅರೆವಾಹಕ ಸಂಸ್ಥೆ(ಐಇಎಸ್‍ಎ) ನೀಡುವ ಪ್ರಶಸ್ತಿ ಪ್ರದಾನ ವರ್ಚುವಲ್ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೌಶಲಾಭಿವೃದ್ಧಿ, ಗುಣಮಟ್ಟದ ಮೂಲಸೌಕರ್ಯ, ನವೋದ್ಯಮಗಳಿಗೆ ಉತ್ತೇಜನ ಹಾಗೂ ಸುಗಮ ವ್ಯವಹಾರಕ್ಕೆ ಅನುವು ಮಾಡಿಕೊಡುವ ಮೂಲಕ ನಿಗದಿತ ಗುರಿ ಸಾಧಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತದಲ್ಲಿ ಇಎಸ್‍ಡಿಎಂ ವಲಯವು ತ್ವರಿತವಾಗಿ ಬೆಳವಣಿಗೆ ಹೊಂದುತ್ತಿದೆ. ಇದು ದೇಶದ ಆರ್ಥಿಕತೆಯ ಪುನಶ್ಚೇತನದಲ್ಲಿ ಮಹತ್ವದ ಪಾತ್ರವಹಿಸಲು ಅಪಾರ ಅವಕಾಶಗಳನ್ನು ಹೊಂದಿದೆ. ಇದನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಸರಕಾರವು ಈ ಉದ್ಯಮವನ್ನು ಪ್ರೋತ್ಸಾಹಿಸುವ ಕಾರ್ಯನೀತಿ ಜಾರಿಗೊಳಿಸಿದೆ ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದರು.

ಈಗ ಭಾರತದ ಇಎಸ್‍ಡಿಎಂ ರಫ್ತಿನಲ್ಲಿ ಶೇ.64ರಷ್ಟು ಕರ್ನಾಟಕದ ಕೊಡುಗೆಯಾಗಿದೆ. ಜೊತೆಗೆ ಕರ್ನಾಟಕವು ದೇಶದ ಅತ್ಯಂತ ದೊಡ್ಡ ಚಿಪ್ ವಿನ್ಯಾಸ ವಲಯವಾಗಿದೆ. ದೇಶದ ಶೇ.70ರಷ್ಟು ಚಿಪ್ ವಿನ್ಯಾಸಕರು ರಾಜ್ಯದಲ್ಲಿ ಉದ್ಯಮನಿರತರಾಗಿದ್ದಾರೆ ಎಂದ ಅವರು, ಇಎಸ್‍ಡಿಎಂ ವಲಯಕ್ಕೆ ಪ್ರೋತ್ಸಾಹಕರವಾದಂತಹ ಕಾರ್ಯನೀತಿಯನ್ನು ರಾಜ್ಯ ಹೊಂದಿದೆ. ಜೊತೆಗೆ, ನವೋದ್ಯಮಗಳ ಸ್ಥಾಪನೆಗೆ ಹಲವು ವಿನಾಯಿತಿಗಳನ್ನು ಹಾಗೂ ಪ್ರೋತ್ಸಾಹಕಗಳನ್ನು ನೀಡಲಾಗುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X