ಉಡುಪಿಯಲ್ಲಿ ಸರಕಾರಿ ಬಸ್ ಸಂಚಾರ ಆರಂಭ

ಉಡುಪಿ, ಡಿ.14: ಸಾರಿಗೆ ನೌಕರರ ಮುಷ್ಕರ ವಾಪಾಸ್ ಪಡೆದಿರುವ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದ ಉಡುಪಿ ಜಿಲ್ಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭಗೊಂಡಿತು.
ಮುಷ್ಕರದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ಕೇವಲ ನಾಲ್ಕು ಬಸ್‌ಗಳು ಮಾತ್ರ ಓಡಾಟ ನಡೆಸಿವೆ. ಉಳಿದ ಯಾವುದೇ ಬಸ್‌ಗಳು ರಸ್ತೆಗೆ ಇಳಿಯದೆ ಮುಷ್ಕರದಲ್ಲಿ ಪಾಲ್ಗೊಂಡಿದ್ದವು. ಬೆಳಗ್ಗೆ ಕಾರ್ಕಳ, ಹುಬ್ಬಳ್ಳಿ ಹೊರತು ಪಡಿಸಿ ಉಳಿದ ಯಾವುದೇ ಮಾರ್ಗಗಳಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರ ನಡೆಸಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ಇದರಿಂದ ಉಡುಪಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ದೂರದ ಊರಿಗೆ ಪ್ರಯಾಣಿಸಬೇಕಾಗಿದ್ದ ಪ್ರಯಾಣಿಕರು ತೊಂದರೆ ಅನುಭವಿಸಿದರು. ಬೆಳ್ತಂಗಡಿ, ಹುಬ್ಬಳ್ಳಿ ಸೇರಿದಂತೆ ಹೊರ ಜಿಲ್ಲೆಗಳಿಗೆ ಹೋಗುವ ಪ್ರಯಾಣಿಕರು ಹಲವು ಸಮಯಗಳಿಂದ ಬಸ್‌ಗಾಗಿ ಕಾಯುತ್ತಿರುವ ದೃಶ್ಯ ಕಂಡುಬಂತು. ನೌಕರರು ಮುಷ್ಕರ ಹಿಂಪಡೆಯುತ್ತಿದ್ದಂತೆ ಸಂಜೆಯ ನಂತರ ಉಡುಪಿ ಯಿಂದ ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಗಳಿಗೆ ತೆರಳುವ ಬಸ್‌ಗಳು ಪ್ರಯಾಣ ಆರಂಭಿಸಿದವು.

Next Story







