Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ​‘ತುರ್ತುಸೇವೆ -112’...

ಮಂಗಳೂರು: ​‘ತುರ್ತುಸೇವೆ -112’ ಸಹಾಯವಾಣಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ14 Dec 2020 9:17 PM IST
share
ಮಂಗಳೂರು: ​‘ತುರ್ತುಸೇವೆ -112’ ಸಹಾಯವಾಣಿಗೆ ಚಾಲನೆ

ಮಂಗಳೂರು, ಡಿ.14: ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ತುರ್ತುಸೇವೆಗಾಗಿ ದೇಶದಾದ್ಯಂತ ಜಾರಿಗೊಳ್ಳುತ್ತಿರುವ 112 ತುರ್ತು ಸಹಾಯವಾಣಿ ಸೇವೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿಯೂ ಚಾಲನೆ ನೀಡಲಾಗಿದೆ.

ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸೋಮವಾರ ತಮ್ಮ ಕಚೇರಿ ಎದುರು 112 ತುರ್ತು ಸೇವೆ ಸಹಾಯವಾಣಿಗೆ ನಿಯೋಜನೆಗೊಂಡಿರುವ 19 ವಾಹನಗಳಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ದೇಶಾದ್ಯಂತ ಒಂದೇ ತುರ್ತು ಕರೆ ಸಂಖ್ಯೆ ‘112’ ಜಾರಿಗೊಳ್ಳುತ್ತಿದೆ. ಅದರಂತೆ ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿಯೂ ಈ ಸೇವೆಗೆ ಚಾಲನೆ ನೀಡಲಾಗಿದೆ. ರವಿವಾರದಂದೇ ಸೇವೆ ಆರಂಭಗೊಂಡಿತ್ತು. ಸೋಮವಾರ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ರವಿವಾರ ತುರ್ತು ಸೇವೆಗೆ 24 ಕರೆಗಳು ಬಂದಿದ್ದು ತುರ್ತಾಗಿ ಸ್ಪಂದಿಸಲಾಗಿದೆ ಎಂದು ಆಯುಕ್ತ ವಿಕಾಸ್ ಕುಮಾರ್ ತಿಳಿಸಿದರು.

ತುರ್ತುಸಂದರ್ಭಗಳಿಗೆ 100ಗೆ ಕರೆ ಮಾಡಿದರೆ ಸೇವೆ ದೊರೆಯುತ್ತಿತ್ತು. ಮುಂದೆ 112ಗೆ ಕರೆ ಮಾಡಿದರೆ ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ತುರ್ತು ಸೇವೆಗಳು ದೊರೆಯಲಿವೆ. 100ಕ್ಕೆ ಕರೆ ಮಾಡಿದರೂ ಇದು 112 ಸಂಖ್ಯೆಗೆ ಸಂಪರ್ಕಗೊಂಡು ಸೇವೆ ದೊರೆಯುತ್ತದೆ ಎಂದರು.
ಅತ್ಯಂತ ಕಡಿಮೆ ಅವಧಿಯಲ್ಲಿ ಸೇವೆ ಒದಗಿಸುವುದು ಇದರ ಉದ್ದೇಶ. ಯಾವುದೇ ತುರ್ತು ಸಂದರ್ಭದಲ್ಲಿ ಕರೆ ಮಾಡಿದಾಗ ಬೆಂಗಳೂರಿನಲ್ಲಿರುವ ನಿಯಂತ್ರಣ ಕೊಠಡಿಗೆ ಮಾಹಿತಿ ಹೋಗಿ ಅಲ್ಲಿಂದ ಜಿಪಿಎಸ್ ಆಧಾರದಲ್ಲಿ ಸಹಾಯ ಬೇಕಿರುವ ಪ್ರದೇಶದಲ್ಲಿರುವ ಸಹಾಯವಾಣಿ ವಾಹನ/ ಪೊಲೀಸ್ ತಂಡಕ್ಕೆ ತಕ್ಷಣ ಮಾಹಿತಿ ರವಾನೆಯಾಗುತ್ತದೆ. ಅಗ್ನಿಶಾಮಕ ಮತ್ತಿತರ ವಿಪತ್ತು ನಿರ್ವಹಣಾ ತಂಡಗಳಿಗೆ ಸಂಬಂಧಿಸಿದ ಮಾಹಿತಿ ಕೂಡ ಕೂಡಲೇ ಆಯಾ ವಿಭಾಗಗಳಿಗೆ ಹೋಗುತ್ತದೆ. ಸ್ಥಳೀಯ ಪೊಲೀಸ್ ಠಾಣೆಗೂ ಮಾಹಿತಿ ರವಾನೆಯಾಗುತ್ತದೆ ಎಂದು ಆಯುಕ್ತರು ಮಾಹಿತಿ ನೀಡಿದರು.

ತುರ್ತುಸೇವೆಯು ದಿನದ 24 ಗಂಟೆಯೂ ದೊರೆಯಲಿದ್ದು, ಸಿಬ್ಬಂದಿ ಪಾಳಿಯಲ್ಲಿ ಕೆಲಸ ಮಾಡಲಿದ್ದಾರೆ. ಗರಿಷ್ಠ 15ರಿಂದ 30 ನಿಮಿಷಗಳೊಳಗೆ ಸೇವೆ ಒದಗಿಸುವುದು ಇದರ ಉದ್ದೇಶ. ಸ್ಥಳ ಸಮೀಪದಲ್ಲಿದ್ದರೆ ಹೆಚ್ಚು ಬೇಗನೆ ಸೇವೆ ದೊರೆಯಲಿದೆ ಎಂದು ವಿಕಾಸ್ ಕುಮಾರ್ ತಿಳಿಸಿದರು.
ತುರ್ತು ಸೇವೆಗೆ ನಿಯೋಜನೆಗೊಂಡ 19 ವಾಹನಗಳು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರ್ಯಾಲಿ ನಡೆಸಿದವು. ಡಿಸಿಪಿಗಳಾದ ವಿನಯ ಗಾಂವ್ಕರ್, ಹರಿರಾಮ್ ಶಂಕರ್, ಸಂಚಾರ ವಿಭಾಗದ ಎಸಿಪಿಗಳಾದ ಎಂ.ಎ. ನಟರಾಜ್, ಉಪಾಸೆ, ಇನ್‌ಸ್ಪೆಕ್ಟರ್ ರಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X