ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ರೈತರಿಗೆ ಪೊಲೀಸರ ಚಿತ್ರಹಿಂಸೆ: ಭಾರತೀಯ ಕಿಸಾನ್ ಯೂನಿಯನ್ ಆರೋಪ
ಗಾಝಿಯಾಬಾದ್, ಡಿ.15: ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪೊಲೀಸರು ರೈತರಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಗಂಭೀರ ಆರೋಪ ಮಾಡಿದ್ದಾರೆ. ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದನ್ನು ತಡೆಯಲು ಅವರ ಟ್ರ್ಯಾಕ್ಟರ್ ಟ್ರಾಲಿಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಅವರು ಆಪಾದಿಸಿದ್ದಾರೆ.
ಈ ಎರಡು ರಾಜ್ಯಗಳ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿದ್ದರೆ, ಗಾಝಿಯಾಪುರ ಗಡಿಯನ್ನು ತಡೆಯುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ದಿಲ್ಲಿಯ ವಿವಿಧ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
"ರಾಜ್ಯ ಸರಕಾರಗಳು ನಮ್ಮ ಪ್ರತಿಭಟನೆಯಲ್ಲಿ ಹಸ್ತಕ್ಷೇಪ ಮಾಡಬಾರದು. ನಮ್ಮ ಪ್ರತಿಭಟನೆ ಕಾಯ್ದೆಗಳನ್ನು ರದ್ದುಪಡಿಸುವರೆಗೂ ಮುಂದುವರಿಯಲಿದ್ದು, ಅದನ್ನು ತಡೆಯುವ ಪ್ರಯತ್ನ ಮಾಡಬಾರದು" ಎಂದು ಎಚ್ಚರಿಕೆ ನೀಡಿದರು.
Next Story