ನಕಲಿ ಪಿಸ್ತೂಲಿನಿಂದ ಬೆದರಿಸಿ ಹಣ ದರೋಡೆ: ಇಬ್ಬರ ಬಂಧನ

ಬೆಂಗಳೂರು, ಡಿ.15: ವ್ಯಕ್ತಿಯೊಬ್ಬರಿಗೆ ನಕಲಿ ಪಿಸ್ತೂಲು ತೋರಿಸಿ ಹಣ ಕಸಿದುಕೊಂಡು ಪರಾರಿಯಾಗಿದ್ದ ಆರೋಪ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಇಲ್ಲಿನ ಕೆಂಗೇರಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ರವಿ ಮತ್ತು ರಾಜು ಬಂಧಿತ ಆರೋಪಿಗಳಾಗಿದ್ದು, ಇವರಿಂದ 60 ಸಾವಿರ ರೂ. ನಗದು, ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್ ಮಾದರಿಯ ಲೈಟರ್ ಹಾಗೂ ಬೈಕ್‍ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಡಿ.2ರಂದು ಬೆಳಗ್ಗೆ 11 ಗಂಟೆಗೆ ಕಂಪೆನಿಯ ಉದ್ಯೋಗಿಯೊಬ್ಬರಿಂದ ಆರೋಪಿಗಳು ಪಿಸ್ತೂಲು ತೋರಿಸಿ 79,920 ರೂ.ಗಳನ್ನು ದರೋಡೆ ಮಾಡಿದ್ದರು. ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನನ್ವಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
Next Story





