Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಶಿಷ್ಯವೇತನ...

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಶಿಷ್ಯವೇತನ ಶೀಘ್ರ ಬಿಡುಗಡೆಗೊಳಿಸಿ: ಎನ್.ಮಂಜುಳಾ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 Dec 2020 7:42 PM IST
share

ಬೆಂಗಳೂರು, ಡಿ. 15: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶಿಷ್ಯವೇತನವನ್ನು ಶೀಘ್ರವಾಗಿ ನೀಡುವುದರ ಕುರಿತು ವಿಶೇಷ ಗಮನಹರಿಸಬೇಕೆಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಬೆಂ.ನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುಳಾ ಸೂಚಿಸಿದ್ದಾರೆ.

ಮಂಗಳವಾರ ಬೆಂಗಳೂರು ನಗರ ಜಿಲ್ಲೆಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಬೆಳಕು ಭವನ ಸಭಾಂಗಣದಲ್ಲಿ ಕಂದಾಯ ಇಲಾಖೆ ಮತ್ತು ಜಿ.ಪಂ.ವ್ಯಾಪ್ತಿಯ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯಗಳು ಪುನರಾರಂಭಗೊಳ್ಳಲಿದ್ದು, ಕೋವಿಡ್-19 ಪ್ರಭಾವ ಹೆಚ್ಚಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಮಾಜಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಕಂದಾಯ ಇಲಾಖೆಯಲ್ಲಿರುವ ಆನ್‍ಲೈನ್ ಸೇವೆಗಳಾದ ಗ್ರಾಮವಾರು ಮುಟೇಶನ್ ಪ್ರಕ್ರಿಯೆಯಲ್ಲಿರುವ ಸರ್ವೇ ನಂಬರ್ ವಹಿವಾಟು ವಿವರ ಹಾಗೂ ಭೂಮಿ ವರ್ಗಾವಣೆ ಸಂಬಂಧ ಬರುವ ಅರ್ಜಿಗಳನ್ನು 30 ದಿನಗಳೊಳಗೆ ಬಗೆಹರಿಸಬೇಕೆಂದ ಅವರು, ಸಕಾಲ ಸೇವೆಯಡಿ ಬರುವ 98 ಇಲಾಖೆಗಳ 1,025 ಸೇವೆಗಳಲ್ಲಿ ಬರುವ ಸಾರ್ವಜನಿಕರ ಅರ್ಜಿ ಅಹವಾಲುಗಳನ್ನು ನಿಗದಿತ ಕಾಲಮಿತಿಯಲ್ಲಿ ಶೀಘ್ರವಾಗಿ ವಿಲೇವಾರಿ ಮಾಡಬೇಕು ಎಂದು ಸಕಾಲ ಮಿಷನ್‍ಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತಿರುವ ವಿದ್ಯಾರ್ಥಿವೇತನ, ಸಂಧ್ಯಾ ಸುರಕ್ಷಾ ವೇತನ, ಅಂಗವಿಕಲರ ಪಿಂಚಣಿ, ಮನಸ್ವಿ, ಮೈತ್ರಿ ಯೋಜನೆಗಳಲ್ಲಿ 600 ರೂ.ನಿಂದ 1,500 ರೂ.ವರೆಗೆ ಪಿಂಚಣಿ ಸೌಲಭ್ಯ ನೀಡಲಾಗುತ್ತಿದ್ದು, ಈ ಪಿಂಚಣಿಯನ್ನು ನಿಗದಿತ ಅವಧಿಯೊಳಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಮಕ್ಕಳಲ್ಲಿ ಶೈಕ್ಷಣಿಕ ಸಾಧನೆ ತರಲು ಆನ್‍ಲೈನ್ ತರಗತಿಗಳನ್ನು ಆರಂಭಿಸಿ ಪಠ್ಯಕ್ರಮಗಳನ್ನು ಮೌಲ್ಯಮಾಪನ ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದ ಅವರು, ಆರೋಗ್ಯ ಇಲಾಖೆ ವತಿಯಿಂದ ಮಕ್ಕಳಿಗೆ ನೀಡಲಾಗುವ ಲಸಿಕೆಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೀಡಲಾಗುತ್ತಿದ್ದು, ಮಾತೃಶ್ರೀ ಯೋಜನೆಯಡಿಯಲ್ಲಿ ತಾಯಂದಿರ ಪೋಷಣೆಗಾಗಿ 6 ಸಾವಿರ ರೂ.ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಈ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸಿ ಸಾರ್ವಜನಿಕರಿಗೆ ತಲುಪಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ಅಪರ ಜಿಲ್ಲಾಧಿಕಾರಿಗಳಾದ ಅನಿತಾಲಕ್ಷ್ಮಿ, ಮುಖ್ಯ ಕಾರ್ಯನಿವಾಹಕ ಅಧಿಕಾರಿ ಕೆ.ಶಿವರಾಮೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X