Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಐಟಿಯುನಿಂದ ಭೂಸೂಧಾರಣಾ ಕಾಯ್ದೆ...

ಸಿಐಟಿಯುನಿಂದ ಭೂಸೂಧಾರಣಾ ಕಾಯ್ದೆ ತಿದ್ದುಪಡಿ ಪ್ರತಿಗೆ ಬೆಂಕಿ

ಕಟ್ಟಡ ಕಾರ್ಮಿಕರ ಸಹಿತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ15 Dec 2020 8:05 PM IST
share
ಸಿಐಟಿಯುನಿಂದ ಭೂಸೂಧಾರಣಾ ಕಾಯ್ದೆ ತಿದ್ದುಪಡಿ ಪ್ರತಿಗೆ ಬೆಂಕಿ

ಉಡುಪಿ, ಡಿ.15: ಕಟ್ಟಡ ಕಾರ್ಮಿಕರ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವ ದಲ್ಲಿ ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸ ಲಾಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಕಾರ್ಮಿಕ ಕಲ್ಯಾಣ ಮಂಡಳಿಯು ಕಾರ್ಮಿಕರ ಅರ್ಜಿಗಳು ಸೇವಾ ಸಿಂಧುವಿನಲ್ಲಿ ಸಲ್ಲಿಸುವುದನ್ನು ಸ್ಥಗಿತಗೊಳಿಸಿದೆ. ಇದರಿಂದ ಸಮಸ್ಯೆಯಾಗಿ ಸಾಕಷ್ಟು ಅರ್ಜಿಗಳು ಬಾಕಿ ಉಳಿದಿವೆ. ಆದುದರಿಂದ ಅರ್ಜಿ ಅವಧಿ ವಿಸ್ತರಣೆ ಹಾಗೂ ಅಧಿಕಾರಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಮಂಡಳಿಯ ನಿಯಮ ಪ್ರಕಾರ ಎಲ್ಲ ಅರ್ಜಿಗಳು ಈ ಹಿಂದೆ ಇದ್ದ ಆರು ತಿಂಗಳ ಕಾಲ ಮಿತಿಯನ್ನು ಒಂದು ವರ್ಷದವರೆಗೆ ವಿಸ್ತರಿಸಬೇಕು. ಕೊರೋನಾ ಲಾಕ್‌ಡೌನ್ ಅವಧಿಯಲ್ಲಿ ಸರಕಾರ ಮಂಡಳಿ ಮೂಲಕ ಘೋಷಿಸಿದ 5000ರೂ. ಪರಿಹಾರ ಮೊತ್ತ ಕೆಲವು ಕಾರ್ಮಿಕರಿಗೆ ಜಮೆ ಯಾಗದೆ ಬಾಕಿ ಉಳಿದಿದ್ದು, ಈ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸರಕಾರ ಬಾಕಿ ಇರಿಸಿರುವ ಇಎಸ್‌ಐ ಹಣವನ್ನು ಕೂಡಲೇ ಪಾವತಿಸಿ ಕಾರ್ಮಿಕರಿಗೆ ಆಗುತ್ತಿರುವ ತೊಂದರೆ ಯನ್ನು ಪರಿಹರಿಸಬೇಕು. ಹಿಂದಿನ ವರ್ಷಕ್ಕೆ ಹೋಲಿಸಿದರೆ ಮರಳು ಸಮಸ್ಯೆ ಕಡಿಮೆ ಆದರೂ ನಿಗದಿಪಡಿಸಿರುವ ದರ ಹೆಚ್ಚಾಗಿದೆ. ಆದುದರಿಂದ ಇದನ್ನು ಕೂಡಲೇ ಸರಿಪಡಿಸೇಕು ಎಂದು ಅವರು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಸರಕಾರ ಅಂಗೀಕರಿಸಿದ ಭೂಸೂಧಾರಣಾ ಕಾಯಿದೆ ತಿದ್ದುಪಡಿ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು. ಬಳಿಕ ಜಿಲ್ಲಾಧಿಕಾರಿ ಜಿ.ಜಗದೀಶ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸ ಲಾಯಿತು.

ಧರಣಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಕುಂದಾಪುರ ತಾಲೂಕು ಅಧ್ಯಕ್ಷ ದಾಸ ಭಂಡಾರಿ, ಉಡುಪಿ ಜಿಲ್ಲಾ ಕೋಶಾಧಿಕಾರಿ ಗಣೇಶ್ ನಾಯಕ್, ಬೈಂದೂರು ತಾಲೂಕು ಕೋಶಾಧಿಕಾರಿ ರೋನಾಲ್ಡ್ ರಾಜೇಶ್ ಕ್ವಾಡ್ರಸ್, ಮುಖಂಡರಾದ ಬಲ್ಕೀಸ್, ಮಹಾಬಲ ವಡೇರಹೋಬಳಿ, ಕವಿ ರಾಜ್, ಭಾರತಿ, ಶಶಿಧರ ಗೊಲ್ಲ, ಸುಭಾಷ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X