Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ವಾಟ್ಸ್ಆ್ಯಪ್ ಪಾವತಿ ಸೇವೆಗೆ...

ಭಾರತದಲ್ಲಿ ವಾಟ್ಸ್ಆ್ಯಪ್ ಪಾವತಿ ಸೇವೆಗೆ ಹೆಚ್ಚು ಒತ್ತು ನೀಡಿದ ಫೇಸ್‌ಬುಕ್

ವಾರ್ತಾಭಾರತಿವಾರ್ತಾಭಾರತಿ15 Dec 2020 8:32 PM IST
share
ಭಾರತದಲ್ಲಿ ವಾಟ್ಸ್ಆ್ಯಪ್ ಪಾವತಿ ಸೇವೆಗೆ ಹೆಚ್ಚು ಒತ್ತು ನೀಡಿದ ಫೇಸ್‌ಬುಕ್

ಹೊಸದಿಲ್ಲಿ, ಡಿ.15: ಭಾರತದಲ್ಲಿ ವಾಟ್ಸ್ಆ್ಯಪ್ ಪಾವತಿ ಸೇವೆಗೆ ಹೆಚ್ಚು ಒತ್ತು ನೀಡಲು ಫೇಸ್‌ಬುಕ್ ಮುಂದಾಗಿರುವಂತೆಯೇ, ಭಾರತವು ಗಮನಾರ್ಹ ಉದ್ಯಮಶೀಲತೆ ಸಂಸ್ಕೃತಿಯನ್ನು ಹೊಂದಿರುವ ವಿಶೇಷ ಮತ್ತು ಪ್ರಮುಖ ದೇಶವಾಗಿದೆ ಎಂದು ಫೇಸ್‌ಬುಕ್ ಸಿಇಒ ಮಾರ್ಕ್ ಝಕರ್‌ಬರ್ಗ್ ಮಂಗಳವಾರ ಹೇಳಿದ್ದಾರೆ.

ಭಾರತದಲ್ಲಿ ಪಾವತಿ ಸೇವೆ ಆರಂಭಿಸಲು ಫೇಸ್‌ಬುಕ್ ಮಾಲಕತ್ವದ ವಾಟ್ಸ್ಆ್ಯಪ್ ಸಲ್ಲಿಸಿದ್ದ ಪ್ರಸ್ತಾವನೆಗೆ ಕಳೆದ ತಿಂಗಳು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ(ಎನ್‌ಪಿಸಿಐ) ಅನುಮೋದನೆ ನೀಡಿದೆ. 2018ರಲ್ಲಿ ಭಾರತದಲ್ಲಿ ಯುಪಿಐ ಆಧಾರಿತ ಪಾವತಿ ಸೇವೆಯನ್ನು ವಾಟ್ಸ್ಆ್ಯಪ್ ಪ್ರಾಯೋಗಿಕವಾಗಿ ಆರಂಭಿಸಿತ್ತು. ವಿವಿಧ ಆ್ಯಪ್‌ಗಳ ಮೂಲಕ ತಕ್ಷಣ ಪಾವತಿಯನ್ನು ಸ್ವೀಕರಿಸಲು ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್(ಯುಪಿಐ) ವ್ಯವಸ್ಥೆ ಅನುಕೂಲವಾಗಿದೆ. ನಾವು ಭಾರತದಲ್ಲಿ ಕಳೆದ ತಿಂಗಳಷ್ಟೇ ವಾಟ್ಸ್ಆ್ಯಪ್ ಪಾವತಿಯನ್ನು ಆರಂಭಿಸಿದ್ದು ಈಗ ನೀವು ಸಂದೇಶ ರವಾನಿಸಿದಷ್ಟೇ ಸುಲಭವಾಗಿ ನಿಮ್ಮ ಮಿತ್ರರಿಗೆ ಮತ್ತು ಕುಟುಂಬದವರಿಗೆ ವಾಟ್ಸ್ಆ್ಯಪ್ ಮೂಲಕ ಪಾವತಿ ರವಾನಿಸಬಹುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಜತೆ ನಡೆಸಿದ ಅನೌಪಚಾರಿಕ ಸಂವಾದದ ಸಂದರ್ಭ ಝಕರ್‌ಬರ್ಗ್ ಹೇಳಿದ್ದಾರೆ.

ದೇಶದಲ್ಲಿ ಸಂಪರ್ಕ ವ್ಯವಸ್ಥೆ ಎಲ್ಲರಿಗೂ ಕೈಗೆಟಕುವಂತಾಗಬೇಕು ಎಂಬ ದಿವಂಗತ ಧೀರೂಭಾಯ್ ಅಂಬಾನಿಯವರ ಪರಿಕಲ್ಪನೆಯನ್ನು ಸ್ಮರಿಸಿಕೊಂಡ ಝಕರ್‌ಬರ್ಗ್, ಈಗ ಭಾರತೀಯರು ಪೋಸ್ಟ್ ಕಾರ್ಡ್‌ನ ವೆಚ್ಚಕ್ಕಿಂತಲೂ ಕಡಿಮೆ ಖರ್ಚಿನಲ್ಲಿ ಪರಸ್ಪರ ಸಂವಹನ ನಡೆಸಬಹುದಾಗಿದೆ. ಈಗ ಇದನ್ನೇ ಪಾವತಿ ಸೇವೆಗೂ ಅನ್ವಯಿಸಲು ನಾವು ಮುಂದಾಗಿದ್ದೇವೆ. ಎನ್‌ಪಿಸಿಐ ಅನುಮೋದನೆಯ ಬಳಿಕ ಭಾರತದಲ್ಲಿ ಹಂತ ಹಂತವಾಗಿ ಪಾವತಿ ಸೇವೆ ಆರಂಭಿಸಿದೆ ಎಂದವರು ಹೇಳಿದ್ದಾರೆ. ನವೀನ ಹೊಸ ವ್ಯವಹಾರ ಮಾದರಿಗಳನ್ನು ಸದೃಢಗೊಳಿಸಲು ಸ್ಥಳೀಯ ದಕ್ಷತೆ ಮತ್ತು ತಂತ್ರಜ್ಞಾನ ಸಾಮರ್ಥ್ಯವನ್ನು ಭಾರತ ನಿರ್ಮಿಸುತ್ತಿದೆ.

ಮತ್ತು ಭಾರತೀಯ ನಾಗರಿಕರಿಗೆ ಡಿಜಿಟಲ್ ಮತ್ತು ಆರ್ಥಿಕ ಸೇರ್ಪಡೆಗೆ ಹೆಚ್ಚಿನ ಪ್ರವೇಶಾವಕಾಶ ಒದಗಿಸುತ್ತಿದೆ ಎಂದು ಝಕರ್‌ಬರ್ಗ್ ಹೇಳಿದ್ದಾರೆ. ಜಿಯೋ ವೇದಿಕೆಯಲ್ಲಿ 43,574 ಕೋಟಿ ರೂ. ಹೂಡಿಕೆ ಮಾಡುವುದಾಗಿ ಕಳೆದ ಎಪ್ರಿಲ್‌ನಲ್ಲಿ ಫೇಸ್‌ಬುಕ್ ಘೋಷಿಸಿತ್ತು. ಉಭಯ ಸಂಸ್ಥೆಗಳ ಈ ಸಹಭಾಗಿತ್ವ ಭಾರತ, ಭಾರತೀಯರು ಮತ್ತು ಭಾರತದ ಸಣ್ಣ ಉದ್ದಿಮೆಗಳಿಗೆ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಮಾತಿಗಿಂತ ಕೃತಿಯಲ್ಲೇ ನಾವು ಸಾಧಿಸಲಿದ್ದೇವೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಕೇಶ್ ಅಂಬಾನಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X