Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ, ಮಣಿಪಾಲ: ಎರಡು ಗಂಟೆ ಅವಧಿಯಲ್ಲಿ...

ಉಡುಪಿ, ಮಣಿಪಾಲ: ಎರಡು ಗಂಟೆ ಅವಧಿಯಲ್ಲಿ 4 ಕಡೆಗಳಲ್ಲಿ ಸರ ಸುಲಿಗೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ15 Dec 2020 8:41 PM IST
share

ಉಡುಪಿ, ಡಿ.15: ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ನಾಲ್ಕು ಕಡೆಗಳಲ್ಲಿ ಇಂದು ಬೆಳಗ್ಗೆ ಕೇವಲ ಎರಡು ಗಂಟೆಗಳ ಅವಧಿ ಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯರ ಸರ ಸುಲಿಗೆ ಮಾಡಿರುವ ಘಟನೆಗಳು ವರದಿಯಾಗಿವೆ.

ಮಣಿಪಾಲ ಲಕ್ಷ್ಮೀಂದ್ರ ನಗರದ ಬಾಲಾಜಿ ರೆಸಿಡೆನ್ಸಿ ನಿವಾಸಿ ಸೋಮನಾಥ ಎಂಬವರ ಪತ್ನಿ ಚಂದ್ರಮೌಳಿ ಪದ್ಮಿನಿದೇವಿ ಎಂಬವರು ಬೆಳಗ್ಗೆ 7 ಗಂಟೆಗೆ ಮನೆಯಿಂದ ವಿ.ಪಿ.ನಗರದಲ್ಲಿರುವ ಕಾಮಾಕ್ಷಿ ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದರು. ರುದ್ರಪ್ರಿಯ ನಗರದ ಬಳಿ ಹಿಂದಿನಿಂದ ಬೈಕಿನಲ್ಲಿ ಬಂದ 30ರಿಂದ 35 ವರ್ಷದ ಅಪರಿಚಿತ ವ್ಯಕ್ತಿ ಮಹಿಳೆಯ ಕುತ್ತಿಗೆಯಲ್ಲಿದ್ದ 1.25ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರವನ್ನು ಎಳೆದು ಪರಾರಿಯಾದನು.

ಅಲ್ಲಿಂದ ಆತ ಬೆಳಗ್ಗೆ 8:30ಕ್ಕೆ ಪೆರಂಪಳ್ಳಿ ಸಂತೋಷ ನಗರ ಬಸ್ ನಿಲ್ದಾಣ ದಿಂದ ಪಂಜುರ್ಲಿ ದೈವಸ್ಥಾನದ ಕಡೆಗೆ ನಡೆದುಕೊಂಡು ಹೋಗು ತ್ತಿದ್ದ ಮೂಡು ಪೆರಂಪಳ್ಳಿಯ ಜಯಂತಿ (55) ಎಂಬವರ ಕುತ್ತಿಗೆಯಲ್ಲಿದ್ದ 50 ಸಾವಿರ ರೂ. ಮೌಲ್ಯದ 10 ಗ್ರಾಂ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾದನು. ಈ ಎರಡು ಪ್ರಕರಣಗಳು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

ನಂತರ ಸುಲಿಗೆಕೋರ ಉಡುಪಿಗೆ ಆಗಮಿಸಿ, ಕುಂಜಿಬೆಟ್ಟು ಎಂಜಿಎಂ ಮೈದಾನದ ಬಳಿ ಕಡಿಯಾಳಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಗುಲಾಬಿ ನಾಯ್ಕ್ ಎಂಬವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದು, ತುಂಡಾದ 50 ಸಾವಿರ ರೂ. ಮೌಲ್ಯದ 12 ಗ್ರಾಂ ತೂಕದ ಸರವನ್ನು ಮಾಲಿಗೆ ಮಾಡಿದ ಎಂದು ದೂರಲಾಗಿದೆ.

ಬಳಿಕ ಬ್ರಹ್ಮಗಿರಿ ಸೈಂಟ್ ಸಿಸಿಲಿ ಶಾಲೆಯ ಕಂಪೌಂಡ್ ಬಳಿ ಬೆಳಗ್ಗೆ 9ಗಂಟೆಗೆ ನಡೆದುಕೊಂಡು ಹೋಗುತ್ತಿದ್ದ ಕಾಪು ಕೋತಲಕಟ್ಟೆಯ ಜಯ ಬಂಗೇರ ಎಂಬವರ ಪತ್ನಿ ಯಶೋಧ ಬಂಗೇರಾ (38) ಎಂಬವರ ಕುತ್ತಿಗೆಗೆ ಕೈ ಹಾಕಿ ಚಿನ್ನದ ಮಾಂಗಲ್ಯ ಸರವನ್ನು ಎಳೆದನು. ಆಗ ಸರ ತುಂಡಾಗಿ 45 ಸಾವಿರ ರೂ. ಮೌಲ್ಯದ 10 ಗ್ರಾಂ ತೂಕದ ಸರವನ್ನು ಸುಲಿಗೆಕೋರ ತೆಗೆದುಕೊಂಡು ಪರಾರಿ ಯಾದನು ಎಂದು ದೂರಲಾಗಿದೆ. ಈ ಎರಡು ಪ್ರಕರಣಗಳು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

ಇದೇ ರೀತಿಯ ಪ್ರಕರಣ ಸೆ.19ರಂದು ಉಡುಪಿ ಮತ್ತು ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆಗಳಲ್ಲಿ ಸುಲಿಗೆ ನಡೆದಿತ್ತು. ಈ ಪ್ರಕರಣದಲ್ಲಿ ಹಲವು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಇಂತಹದ್ದೇ ಪ್ರಕರಣ ನಡೆದಿರುವುದು ನರ ನಿವಾಸಿ ಗಳಲ್ಲಿ ಆತಂಕ ಮೂಡಿಸಿದೆ.

ಮೂರು ತಂಡಗಳ ರಚನೆ

ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಆರೋಪಿ ಬಂಧನಕ್ಕೆ ಮೂರು ಪೊಲೀಸ್ ತಂಡಗಳನ್ನು ರಚಿಸಿದ್ದಾರೆ.

ಉಡುಪಿ, ಮಣಿಪಾಲ ಹಾಗೂ ಡಿಸಿಐಬಿಯ ಪೊಲೀಸ್ ನಿರೀಕ್ಷಕರುಗಳ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದೆ. ಈ ನಾಲ್ಕು ಕೃತ್ಯ ಗಳನ್ನು ಒಬ್ಬನೇ ಮಾಡಿರುವುದು ತಿಳಿದುಬಂದಿದೆ. ಆರೋಪಿಯ ಬಂಧನಕ್ಕಾಗಿ ಪೊಲೀಸ್ ತಂಡ ಶೋಧ ಕಾರ್ಯ ನಡೆಸುತ್ತಿದೆ ಎಂದು ಜಿಲ್ಲಾ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X