1.4 ಲಕ್ಷ ಹುದ್ದೆ ತುಂಬಲು ಪರೀಕ್ಷೆ ಆರಂಭಿಸಿದ ರೈಲ್ವೆ ನೇಮಕಾತಿ ಮಂಡಳಿ
ಹೊಸದಿಲ್ಲಿ, ಡಿ. 15: ಸುಮಾರು 1.4 ಲಕ್ಷ ಹುದ್ದೆಗಳನ್ನು ತುಂಬಲು ಭಾರತೀಯ ರೈಲ್ವೆ ತನ್ನ 21 ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಮೂಲಕ ಆಯೋಜಿಸಿರುವ ಮೂರು ಹಂತಗಳ ಬೃಹತ್ ನೇಮಕಾತಿ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ.
ರೈಲ್ವೆ ನೇಮಕಾತಿ ಪರೀಕ್ಷೆಗೆ ದೇಶಾದ್ಯಂತದ ವಿವಿಧ ನಗರಗಳ ಪರೀಕ್ಷಾ ಕೇಂದ್ರಗಳಲ್ಲಿ 2.44 ಕೋಟಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ರೈಲ್ವೆ ಸಚಿವಾಲಯ 2020 ಡಿಸೆಂಬರ್ 11ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಾರ್ಗಸೂಚಿಗಳನ್ನು ವಿಧಿಸಿದ ಹಿನ್ನೆಲೆಯಲ್ಲಿ ಈ ಪರೀಕ್ಷೆಗಳನ್ನು ನಡೆಸಲು ಆರ್ಆರ್ಬಿ ವ್ಯಾಪಕ ಸಿದ್ಧತೆ ನಡೆಸಿದೆ.
Next Story