Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಸಂಕಷ್ಟದಲ್ಲೂ ರಾಜ್ಯದಲ್ಲಿ...

ಕೊರೋನ ಸಂಕಷ್ಟದಲ್ಲೂ ರಾಜ್ಯದಲ್ಲಿ ಶೇ.42ರಷ್ಟು ವಿದೇಶಿ ನೇರ ಹೂಡಿಕೆ: ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ16 Dec 2020 5:20 PM IST
share
ಕೊರೋನ ಸಂಕಷ್ಟದಲ್ಲೂ ರಾಜ್ಯದಲ್ಲಿ ಶೇ.42ರಷ್ಟು ವಿದೇಶಿ ನೇರ ಹೂಡಿಕೆ: ಸಿಎಂ ಯಡಿಯೂರಪ್ಪ

ಬೆಂಗಳೂರು, ಡಿ. 16: `ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರಾಜ್ಯದಲ್ಲಿ ಕೈಗಾರಿಕೋದ್ಯಮಿಗಳು ಭೂಮಿ ಖರೀದಿಸಲು ಸುಲಭವಾಗಲಿದೆ. ಕೊರೋನ ಸಂಕಷ್ಟದ ಅವಧಿಯಲ್ಲೂ ರಾಜ್ಯ ಶೇ.42ರಷ್ಟು ವಿದೇಶಿ ನೇರ ಬಂಡವಾಳ ಹರಿದು ಬರಲು ಈ ಕಾಯ್ದೆಯಿಂದ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ಇಲ್ಲಿನ ಕೆಜಿ ರಸ್ತೆಯಲ್ಲಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ(ಎಫ್‍ಕೆಸಿಸಿಐ) 103ನೆ ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರ ಜತೆಗೆ ಜಾಗತಿಕ, ಆರ್ಥಿಕತೆಯನ್ನು ಬಿಕ್ಕಟ್ಟಿನತ್ತ ಕೊಂಡೊಯ್ದಿದೆ. ಇದೀಗ ಆರ್ಥಿಕ ಚಟುವಟಿಕೆಗಳು ಸಹಜ ಸ್ಥಿತಿಗೆ ಬರಲು ಆರಂಭಿಸಿವೆ ಎಂದು ತಿಳಿಸಿದರು.

ಕೋವಿಡ್-19 ಅನಾನುಕೂಲಗಳ ತೀವ್ರತೆಯನ್ನು ತಗ್ಗಿಸಲು ಆರ್ಥಿಕ ಒತ್ತಡವನ್ನು ನಿವಾರಿಸಲು ಆರ್ಥಿಕ ಬೆಳವಣಿಗೆ ಸಾಧಿಸಲು ಮತ್ತು ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಈಗಾಗಲೇ ಸೂಕ್ತ ಪರಿಹಾರ ಮತ್ತು ಉತ್ತೇಜನ ಪ್ಯಾಕೇಜ್‍ಗಳನ್ನು ಘೋಷಿಸಿವೆ. ಇದು ಕೈಗಾರಿಕಾದ್ಯಮಿಗಳ ವಿಶ್ವಾಸವನ್ನು ಹೆಚ್ಚಿಸಿ ಹಣಕಾಸಿನ ಸ್ಥಿತಿಯನ್ನು ಉತ್ತಮಪಡಿಸಲು ಸಹಕಾರಿ ಎಂದು ಯಡಿಯೂರಪ್ಪ ತಿಳಿಸಿದರು.

ಕೊರೋನ ಸಂಕಷ್ಟದ ಸಂದರ್ಭದಲ್ಲಿಯೂ ರಾಜ್ಯಕ್ಕೆ ಶೇ.42ರಷ್ಟು ವಿದೇಶಿ ನೇರ ಬಂಡವಾಳ ಬಂದಿರುವುದು ಸಂತಸದ ವಿಚಾರ. ಇತ್ತೀಚಿನ ಕರ್ನಾಟಕ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗಳು ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದ ಅವರು, ಈ ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೈಗಾರಿಕೋಧ್ಯಮಿಗಳಿಗೆ ಭೂಮಿ ಖರೀದಿ ಸುಲಭವಾಗಿದೆ ಎಂದು ಹೇಳಿದರು.

ರಾಜ್ಯ ಸರಕಾರ ವಾಣಿಜ್ಯ ವ್ಯವಹಾರಗಳು ಸುಗಮವಾಗಿ ನಡೆಯಲು ಕೈಗಾರಿಕಾ ಸೌಲಭ್ಯ ಕಾಯ್ದೆಗೂ ತಿದ್ದುಪಡಿ ತಂದಿದೆ. ಈ ತಿದ್ದುಪಡಿಯ ಪ್ರಕಾರ ಯಾವುದೇ ಉದ್ಯಮವನ್ನು ಆರಂಭಿಸಲು ವಿವಿಧ ಪರವಾನಗಿಗಳ ತಕ್ಷಣದ ಅನುಮೋದನೆ ಅಗತ್ಯವಿಲ್ಲ. ಉದ್ಯಮ ಆರಂಭವಾದ ಮೊದಲ ಮೂರು ವರ್ಷದೊಳಗೆ ಎಲ್ಲ ಪರವಾನಗಿಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.

ಅದೇ ರೀತಿ ಕಾರ್ಮಿಕ ಕಾಯ್ದೆಗೂ ಸುಧಾರಣೆಗಳನ್ನು ತರಲು ಸರಕಾರ ಮುಂದಾಗಿದೆ. ಕರ್ನಾಟಕ ಕೈಗಾರಿಕಾ ವಲಯದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದ್ದು, 2020-25ರ ಹೊಸ ಕೈಗಾರಿಕಾ ನೀತಿಯನ್ನು ಪ್ರಕಟಿಸುವ ಮೂಲಕ ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ಕೈಗಾರಿಕಾ ಸಮೂಹದ ಪರವಾಗಿ ಗಮನಾರ್ಹ ಸುಧಾರಣೆಗಳನ್ನು ತಂದು ಆರ್ಥಿಕ ಬೆಳವಣಿಗೆಗೆ ಸರ್ವ ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಫ್‍ಕೆಸಿಸಿಐನ ಅಧ್ಯಕ್ಷ ಪೆರಿಕಲ್ ಎಂ.ಸುಂದರ್, ಹಿರಿಯ ಉಪಾಧ್ಯಕ್ಷ ಐ.ಎಸ್.ಪ್ರಸಾದ್, ನಿಕಟಪೂರ್ವ ಅಧ್ಯಕ್ಷ ಸಿ.ಆರ್.ಜನಾರ್ಧನ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ಗೌರವ್ ಗುಪ್ತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X