Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. 30ಕ್ಕೂ ಹೆಚ್ಚಿನ ದೇಶಗಳ ಅನಿವಾಸಿ...

30ಕ್ಕೂ ಹೆಚ್ಚಿನ ದೇಶಗಳ ಅನಿವಾಸಿ ಕನ್ನಡಿಗರಿಂದ ಜ.2ರಂದು 'ಎನ್ಆರ್​ಐ ಅಪೀಲ್ ಡೇ' ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ16 Dec 2020 6:42 PM IST
share
30ಕ್ಕೂ ಹೆಚ್ಚಿನ ದೇಶಗಳ ಅನಿವಾಸಿ ಕನ್ನಡಿಗರಿಂದ ಜ.2ರಂದು ಎನ್ಆರ್​ಐ ಅಪೀಲ್ ಡೇ ಅಭಿಯಾನ

ಮಂಗಳೂರು: ತಮಗಿರುವ ಸಮಸ್ಯೆಗಳ ಬಗ್ಗೆ, ಬಹುಕಾಲದಿಂದ ಈಡೇರದ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲು 30ಕ್ಕೂ ಹೆಚ್ಚಿನ ದೇಶದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಪ್ರತಿನಿಧಿಸುವ ನೂರಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳ ಸಹಯೋಗದಲ್ಲಿ ಒಗ್ಗಟ್ಟಾಗಿ ಟ್ವಿಟರ್ ಮತ್ತು ಈಮೇಲ್ ಅಭಿಯಾನ ನಡೆಸಲು ಮುಂದಾಗಿದ್ದು, ಜನವರಿ 2ರಂದು ಮಧ್ಯಾಹ್ನ ಭಾರತೀಯ ಕಾಲಮಾನ ಸಂಜೆ 4ಗಂಟೆಗೆ ಟ್ವಿಟರ್ ಅಭಿಯಾನಕ್ಕೆ ಏಕಕಾಲದಲ್ಲಿ ಚಾಲನೆ ನೀಡಿ ಸರಣಿ ಮನವಿಗಳನ್ನು, ಬೇಡಿಕೆಗಳನ್ನು ಇಡಲಿದ್ದಾರೆ.

ಉದ್ಯೋಗ ಹರಸಿ ವಿದೇಶಕ್ಕೆ ತೆರಳಿದರೂ ಹುಟ್ಟೂರು ಮತ್ತು ರಾಜ್ಯದ ಆಗುಹೋಗುಗಳ ಬಗ್ಗೆ ಅತಿ ಹೆಚ್ಚು ಕಾಳಜಿ ತೋರಿಸುವವರು ಅನಿವಾಸಿ ಕನ್ನಡಿಗರು. ರಾಜ್ಯದಲ್ಲಿ ನೆರೆ ಬಂದರೂ, ಬರ ಬಂದರೂ, ಯಾವುದೇ ಸಂಕಷ್ಟ ಬಂದೊದಗಿದರೂ ತಕ್ಷಣ ಲಕ್ಷಾಂತರ ಅನಿವಾಸಿಗಳು ಸಹಾಯಹಸ್ತ ಚಾಚುತ್ತಾರೆ. ಆದರೆ ಈ ಅನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸುವವರೇ ಇಲ್ಲ ಎಂಬ ಆರೋಪವಿದ್ದು, ಬಹುಕಾಲದಿಂದ ಅವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಾ ಇದ್ದರೂ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ. ಕೊರೋನ ಸಂಕಷ್ಟ ಸಂದರ್ಭದಲ್ಲಂತೂ ಇವರ ಗೋಳನ್ನು ಕೇಳುವವರೇ ಇರಲಿಲ್ಲ, ಇದೇ ಕಾರಣಕ್ಕೆ ಇದೀಗ ಅನಿವಾಸಿಗಳು ಒಗ್ಗಟ್ಟಾಗಿ ತಮ್ಮ ಬೇಡಿಕೆಗಳ ಮನವಿ ಸಲ್ಲಿಸಲೆಂದೇ ಒಂದು ದಿನವನ್ನು ಆಚರಿಸಲು ನಿರ್ಧರಿಸಿದ್ದು, ಜನಪ್ರತಿನಿಧಿಗಳು, ಮಂತ್ರಿಗಳು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಅಭಿಯಾನ ಕೈಗೊಂಡಿದ್ದಾರೆ.

12 ವರ್ಷಗಳ ಹಿಂದೆ ರಾಜ್ಯ ಸರ್ಕಾರ ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಕ್ಷೇಮಾಭಿವೃಧ್ಧಿಯಗಾಗಿ ಕನ್ನಡಿಗರ ಅನಿವಾಸಿ ಭಾರತೀಯ ಸಮಿತಿಯನ್ನು ರಚಿಸಲಾಗಿದ್ದು, ಆದರೆ ಕಳೆದ ಮೂರು ವರ್ಷಗಳಿಂದ ಈ ಸಮಿತಿಗೆ ಉಪಾಧ್ಯಕ್ಷರೇ ಇಲ್ಲದೇ ಅನಾಥವಾಗಿದೆ. ಶೀಘ್ರವೇ ಉಪಾಧ್ಯಕ್ಷರನ್ನು ನೇಮಿಸಬೇಕೆಂದು ಆಗ್ರಹಿಸಲಾಗಿದೆ.

ಎನ್ಆರೈ ಘಟಕದ ಉಪಾಧ್ಯಕ್ಷ ಕೂಡಲೇ ನೇಮಕವಾಗಬೇಕು, ಅದೂ ಅನಿವಾಸಿಗಳ ಬಗ್ಗೆ ಅರಿವಿರುವ ಒಬ್ಬ ಅನಿವಾಸಿ ಕನ್ನಡಿಗನೇ ಈ ಸ್ಥಾನಕ್ಕೆ ನೇಮಕವಾದರೆ ಅನಿವಾಸಿಗಳಿಗೆ ಅನುಕೂಲ. ಎಲ್ಲರೂ ನೇರವಾಗಿ ಸಿಎಂ ಅವರನ್ನು ಭೇಟಿಯಾಗಲು ಸಾಧ್ಯವಿಲ್ಲ. ಉಪಾಧ್ಯಕ್ಷರಿದ್ದರೆ ಸಮಸ್ಯೆ ತಿಳಿಸಲು ಸುಲಭ. ಇದಷ್ಟೇ ಅಲ್ಲದೆ ತಮ್ಮಲ್ಲಿರುವ ಹಲವಾರು ಸಮಸ್ಯೆಗಳ, ಬೇಡಿಕೆಗಳ ಪಟ್ಟಿಯೊಂದಿಗೆ ವಿಶ್ವದಾದ್ಯಂತ ಅನಿವಾಸಿ ಕನ್ನಡಿಗರು ಸರ್ಕಾರಕ್ಕೆ ಮನವಿ ಸಲ್ಲಿಸಲು ಜನವರಿ 2ರಂದು 'ಎನ್ಆರೈ ಅಪೀಲ್ ಡೇ' ಎಂದು ಟ್ವಿಟ್ಟರ್ ಅಭಿಯಾನ ಮತ್ತು ಇಮೇಲ್ ಮೂಲಕ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ, ನೂರಾರು ಕನ್ನಡ ಪರ ಸಂಘಟನೆಗಳು ಭಾಗವಹಿಸಲಿದೆ

- ಹಿದಾಯತ್ ಅಡ್ಡೂರ್ , ಸಂಚಾಲಕರು
ಅಂತರ್ ರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್

ನಾವು ಕರ್ನಾಟಕವನ್ನು, ಕನ್ನಡವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವವರು, ನಮಗೆ ಈ ಬಗ್ಗೆ ಹೆಮ್ಮೆಯಿದೆ, ಕೊರೋನ ಸಂಕಷ್ಟದ ಸಂದರ್ಭದಲ್ಲಿ ಅನಿವಾಸಿಗಳ ಗೋಳನ್ನು ಕೇಳುವವರು ಯಾರೂ ಇರಲಿಲ್ಲ, ಏಕೆಂದರೆ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರೇ ಇರಲಿಲ್ಲ. ಇನ್ನಾದರೂ ನೇಮಿಸಿ, ಇನ್ನಾದರೂ ಅನಿವಾಸಿಗಳ ಮನವಿಗೆ ಸ್ಪಂದಿಸಿ.


- ಹೇಮೇಗೌಡ ಮಧು, ಅಧ್ಯಕ್ಷರು, ಕನ್ನಡ ಸಂಘ ಇಟಲಿ

ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುವ ಅನಿವಾಸಿಗಳು ಶಾಶ್ವತ ಪೌರತ್ವ ಪಡೆಯಲು ಬಂದವರಲ್ಲ, ಅವರು ದುಡಿದ ಪ್ರತಿಯೊಂದು ರೂಪಾಯಿ ತಾಯ್ನಾಡಿಗೆ ಕಳುಹಿಸಿ ರಾಜ್ಯದ ಆರ್ಥಿಕತೆಗೆ ಸಹಾಯ ಮಾಡುವವರು, ಮುಖ್ಯಮಂತ್ರಿ ಯಡಿಯೂರಪ್ಪನವರೇ, ಬಹಳಷ್ಟು ನಿರೀಕ್ಷೆಯೊಂದಿಗೆ ಅನಿವಾಸಿಗಳು ನಿಮ್ಮ ಮುಂದೆ ಬೇಡಿಕೆ ಇಡುತ್ತಿದ್ದೇವೆ, ನಮ್ಮ ಬೇಡಿಕೆಯನ್ನ ಕಡೆಗಣಿಸದಿರಿ.


-ರವಿ ಶೆಟ್ಟಿ, ಪೋಷಕರು ಮತ್ತು ಮಾಜಿ ಅಧ್ಯಕ್ಷರು, ತುಳು ಕೂಟ, ಕತರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X