ಸರಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಲು ಸೂಚನೆ
ಬೆಂಗಳೂರು, ಡಿ. 16: ಸರಕಾರಿ ಕಚೇರಿಗಳಿಗೆ ತಮ್ಮ ಸಮಸ್ಯೆಗಳನ್ನು ಹೊತ್ತು ಬರುವ ಸಾರ್ವಜನಿಕರೊಂದಿಗೆ ಸೌಜನ್ಯ ಮತ್ತು ಸಮಾಧಾನದಿಂದ ವರ್ತಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಎಚ್.ಸಿ.ಹರ್ಷರಾಣಿ ಸೂಚಿಸಿದ್ದಾರೆ.
ಬುಧವಾರ ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು, ಸರಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರಲ್ಲಿ ಯಾವುದೇ ತಾರತಮ್ಯ ಮಾಡದೆ ಬಂದವರಿಗೆಲ್ಲರಿಗೂ ಕುರ್ಚಿಗಳಲ್ಲಿ ಕುಳಿತುಕೊಳ್ಳಲು ಹೇಳುವಂತೆ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಅಧೀನ ಇಲಾಖೆಗಳ ಮುಖ್ಯಸ್ಥರ ಮೂಲಕ ಎಲ್ಲ ಸರಕಾರಿ ಅಧಿಕಾರಿಗಳಿಗೆ ತಿಳಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.
Next Story





