ಬಾಲನ್ಯಾಯ ಮಂಡಳಿ ಅಧ್ಯಕ್ಷರಾಗಿ ನ್ಯಾಯಾಧೀಶ ಇರ್ಫಾನ್ ಅಧಿಕಾರ ಸ್ವೀಕಾರ
ಉಡುಪಿ, ಡಿ.16: ಬಾಲ ನ್ಯಾಯ ಮಂಡಳಿಯ ಅಧ್ಯಕ್ಷರಾಗಿ ಉಡುಪಿಯ ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಇರ್ಫಾನ್ ಇಂದು ಅಧಿಕಾರ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಬಾಲ ನ್ಯಾಯ ಮಂಡಳಿ ವತಿಯಿಂದ ನಿರ್ಗಮನ ಅಧ್ಯಕ್ಷೆ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಲಾವಣ್ಯ ಎಚ್.ಎನ್. ಅವರನ್ನು ಬೀಳ್ಕೊಡಲಾಯಿತು. ಬಳಿಕ ಮಾತನಾಡಿದ ಅವರು ಕಾನೂನು ಸಂಘರ್ಷಕ್ಕೊಳಪಟ್ಟ ಮಕ್ಕಳನ್ನು ತಿದ್ದಿ ಸಮಾಜದ ಮುಂದೆ ಒಳ್ಳೆಯ ಪ್ರಜೆಗಳಾಗಿ ಉತ್ತಮ ಸಾಧನೆ ಮಾಡುವಂತೆ ಪ್ರೇರೇಪಿಸುವುದು ಮಂಡಳಿಯ ಉದ್ದೇಶವಾಗಿದೆ. ಅದು ಈ ಗ ಸಾಕಾರವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಅಮೃತ ಕಲಾ, ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಮಕ್ಕಳ ರಕ್ಷಣಾಧಿಕಾರಿ ಮಹೇಶ್ ದೇವಾಡಿಗ, ಹೌಸ್ ಫಾದರ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
Next Story





