Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಷತ್ ಘಟನೆ ಬಗ್ಗೆ ರಾಜ್ಯದ ಜನತೆಯಲ್ಲಿ...

ಪರಿಷತ್ ಘಟನೆ ಬಗ್ಗೆ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳುತ್ತೇನೆ: ಬಸವರಾಜ ಹೊರಟ್ಟಿ

ವಾರ್ತಾಭಾರತಿವಾರ್ತಾಭಾರತಿ16 Dec 2020 10:05 PM IST
share
ಪರಿಷತ್ ಘಟನೆ ಬಗ್ಗೆ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳುತ್ತೇನೆ: ಬಸವರಾಜ ಹೊರಟ್ಟಿ

ಬೆಂಗಳೂರು, ಡಿ.16: ಮೈಸೂರು ಮಹಾರಾಜರ ಕಾಲದಿಂದ ಪ್ರಾರಂಭಗೊಂಡು 113 ವರ್ಷಗಳ ಇತಿಹಾಸ ಹೊಂದಿರುವ ಹಾಗೂ ತನ್ನದೇ ಆದ ಘನತೆ ಗೌರವ, ಪರಂಪರೆಯನ್ನು ಉಳಿಸಿಕೊಂಡಿರುವ ಸದನ ನಮ್ಮ ಕರ್ನಾಟಕ ವಿಧಾನಪರಿಷತ್ತು. ಭಾರತ ದೇಶದಲ್ಲಿಯೆ ಅತ್ಯಂತ ಉತ್ತಮವಾದ ಸದನವೆಂಬ ಹೆಗ್ಗಳಿಕೆ ನಮ್ಮ ಕರ್ನಾಟಕ ವಿಧಾನ ಪರಿಷತ್‍ಗೆ ಇದೆ ಎಂದು ವಿಧಾನಪರಿಷತ್ತಿನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಡಿ.12ರಂದು ಚಿಂತಕರ ಚಾವಡಿ, ಹಿರಿಯರ ಮನೆ ಎಂದು ಕರೆಯುವ ವಿಧಾನಪರಿಷತ್ತಿನಲ್ಲಿ ನಡೆದ ಗದ್ದಲ ಹಾಗೂ ಬಡಿದಾಟ ಒಂದು ಕಪ್ಪುಚುಕ್ಕೆ ಎಂದರೆ ತಪ್ಪಾಗಲಾರದು. ಇದನ್ನು ರಾಜ್ಯದ ಜನತೆ ಅಷ್ಟೆ ಅಲ್ಲದೆ ಬೇರೆ ಬೇರೆ ದೇಶದಲ್ಲಿಯೂ ಜನ ವೀಕ್ಷಿಸಿದ್ದಾರೆ. ಇದರಿಂದ ನಮ್ಮ ಘನತೆವೆತ್ತ ವಿಧಾನಪರಿಷತ್ತಿನ ಘನತೆ ಗೌರವ ಕಡಿಮೆಯಾಗಿದೆ ಅನ್ನುವುದು ಇಡೀ ರಾಜ್ಯದ ಜನರ ಅನಿಸಿಕೆ ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳಲ್ಲಿ ಬರುವಂತಹ ವಿಚಾರಗಳನ್ನು ನೋಡಿದರೆ ರಾಜ್ಯದ ಜನತೆ ನಮ್ಮನ್ನು ಎಂದೂ ಕ್ಷಮಿಸಲಾರದೆಂಬ ಭಾವನೆ ಬರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನರು ನಮ್ಮ ಮೇಲೆ ಇಟ್ಟ ಭರವಸೆ ನಂಬಿಕೆಯನ್ನು ಕಳೆದುಕೊಳ್ಳದಂತೆ ನಮ್ಮ ಅನೇಕ ವಿಧಾನಪರಿಷತ್ ಸದಸ್ಯರು ಈ ಘಟನೆಯಿಂದ ನೊಂದಿದ್ದೇವೆ. ಇನ್ನು ಮುಂದೆ ಈ ಸದನದ ಗೌರವಕ್ಕೆ ಧಕ್ಕೆ ಬರದಂತೆ ನಾವೆಲ್ಲರೂ ಪ್ರಯತ್ನ ಪಡುತ್ತೇವೆ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಈ ಸದನದಲ್ಲಿ ಸತತವಾಗಿ 7 ಬಾರಿ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದಿಂದ ಆಯ್ಕೆಯಾಗುತ್ತಾ ಕಳೆದ 41 ವರ್ಷದಿಂದ ನಾನು ಎಲ್ಲ ರೀತಿಯಿಂದ ಸಚಿವನಾಗಿ, ಸಭಾಪತಿಯಾಗಿ ಸದನದಲ್ಲಿ ಘನತೆ ಗೌರವ ಇಟ್ಟುಕೊಂಡು ಬಂದಿರುವೆ. ಬಹಳಷ್ಟು ಸದಸ್ಯರು ಇದೇ ರೀತಿ ಸಹಮತ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ನಿನ್ನೆಯ ಘಟನೆಯ ಬಗ್ಗೆ ಇಡೀ ಸದಸ್ಯರ ಪರವಾಗಿ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳುತ್ತೇನೆ, ದಯಮಾಡಿ ನಿನ್ನೆಯ ಘಟನೆಯನ್ನು ಕ್ಷಮಿಸಬೇಕೆಂದು ಬಸವರಾಜ ಹೊರಟ್ಟಿ ಪತ್ರದಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X