Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಕ್ತ ಮತದಾನ ನಡೆಯಲಿ: ಎಸಿ ಮದನ್ ಮೋಹನ್

ಮುಕ್ತ ಮತದಾನ ನಡೆಯಲಿ: ಎಸಿ ಮದನ್ ಮೋಹನ್

ವಾರ್ತಾಭಾರತಿವಾರ್ತಾಭಾರತಿ16 Dec 2020 11:45 PM IST
share
ಮುಕ್ತ ಮತದಾನ ನಡೆಯಲಿ: ಎಸಿ ಮದನ್ ಮೋಹನ್

ಮಂಗಳೂರು : ಚುನಾವಣೆಯ ಸಂದರ್ಭದಲ್ಲಿ ಮತಗಟ್ಟೆಯ ಅಧಿಕಾರಿಗಳು ಆಯೋಗದ ಸೂಚನೆ, ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಯಾವುದೇ ಚ್ಯುತಿ ಬಾರದಂತೆ ಮುಕ್ತ ಮತ್ತು ನ್ಯಾಯಯುತ, ನಿಷ್ಪಕ್ಷಪಾತ ಮತದಾನವಾಗುವಂತೆ ನೋಡಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಮದನ್ ಮೋಹನ್ ಸೂಚನೆ ನೀಡಿದ್ದಾರೆ.

ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಚುನಾವಣಾ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯ ಚುನಾವಣಾ ಆಯೋಗವು ಸಿದ್ಧಪಡಿಸಿದ ಗ್ರಾಪಂಗಳ ಚುನಾವಣೆ ಪ್ರಿಸೈಡಿಂಗ್ ಅಧಿಕಾರಿಗಳ ಕೈಪಿಡಿಯನ್ನು ಮತಗಟ್ಟೆಯ ಅಧಿಕಾರಿಗಳು ಸಂಪೂರ್ಣವಾಗಿ ಅರಿತುಕೊಂಡು ಆಯಾ ಕ್ಷೇತ್ರದ ಮತಗಟ್ಟೆಯಲ್ಲಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿಸಿ ನಿರ್ವಹಿಸಿ ನಿಷ್ಪಕ್ಷಪಾತ ಮತದಾನವಾಗುವಂತೆ ನೋಡಿಕೊಳ್ಳಬೇಕು ಎಂದರು.

ಮತಗಟ್ಟೆಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾದರೆ ತಕ್ಷಣ ಮೇಲಧಿಕಾರಿಗಳ ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಂಡು ಮುಂದುವರಿಸಬೇಕು. ಮತದಾನ ಮಾಡಲು ಜನರು ಸರದಿಯಲ್ಲಿ ನಿಂತಾಗ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪ್ರತಿಯೊಬ್ಬರಿಗೂ ಥರ್ಮಲ್ ಸ್ಕಾನಿಂಗ್ ಮಾಡಬೇಕು ಎಂದರು.

ಮಂಗಳೂರು ತಾಲೂಕಿನ ತಹಶೀಲ್ದಾರ್ ಗುರುಪ್ರಸಾದ್ ಮಾತನಾಡಿ, ಗ್ರಾಪಂ ಚುನಾವಣೆ ಸೂಕ್ಷ್ಮ ರೀತಿಯಲ್ಲಿ ಆಗಿರುವುದರಿಂದ ಗೊಂದಲ ಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಯಾವುದೇ ಹಂತದಲ್ಲಿ ನಿಯಮಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಕೋವಿಡ್ ಸೋಂಕು ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯ ಪ್ರಮಾಣಿತ ಮಾರ್ಗಸೂಚಿಯಂತೆ ಅನುಸರಿಸಿಕೊಳ್ಳಬೇಕು ಎಂದರು.

ಮತದಾನ ಮುಗಿಯುವ ಒಂದು ಗಂಟೆಯ ಮುನ್ನ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಅವಕಾಶವಿದ್ದು, ಇದಕ್ಕೆ ಸಂಬಂಧಪಟ್ಟ ವರದಿಯನ್ನು ಆರೋಗ್ಯ ಇಲಾಖೆಯಿಂದ ಪಡೆದು ಮಸ್ಟರಿಂಗ್ ದಿನದಂದು ನೀಡಲಾಗುತ್ತದೆ ಎಂದರು.

 ಮತಗಟ್ಟೆಯ ಅಧಿಕಾರಿಗಳು ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ದಿನದಂದು ಚುನಾವಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಗುರುತು ಮಾಡಲಾದ ಮತ್ತು ಇತರ ಮತದಾರರ ಪಟ್ಟಿಗಳು, ಮತ ಪೆಟ್ಟಿಗೆಗಳು-1, ಅಳಿಸಲಾಗದ ಶಾಯಿ, ಮತಪತ್ರಗಳು, ವಿಶಿಷ್ಟ ಗುರುತಿನ ರಬ್ಬರ್ ಮೊಹರು ರಬ್ಬರ್ ಸ್ಯಾಂಪ್ ಇತ್ಯಾದಿಗಳನ್ನು ಮಸ್ಟರಿಂಗ್ ಕೇಂದ್ರದಲ್ಲಿ ಗಮನಿಸಬೇಕು ಎಂದರು.

ಚುನಾವಣಾ ಪ್ರಕ್ರಿಯೆಯ ತರಬೇತಿಯನ್ನು ಮಂಗಳೂರಿನ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ ಐಇಸಿ ವಿಭಾಗದ ವಿಭಾಗಾಧಿಕಾರಿ ಹಾಗೂ ಉಪನ್ಯಾಸಕ ಸತೀಶ್ ಎಂ. ಹಾಗೂ ಸರಕಾರಿ ಶಿಕ್ಷಕ ಶಿಕ್ಷಣ ವಿದ್ಯಾಲಯದ ಉಪನ್ಯಾಸಕ ಪ್ರಕಾಶ್ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ, ಕಾವೂರು ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಜಾನ್ ಪಿಂಟೋ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X