Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: 'ಇನ್‌ಲ್ಯಾಂಡ್ ಬ್ಯುಸಿನೆಸ್...

ಮಂಗಳೂರು: 'ಇನ್‌ಲ್ಯಾಂಡ್ ಬ್ಯುಸಿನೆಸ್ ಪಾರ್ಕ್' ಅಲ್ಟ್ರಾ ಮಾಡರ್ನ್ ವಾಣಿಜ್ಯ ಸಂಕೀರ್ಣಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ17 Dec 2020 1:37 PM IST
share
ಮಂಗಳೂರು: ಇನ್‌ಲ್ಯಾಂಡ್ ಬ್ಯುಸಿನೆಸ್ ಪಾರ್ಕ್ ಅಲ್ಟ್ರಾ ಮಾಡರ್ನ್ ವಾಣಿಜ್ಯ ಸಂಕೀರ್ಣಕ್ಕೆ ಶಿಲಾನ್ಯಾಸ

ಮಂಗಳೂರು : ಇನ್‌ಲ್ಯಾಂಡ್ ಬಿಲ್ಡರ್ಸ್‌ನ ಅಲ್ಟ್ರಾ ಮಾಡರ್ನ್ ವಾಣಿಜ್ಯ ಯೋಜನೆಯಾದ ‘ಇನ್‌ಲ್ಯಾಂಡ್ ಬ್ಯುಸಿನೆಸ್ ಪಾರ್ಕ್’ನ ಶಿಲಾನ್ಯಾಸ ಕಾರ್ಯಕ್ರಮವು ನಗರದ ಬಿಜೈಯಲ್ಲಿ ಸರ್ವಧರ್ಮ ಸಂಪ್ರದಾಯದಂತೆ ಧಾರ್ಮಿಕ ಪೂಜೆ, ದುಆ, ಪ್ರಾರ್ಥನೆಯೊಂದಿಗೆ ನಡೆಯಿತು.

‘ಇನ್‌ಲ್ಯಾಂಡ್ ಬ್ಯುಸಿನೆಸ್ ಪಾರ್ಕ್’ ತಳ, ನೆಲಮಹಡಿ ಮತ್ತು 4 ಆಂತಸ್ತುಗಳನ್ನು ಹೊಂದಿದೆ. ಮುಂಬೈನ ತಜ್ಞ ವಾಸ್ತುಶಿಲ್ಪಿಗಳು ಹಲವಾರು ನವೀನ ಕಟ್ಟಡ ತಂತ್ರಜ್ಞಾನಗಳನ್ನು ಬಳಸಿಕೊಂಡು ಈ ಕಟ್ಟಡವನ್ನು ವಿನ್ಯಾಸಗೊಳಿಸಿದ್ದಾರೆ. ಈ ಮಳಿಗೆಯು ಉತ್ತಮವಾದ ಕಾರ್ ಪಾರ್ಕ್, 2 ಲಿಫ್ಟ್, ವಿಶಾಲ ಹಾಗೂ ಭವ್ಯವಾದ ಲಾಬಿ ಮತ್ತು ಕಡಿಮೆ ಇಂಧನ ಶಕ್ತಿದಕ್ಷತೆಯ ವ್ಯವಸ್ಥೆಯನ್ನು ಹೊಂದಿದೆ. ಇದೇ ಸಂದರ್ಭ ದಲ್ಲಿ ಅತಿಥಿಗಳು ಯೋಜನೆಯ ಮಾಹಿತಿ ಪುಸ್ತಕ ವನ್ನು ಬಿಡುಗಡೆಗೊಳಿಸಿದರು.

ಅರ್ಚಕರಾದ ಗಿರಿಧರ ಭಟ್ ಪೂಜಾ ವಿಧಿಗಳನ್ನು ನಡೆಸಿದರು, ಸುರತ್ಕಲ್ ಈದ್ಗಾ ಮಸೀದಿಯ ಖತೀಬ್ ಪಿ.ಎಸ್. ಮುಹಮ್ಮದ್ ಖಾಮಿಲ್ ಸಖಾಫಿ ದುಆ ನೆರವೇರಿಸಿದರು. ಕ್ರೈಸ್ತ ಧರ್ಮ ಗುರುಗಳಾದ  ವಂ.ಜೆ.ಬಿ.ಸಲ್ದಾನ ಆಶೀರ್ಚನ ನೀಡಿ ಶುಭ ಹಾರೈಸಿದರು.

ಬೆಳೆಯುತ್ತಿರುವ ಮಂಗಳೂರಿಗೆ ಕೊಡುಗೆ

ಇನ್‌ಲ್ಯಾಂಡ್ ಬಿಲ್ಡರ್ಸ್ ಸಂಸ್ಥೆ ನಗರದಲ್ಲಿ ಉತ್ತಮ ವಿನ್ಯಾಸದ ಕಟ್ಟಡಗಳನ್ನು ನಿರ್ಮಿಸಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ. ಇದೀಗ ಮತ್ತೊಂದು ವಾಣಿಜ್ಯ ಸಂಕೀರ್ಣ ನಿರ್ಮಿಸುವ ಮೂಲಕ ಮಂಗಳೂರಿಗೆ ಕೊಡುಗೆ ನೀಡುತ್ತಿರುವುದಕ್ಕೆ ಅವರಿಗೆ ಶುಭ ಕೋರುವುದಾಗಿ ಶಾಸಕ ವೇದವ್ಯಾಸ ಕಾಮತ್  ತಿಳಿಸಿದ್ದಾರೆ.

ಸಮಾರಂಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಮತ್ತು ಆಡಳಿತ ನಿರ್ದೇಶಕ ಸಿರಾಜ್ ಅಹ್ಮದ್, ನಿರ್ದೇಶಕರಾದ ಸಿವಿಲ್ ಇಂಜಿನಿಯರ್ ಮೆರಾಜ್ ಯೂಸುಫ್ ಸಿರಾಜ್ ಮತ್ತು ಆರ್ಕಿಟೆಕ್ಚರ್ ಪದವೀಧರರಾದ ವಹಾಜ್ ಯೂಸುಫ್ ಸಿರಾಜ್, ಬಂಟರ ಯಾನೆ ನಾಡವರ ಮಾತೃ  ಸಂಘದ ಅಧ್ಯಕ್ಷ ಹಾಗೂ ಉದ್ಯಮಿ ಅಜಿತ್ ಕುಮಾರ್ ರೈ ಮಾಲಾಡಿ, ಅತಿಥಿಗಳಾದ ಸುಧೀರ್  ಶೆಟ್ಟಿ, ಜಯಪ್ರಕಾಶ್, ಪಂಕಜ್ ಶೆಟ್ಟಿ, ನೀನಾ ಶೆಟ್ಟಿ, ಉಮೇಶ್ ಪುತ್ರನ್, ದಿಲೀಪ್, ರೇಣುಕಾ ಚೌಟ, ಪ್ರೊಜೆಕ್ಟ್ ಇಂಜಿನಿಯರ್ ವಿನ್ಯಾಸ್, ಗುತ್ತಿಗೆದಾರ ಮಹಾಬಲ ಮೊದಲಾದವರು ಉಪಸ್ಥಿತರಿದ್ದರು.

ಇನ್‌ಲ್ಯಾಂಡ್ ಬ್ಯುಸಿನೆಸ್ ಪಾರ್ಕ್ ಬಿಜೈ ಮುಖ್ಯ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಕೆಎಸ್ಸಾರ್ಟಿಸಿ ಮತ್ತು ಭಾರತ್ ಮಾಲ್‌ಗೆ ಅತ್ಯಂತ ಸಮೀಪದಲ್ಲಿದೆ. ಈ ಪ್ರದೇಶವು ಎಂ.ಜಿ. ರೋಡ್ ಮತ್ತು ವಿಮಾನ ನಿಲ್ದಾಣದ ನಡುವಿನ ಪ್ರಮುಖ ಮಾರ್ಗವಾಗಿದ್ದು ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವ ವಾಣಿಜ್ಯ ಕೇಂದ್ರವಾಗಿದೆ.

ಹೆಚ್ಚಿನ ಮಾಹಿತಿಗಾಗಿ  www.inlandbuilders.net http://www.inlandbuilders.net ನ್ನು ಅಥವಾ ದೂ.ಸಂ.9880138015, 9972089099, 9972014055 ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X