ಗ್ರಾಪಂ ಚುನಾವಣೆ : ಮದ್ಯ ಮಾರಾಟ ನಿಷೇಧ
ಉಡುಪಿ, ಡಿ.17: ಜಿಲ್ಲೆಯಲ್ಲಿ ಚುನಾವಣೆ ನಡೆಯಲಿರುವ ಗ್ರಾಪಂಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣೆ ಶಾಂತಿ ಯುತ ಹಾಗೂ ಮುಕ್ತವಾಗಿ ನಡೆಯುವಂತಾಗಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ, ಡಿ.22ರಂದು ಉಡುಪಿ, ಹೆಬ್ರಿ, ಬ್ರಹ್ಮಾವರ ಹಾಗೂ ಬೈಂದೂರು ತಾಲೂಕಿನಲ್ಲಿ ನಡೆಯುವ ಮೊದಲ ಹಂತದ ಚುನಾವಣೆಗೆ ಡಿ.20ರ ಸಂಜೆ 5 ಗಂಟೆಯಿಂದ ಡಿ.22ರ ಸಂಜೆ 5 ಗಂಟೆಯವರೆಗೆ ಹಾಗೂ ಡಿ.27ರಂದು ಕುಂದಾಪುರ, ಕಾರ್ಕಳ ಹಾಗೂ ಕಾಪು ತಾಲೂಕಿನಲ್ಲಿ ನಡೆಯುವ ಎರಡನೇ ಹಂತದ ಚುನಾವಣೆಗೆ ಡಿ.25ರ ಸಂಜೆ 5 ಗಂಟೆಯಿಂದ ಡಿ.27ರ ಸಂಜೆ 5ರವರೆಗೆ ಚುನಾವಣೆ ನಡೆಯುವ ಗ್ರಾಪಂಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯಸಾಗಾಣಿಕೆ, ಶೇಖರಣೆ ಮತ್ತು ಮಾರಾಟ ಮಾಡುವು ದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
Next Story





