Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ಸರಕಾರ- ಯುಕೆ ನಡುವೆ ಉನ್ನತ...

ರಾಜ್ಯ ಸರಕಾರ- ಯುಕೆ ನಡುವೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತ ಒಡಂಬಡಿಕೆಗೆ ಸಹಿ

ವಾರ್ತಾಭಾರತಿವಾರ್ತಾಭಾರತಿ17 Dec 2020 8:26 PM IST
share
ರಾಜ್ಯ ಸರಕಾರ- ಯುಕೆ ನಡುವೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತ ಒಡಂಬಡಿಕೆಗೆ ಸಹಿ

ಬೆಂಗಳೂರು, ಡಿ.17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ರಾಜ್ಯ ಸರಕಾರ ಮತ್ತು ಬ್ರಿಟಿಷ್ ಸರಕಾರದ ನಡುವೆ ಗುರುವಾರ ಸಹಿ ಮಾಡಲಾಯಿತು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಾಯಕತ್ವ ಬೆಳವಣಿಗೆಗೆ ಸಂಬಂಧಿಸಿದಂತೆ ಮೊಟ್ಟಮೊದಲ ಬಾರಿಗೆ ಮೂರು ವರ್ಷಗಳ ಅವಧಿಯ ಒಪ್ಪಂದಕ್ಕೆ ಎರಡೂ ಸರಕಾರಗಳು ಸಹಿ ಮಾಡಿವೆ. ಸಹಕಾರ, ವಾಣಿಜ್ಯ ಮತ್ತು ವ್ಯಾಪಾರ, ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣಾ ಮತ್ತು ಸಂಸ್ಕೃತಿ ಮುಂತಾದ ಹಲವು ಕ್ಷೇತ್ರಗಳಿಗೆ ಭಾರತ ಮತ್ತು ಬ್ರಿಟಿಷ್ ನಡುವಿನ ಸಂಬಂಧ ವ್ಯಾಪಿಸಿದೆ ಎಂದರು.

ರಾಜ್ಯ ಸರಕಾರದ ಗ್ಲೋಬಲ್ ಇನ್ನೋವೇಷನ್ ಅಲಯನ್ಸ್ ಕಾರ್ಯಕ್ರಮವು ವಿಶ್ವದಾದ್ಯಂತ ಎಲ್ಲ ರಾಷ್ಟ್ರಗಳೊಂದಿಗೆ ನಾವೀನ್ಯತಾ ಪಾಲುದಾರಿಕೆಯನ್ನು ಹೆಚ್ಚಿಸುವ ಮೂಲಕ ಕರ್ನಾಟಕವನ್ನು ಮುಂಚೂಣಿಯಲ್ಲಿರುವ ತಂತ್ರಜ್ಞಾನ ಹಬ್ ಎಂಬ ಜಾಗತಿಕ ಕೀರ್ತಿಗೆ ಪಾತ್ರವಾಗಿಸಿದೆ. ಯು.ಕೆ ಕರ್ನಾಟಕದ ಬಹುಮುಖ್ಯ ಜಿ.ಐ.ಎ ಪಾಲುದಾರನಾಗಿದ್ದು, 2017-18ರಲ್ಲಿ ಶೇ.38ರಷ್ಟು ಹೂಡಿಕೆಯನ್ನು ಭಾರತದಲ್ಲಿ ಬ್ರಿಟಿಷ್ ಸರಕಾರ ಮಾಡಿದೆ. ಟೆಕ್ ಹಬ್, ಟೆಕ್ ಕ್ಲಸ್ಟರ್ಸ್ ಸ್ಥಾಪನೆ ಹಾಗೂ ಗೋ ಗ್ಲೋಬಲ್‍ನಂತಹ ಕಾರ್ಯಕ್ರಮಗಳು ಭಾರತದಿಂದ ನಾವೀನ್ಯತಾ ಸ್ಟಾರ್ಟ್ ಅಪ್‍ಗಳನ್ನು ಯು.ಕೆಗೆ ತಲುಪಿಸಲು ಸಾಧ್ಯವಾಗಿಸಿರುವುದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ತಿಳಿಸಿದರು.

ನಗರಾಭಿವೃದ್ಧಿ ಇಲಾಖೆಯು ಬ್ರಿಟಿಷ್ ಸರಕಾರದೊಂದಿಗೆ ಹವಾಮಾನ ಸ್ಥಿತಿಸ್ಥಾಪಕ ನಗರಗಳ ಸಮೃದ್ಧ ನಗರಾಭಿವೃದ್ಧಿ ಕಾರ್ಯಕ್ರಮದ ಮೂಲಕ ಈಗಾಗಲೇ ಸಹಯೋಗವನ್ನು ಬೆಳೆಸಿದೆ. ಈ ಮೂಲಕ ಬೆಂಗಳೂರಿನಲ್ಲಿ ಬಹುವಿಧ ಸಾರಿಗೆ ಹಬ್‍ಗಳ ವಿನ್ಯಾಸ ಮತ್ತು ಕಾರ್ಯಾಚರಣೆಗೆ ಪರಿವರ್ತಿತ ಯೋಜನೆಯನ್ನು ತರುವಲ್ಲಿ ಸಹಕಾರಿಯಾಗಿದೆ. ಸಮಗ್ರ ಸಾರಿಗೆ ಪ್ರಾಧಿಕಾರ ಮತ್ತು ಸಾರಿಗೆ ಪರಿವೀಕ್ಷಣಾಲಯವನ್ನು ಯುಕೆ ಕಾಟಪಲ್ಟ್‍ನ ಸಹಯೋಗದೊಂದಿಗೆ ಜಾರಿಗೆ ತರಲಾಗುತ್ತಿದೆ ಎಂದು ಯಡಿಯೂರಪ್ಪ ಹೇಳಿದರು.

ಈ ಯೋಜನೆಯು ವಾಯುಮಾಲಿನ್ಯ ತಡೆಗೆ ನವೀನ ಮಾದರಿಗಳನ್ನು ಕಲ್ಪಿಸುತ್ತದೆ. ಈ ಕ್ಷೇತ್ರದಲ್ಲಿ ಕರ್ನಾಟಕದ ನಾಯಕತ್ವವನ್ನು ಪ್ರತಿಫಲಿಸಲು ಇದೊಂದು ವೇದಿಕೆಯಾಗಿದ್ದು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಯೋಜನೆಗಳನ್ನು ರೂಪಿಸಬಹುದಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಬ್ರಿಟಿಷ್ ಕೌನ್ಸಿಲ್‍ನ (ಭಾರತ) ನಿರ್ದೇಶಕ ಬಾರ್ಬರಾ ವಿಕ್‍ಹ್ಯಾಮ್ ಮಾತನಾಡಿ, ಈ ಒಪ್ಪಂದವು ಭಾರತ ಸರಕಾರ ಮತ್ತು ಯುಕೆ ನಡುವಿನ ಶೈಕ್ಷಣಿಕ ಸಂಬಂಧವನ್ನು ಸುಭದ್ರಗೊಳಿಸುವುದರ ಜೊತೆಗೆ ಭಾರತದ ರಾಷ್ಟ್ರೀಯ ಶಿಕ್ಷಣ ನೀತಿ-2020ರಲ್ಲಿ ತಿಳಿಸಲಾಗಿರುವ ಜ್ಞಾನ ವರ್ಧನೆಯ ಆಶಯವನ್ನು ಬೆಂಬಲಿಸಲಿದೆ. ಕರ್ನಾಟಕದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳನ್ನು ಸೃಜಿಸಿ ರಾಜ್ಯ ಸರಕಾರದ ಗುಣಮಟ್ಟವುಳ್ಳ ಉನ್ನತ ಶಿಕ್ಷಣ ವ್ಯವಸ್ಥೆ ಕಲ್ಪಿಸುವ ಗುರಿಯನ್ನು ತಲುಪಲು ನೆರವಾಗಲಿದೆ ಎಂದರು.

ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಮಾತನಾಡಿ, ಶಿಕ್ಷಣದಲ್ಲಿ ಮಹತ್ವದ ಬದಲಾವಣೆಯನ್ನು ತರಲು ಭಾರತ ಸನ್ನದ್ಧವಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯು ಇದಕ್ಕೆ ಪೂರಕವಾದ ಅವಕಾಶವನ್ನು ಕಲ್ಪಿಸಲಿದೆ. ಶಿಕ್ಷಣ ನೀತಿಯನ್ನು ಜಾರಿಗೆ ತರುವಲ್ಲಿ ರಾಜ್ಯ ಸರಕಾರ ಮುಂಚೂಣಿಯಲ್ಲಿದ್ದು, ಬ್ರಿಟಿಷ್ ಕೌನ್ಸಿಲ್ ಮೂಲಕ ಯುಕೆ ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗಿನ ಸಹಯೋಗ ಸಮಯೋಚಿತವಾಗಿದೆ. ಯೋಜಿತ ಕ್ರಮಗಳ ಮೂಲಕ ಉನ್ನತ ಶಿಕ್ಷಣದ ಪಾಲುದಾರರಿಗೆ ಹೆಚ್ಚಿನ ಲಾಭವನ್ನು ಈ ಸಹಯೋಗ ಮಾಡಿಕೊಡಲಿದೆ ಎಂದು ಅಭಿಪ್ರಾಯಪಟ್ಟರು.

ಬ್ರಿಟಿಷ್ ಕೌನ್ಸಿಲ್‍ನ ದಕ್ಷಿಣ ಭಾರತ ನಿರ್ದೇಶಕಿ ಜಾನಕಿ ಪುಷ್ಪನಾಥನ್ ಮಾತನಾಡಿ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಜಗತ್ತಿನ ಎಲ್ಲ್ಲ ಸರಕಾರಗಳ ಪ್ರಮುಖ ಆಶಯವಾಗಿದ್ದು, ಒಪ್ಪಂದವು ಈ ಆಶಯವನ್ನು ಈಡೇರಿಸುವಲ್ಲಿ ಸಹಕಾರಿಯಾಗಲಿದೆ. ದಕ್ಷಿಣ ಭಾರತದ ಅದರಲ್ಲೂ ಕರ್ನಾಟಕದ ವಿದ್ಯಾರ್ಥಿ ಮತ್ತು ಸಂಶೋಧಕರಿಗೆ ಇದು ನೆರವಾಗಲಿದೆ.

ಈ ಒಡಂಬಡಿಕೆಯು ಎರಡೂ ದೇಶಗಳ ನಡುವೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ಹಾಗೂ ಸಾಮಾಜಿಕ ಸಂಯೋಜನೆಗೆ ಪರಸ್ಪರ ಲಾಭದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಭಾರತ ಸರಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಉಲ್ಲೇಖಿಸಿರುವ ಫಲಿತಾಂಶಗಳನ್ನು ಸಾಧಿಸಲು ಬ್ರಿಟಿಷ್ ಕೌನ್ಸಿಲ್ ಹಾಗೂ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ನಡುವೆ ಸಹಿ ಮಾಡಿರುವ ಒಪ್ಪಂದವು ಸಹಾಯಕವಾಗಲಿದೆ. ರಾಜ್ಯ ಹಾಗೂ ಯುಕೆನಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳ ನಡುವೆ ವಿದ್ಯಾರ್ಥಿ ಹಾಗೂ ಭೋದಕ ವರ್ಗದ ವಿನಿಮಯ ಮತ್ತು ಸಂಶೋಧನೆಯನ್ನು ಹೆಚ್ಚಿಸಲು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಅಂತರಾಷ್ಟ್ರೀಕರಣವನ್ನು ಒಡಂಬಡಿಕೆಯು ಬೆಂಬಲಿಸಲಿದೆ ಎಂದು ಅವರು ಹೇಳಿದರು.

ಎರಡೂ ದೇಶಗಳ ಉನ್ನತ ಶಿಕ್ಷಣ ಸಂಸ್ಥೆಗಳ ನಡುವೆ ಶಿಕ್ಷಣ ಮತ್ತು ಸಂಶೋಧನಾ ಪಾಲುದಾರಿಕೆ, ಬೋಧಕ ವರ್ಗದವರಿಗೆ ನಾಯಕತ್ವ ಅಭಿವೃದ್ಧಿ ಮುಂತಾದ ಕ್ರಮಗಳ ಮೂಲಕ ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಕ್ರಮ ವಹಿಸಲಾಗುವುದು ಎಂದು ಜಾನಕಿ ಪುಷ್ಪನಾಥನ್ ತಿಳಿಸಿದರು. ಯುಕೆ ವಿದೇಶಾಂಗ, ಕಾಮನ್ ವೆಲ್ತ್ ಮತ್ತು ಅಭಿವೃದ್ಧಿ ವ್ಯವಹಾರಗಳ ಸಚಿವ ಡಾಮಿನಿಕ್ ರಾಬ್, ಬ್ರಿಟಿಷ್ ಕೌನ್ಸಿಲ್ ಅಧಿಕಾರಿಗಳು, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಒಡಂಬಡಿಕೆಯಲ್ಲಿನ ಕಾರ್ಯಕ್ರಮಗಳು

ಎರಡೂ ರಾಷ್ಟ್ರಗಳು ಹಿತಾಸಕ್ತಿದಾರರು, ಶಿಕ್ಷಣ ತಜ್ಞರು, ಶೈಕ್ಷಣಿಕ ಆಡಳಿತಗಾರರು, ಕಾರ್ಯನೀತಿ ನಿರೂಪಕರು, ಹಾಗೂ ನಿಯಂತ್ರಕ ಸಂಸ್ಥೆಗಳ ನಡುವೆ ಸಭೆಗಳನ್ನು ಆಯೋಜಿಸುವುದು. ಕಾಲೇಜು ಶಿಕ್ಷಣ ಪ್ರವೇಶಿಸುವ ಹಂತದಲ್ಲಿ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷೆ ಕೌಶಲಾಭಿವೃದ್ಧಿಗೆ ಬೆಂಬಲಿತ ಕ್ರಮಗಳನ್ನು ಕೈಗೊಳ್ಳುವುದು. ಪರಿಕಲ್ಪನೆಗಳ ವಿನಿಮಯಕ್ಕೆ ಅನುವು ಮಾಡಿಕೊಡುವುದು, ಶಿಕ್ಷಣ ಕಾರ್ಯಕ್ರಮಗಳನ್ನು ಯೋಜಿಸಲು ಸೂಕ್ತ ನೀಲನಕ್ಷೆ ರೂಪಿಸುವುದು. ಹೊಸ ಜ್ಞಾನಶಾಖೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಶಿಕ್ಷಣ ಕಾರ್ಯನೀತಿಯ ಶಿಫಾರಸುಗಳಿಗೆ ಅನುಗುಣವಾಗಿ ಯು.ಕೆ. ಸಂಸ್ಥೆಗಳೊಂದಿಗೆ ಸಹಭಾಗಿತ್ವಕ್ಕೆ ಸೇತುವಾಗುವುದು. ಕರ್ನಾಟಕ ಮತ್ತು ಸಂಯುಕ್ತ ಸಂಸ್ಥಾನದಲ್ಲಿ ಉನ್ನತ ಶಿಕ್ಷಣ ಬೋಧಕ ವೃಂದದಲ್ಲಿ ನಾಯಕತ್ವ ವೃದ್ಧಿ, ವಿದ್ಯಾರ್ಥಿಗಳು ಮತ್ತು ಬೋಧಕರ ಮಟ್ಟದಲ್ಲಿ ಎರಡೂ ದೇಶಗಳ ನಡುವೆ ಪರಸ್ಪರ ವಿನಿಮಯಕ್ಕೆ ಅನುವು ಮಾಡಿಕೊಡುವುದು. ಶೈಕ್ಷಣಿಕ ಸಂಶೋಧನೆ ಹಾಗೂ ಶಿಕ್ಷಣ ಗುಣಮಟ್ಟದ ಅಂತರರಾಷ್ಟ್ರೀಯಕರಣದ ಬಗ್ಗೆ ಗಮನ ಕೇಂದ್ರೀಕರಿಸುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X