ಭಟ್ಕಳ: ಡಾ.ಜಲಾಲುದ್ದೀನ್ ನಿಧನ

ಭಟ್ಕಳ : ನಗರದ ಖ್ಯಾತ ವೈದ್ಯ ಹಾಗೂ ಇಲ್ಲಿನ ಪ್ರತಿಷ್ಟಿತ ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಮಾಜಿ ಅಧ್ಯಕ್ಷರಾಗಿದ್ದ ಡಾ. ಜಲಾಲುದ್ದೀನ್ (85) ಗುರುವಾರ ಬೆಳಗ್ಗೆ ನಿಧನರಾದರು. ಇವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, 4 ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗನ್ನು ಅಗಲಿದ್ದಾರೆ.
ಕಳೆದ 53 ವರ್ಷಗಳ ಸುದೀರ್ಘ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಇವರು ಭಟ್ಕಳ ತಾಲೂಕಿನ ಜನಪ್ರೀಯ ವ್ಯಕ್ತಿಯಾಗಿದ್ದರು. ಭಟ್ಕಳ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಯಾಗಿ ಸೇವೆ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ ಇವರು ನಂತರ ಸರ್ಕಾರಿ ಹುದ್ದೆಯನ್ನು ತ್ಯಜಿಸಿ ತಮ್ಮದೆ ಸ್ವಂತ ಕ್ಲಿನಿಕ್ ಸ್ಥಾಪಿಸಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡರು. ನಂತರ ನಿಷಾತ್ ನರ್ಸಿಂಗ್ ಹೋಂ ಸ್ಥಾಪಿಸಿ ತಮ್ಮ ಸೇವಾ ಕಾರ್ಯವನ್ನು ವಿಸ್ತರಿಸಿಕೊಂಡಿದ್ದರು. ಭಟ್ಕಳ ವೈದ್ಯಕೀಯ ಸಂಘದ ಅಧ್ಯಕ್ಷರಾಗಿಯೂ ಇವರು ಹಲವು ವರ್ಷಗಳ ಕಾಲ ಸೇವೆಸಲ್ಲಿದ್ದಾರೆ.
Next Story





