ಯುಜಿಸಿಇಟಿ 2020-ಎರಡನೆ ಸುತ್ತಿನ ಸೀಟು ಹಂಚಿಕೆ ಪ್ರಕಟಣೆ
ಬೆಂಗಳೂರು, ಡಿ.17: ಯುಜಿಸಿಇಟಿ-2020 ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮ ಸೈನ್ಸ್ ಕೋರ್ಸುಗಳಿಗೆ ಎರಡನೆ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಡಿ.16ರಂದು ಪ್ರಾಧಿಕಾರದ ವೆಬ್‍ಸೈಟ್ http:/kea.kar.nic.in ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಮುಂದಿನ ಸುತ್ತುಗಳಲ್ಲಿ ಭಾಗವಹಿಸಲು ನಿಗದಿಪಡಿಸಿರುವ ಅರ್ಹತೆ ಮತ್ತು ಮುಂದಿನ ಸುತ್ತುಗಳಲ್ಲಿ ಬರಬಹುದಾದ ಸೀಟುಗಳನ್ನು ಗಮನದಲ್ಲಿಟ್ಟಿಕೊಂಡು ಪೋಷಕರ ಜೊತೆ ಚರ್ಚಿಸಿ ಸೂಕ್ತವಾದ CHOICE ಅನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಿದೆ.
ಡಿಪ್ಲೊಮ ಸಿಇಟಿ-2020 ಅಣುಕು ಸೀಟು ಹಂಚಿಕೆ: ಡಿಸಿಇಟಿ-2020ರಲ್ಲಿ ಅಭ್ಯರ್ಥಿಗಳು ದಾಖಲಿಸಿದ ಇಚ್ಛೆ, ಆಯ್ಕೆಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಕೋರ್ಸುಗಳಿಗೆ ಅಣುಕು ಸೀಟು ಹಂಚಿಕೆಯನ್ನು ಮಾಡಿ ಫಲಿತಾಂಶವನ್ನು ಪ್ರಾಧಿಕಾರದ ವೆಬ್‍ಸೈಟಿನಲ್ಲಿ ಡಿ.16ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಫಲಿತಾಂಶವನ್ನು ಪರಿಶೀಲಿಸಿದ ನಂತರ ಇಚ್ಛೆ, ಆಯ್ಕೆಗಳನ್ನು ಅವಶ್ಯವಿದ್ದಲ್ಲಿ ಬದಲಾಯಿಸಬಹುದಾಗಿದೆ/ಸೇರಿಸಬಹುದಾಗಿದೆ/ಅಳಿಸಬಹುದಾಗಿದೆ. ನಿಗದಿತ ಸಮಯದ ನಂತರ ಬದಲಾವಣೆಗಳನ್ನು ಮಾಡಲು ಅವಕಾಶವಿರುವುದಿಲ್ಲ. ಇಲ್ಲಿಯವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸದೆ ಇರುವ ಅರ್ಹ ಅಭ್ಯರ್ಥಿಗಳೂ ಸಹ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದಾಗಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.







