Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ನಾಯಕನ ಆಪ್ತರ ಮೇಲೆ...

ಕಾಂಗ್ರೆಸ್ ನಾಯಕನ ಆಪ್ತರ ಮೇಲೆ ಮುಸುಕುಧಾರಿಗಳಿಂದ ಗುಂಡಿನ ದಾಳಿ

ವಾರ್ತಾಭಾರತಿವಾರ್ತಾಭಾರತಿ18 Dec 2020 5:57 PM IST
share
ಕಾಂಗ್ರೆಸ್ ನಾಯಕನ ಆಪ್ತರ ಮೇಲೆ ಮುಸುಕುಧಾರಿಗಳಿಂದ ಗುಂಡಿನ ದಾಳಿ

ಬೆಳಗಾವಿ, ಡಿ.18: ಗ್ರಾಮ ಪಂಚಾಯತ್ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ಸಂದರ್ಭದಲ್ಲಿಯೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪ್ತರು ಸೇರಿದಂತೆ ಇಬ್ಬರ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಶಾಸಕರ ಆಪ್ತ ಕಾರ್ಯದರ್ಶಿ ಕಿರಣಸಿಂಗ್ ರಜಪೂತ ಮತ್ತು ಕಾಂಗ್ರೆಸ್ ಮುಖಂಡ ಭರಮಾ ದೂಪದಾಳೆ ಎಂಬುವವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭರಮಾ ದೂಪದಾಳೆ ಮತ್ತು ಕಿರಣ ಸಿಂಗ್ ರಜಪೂತ, ಅಲತಾಪ ಚಜೆದಾರ ಅವರು ಗ್ರಾಮದ ಬಸ್ತಿ ಮಂದಿರ ಹತ್ತಿರ ಕುಳಿತು ಚುನಾವಣೆ ವಿಚಾರವಾಗಿ ಚರ್ಚೆ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಕಾಲ್ನಡಿಗೆ ಮೂಲಕ ಬಂದಿರುವ ಅನಾಮಧೇಯ ವ್ಯಕ್ತಿ ಕಂಟ್ರಿ ಮೇಡ್ ಪಿಸ್ತೂಲಿನಿಂದ ಗುಂಡಿನ ದಾಳಿ ನಡೆಸಿದ್ದಾನೆ. ಸಣ್ಣ ಪುಟ್ಟ ಗಾಯಗಳಾಗಿದ್ದರಿಂದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದಾಳಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಪ್ರಕರಣವನ್ನು ಶೀಘ್ರಗತಿಯಲ್ಲಿ ಭೇದಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ದಾಳಿ ಘಟನೆಯನ್ನು ಸತೀಶ್ ಜಾರಕಿಹೊಳಿ ತೀವ್ರವಾಗಿ ಖಂಡಿಸಿದ್ದಾರೆ.

ಯಮಕನಮರಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸಾಕಷ್ಟು ಜನರು ಕಣದಲ್ಲಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಕಾಂಗ್ರೆಸ್ ಶಂಕೆ ವ್ಯಕ್ತಪಡಿಸಿದೆ.

ಅಂಕಲಗಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಗ್ರಾಮದಲ್ಲಿ ಮತ್ತೆ ಗೂಂಡಾಗಿರಿ ನಡೆದಿರುವುದು ವರದಿಯಾಗಿದೆ. ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ರಾಜು ತಳವಾರ ಎಂಬುವವರು ಮೂವರು ವ್ಯಕ್ತಿಗಳ ಮೇಲೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದವರನ್ನು ಸಂಜು ಚಿಕ್ಕುಗೋಲ್, ಆಕಾಶ್ ಚಿಕ್ಕಿಗೋಲ್, ಅಕ್ಷಯ್ ಚಿಕ್ಕುಗೋಲ್ ಎಂದು ಗುರುತಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. 

ಘಟನೆ ಬಳಿಕ ರಾಜು ತಳವಾರ್ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಈ ನಡುವೆ ಅಂಕಲಗಿಯಲ್ಲಿರುವ ತಳವಾರ್ ಕುಟುಂಬದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಶೆ 20 ಕುಡಗೋಲ ಹಾಗೂ ಹಲವು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ದಾಖಲೆ ಇಲ್ಲದ ರೂ. 83 ಲಕ್ಷ ನಗದನ್ನೂ ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ರಾಜು ತಳವಾರಗೆ ರಾಜಕೀಯ ರಕ್ಷಣೆ ಇದೆ. ಅಂಕಲಗಿ ಗ್ರಾಮದಲ್ಲಿ ಮತ್ತೆ ಗೂಂಡಾಗಿರಿ ನಡೆದಿದೆ. ಕಳೆದ 6 ತಿಂಗಳಿನಲ್ಲಿ ಮೂರು ಬಾರಿ ಇಂತಹ ಘಟನೆ ನಡೆದಿದೆ. ಇಲ್ಲಿ ಭಯದ ವಾತಾವರಣ ಮುಂದುವರೆದಿದ್ದು, ಪೊಲೀಸರು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು. ಮಾರಾಮಾರಿ ಎರಡು ಕುಟುಂಬಗಳ ನಡುವೆ ನಡೆದಿದೆ ಹೌದು, ಆದರೆ, ಎರಡು ಕುಟುಂಬಗಳೂ ಪ್ರತ್ಯೇಕ ಪಕ್ಷಗಳಿಗೆ ಸಂಬಂಧಿಸಿದ್ದಾಗಿವೆ ಎಂದು ಸತೀಶ್ ಜಾರಕಿಹೊಳಿಯವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X