ಡಿ.19: ಉಡುಪಿ ಜಿಲ್ಲೆಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್
ಉಡುಪಿ, ಡಿ.18: ರಾಜ್ಯದ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಡಿ.19ರ ಶನಿವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಬೆಳಗ್ಗೆ 10:30ಕ್ಕೆ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಎಲ್ಲಾ ಮುನ್ಸಿಪಲ್ ಕಚೇರಿಯ ಅಧಿಕಾರಿ ಗಳೊಂದಿಗೆ, ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಕುರಿತು ಸಭೆ ನಡೆಸುವರು.
ನಂತರ ಜಿಲ್ಲೆಯಲ್ಲಿರುವ ಸರಕಾರಿ ಕಚೇರಿಗಳ ಪರಿವೀಕ್ಷಣೆ ನಡೆಸಿ ಉಡುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು.
Next Story