Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಯಿಘರ್‌ ಮುಸ್ಲಿಮರನ್ನು ಗುರುತಿಸುವ...

ಉಯಿಘರ್‌ ಮುಸ್ಲಿಮರನ್ನು ಗುರುತಿಸುವ ಸಾಫ್ಟ್‌ವೇರ್ ಜೊತೆ ಸಂಬಂಧವಿಲ್ಲ

ಚೀನಾದ ಆನ್‌ಲೈನ್ ಮಾರಾಟ ಕಂಪೆನಿ ಅಲಿಬಾಬಾ

ವಾರ್ತಾಭಾರತಿವಾರ್ತಾಭಾರತಿ18 Dec 2020 11:54 PM IST
share
ಉಯಿಘರ್‌ ಮುಸ್ಲಿಮರನ್ನು ಗುರುತಿಸುವ ಸಾಫ್ಟ್‌ವೇರ್ ಜೊತೆ ಸಂಬಂಧವಿಲ್ಲ

ಶಾಂಘೈ (ಚೀನಾ), ಡಿ. 18: ತನ್ನ ಕ್ಲೌಡ್-ಕಂಪ್ಯೂಟಿಂಗ್ ಘಟಕ ಅಭಿವೃದ್ಧಿಪಡಿಸಿರುವ ಮುಖ ಪತ್ತೆಹಚ್ಚುವ ಸಾಫ್ಟ್‌ವೇರ್‌ಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಚೀನಾದ ಬೃಹತ್ ಇ-ಕಾಮರ್ಸ್ (ಆನ್‌ಲೈನ್ ಮಾರಾಟ) ಕಂಪೆನಿ ಅಲಿಬಾಬಾ ಹೇಳಿದೆ.

ಈ ಸಾಫ್ಟ್‌ವೇರನ್ನು ಬಳಸಿ ದೇಶದ ಮುಸ್ಲಿಮ್ ಉಯಿಘರ್ ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಗುರುತಿಸಬಹುದಾಗಿದೆ.

ಇಂಥ ಸಾಫ್ಟ್‌ವೇರೊಂದನ್ನು ಅಲಿಬಾಬಾ ಅಭಿವೃದ್ಧಿಪಡಿಸಿದೆ ಎನ್ನುವ ವರದಿಯೊಂದು ಈ ವಾರ ಪ್ರಕಟಗೊಂಡ ಬಳಿಕ, ಅಲಿಬಾಬಾ ಕಂಪೆನಿ ವಿವಾದಕ್ಕೆ ಸಿಲುಕಿಕೊಂಡಿದೆ.

ಇಂಥ ಸಾಫ್ಟ್‌ವೇರನ್ನು ಅಲಿಬಾಬಾ ಕ್ಲೌಡ್ ಅಭಿವೃದ್ಧಿಪಡಿಸಿರುವುದು ತಿಳಿದು ತುಂಬಾ ಬೇಸರವಾಗಿದೆ ಎಂದು ಗುರುವಾರ ರಾತ್ರಿ ಆನ್‌ಲೈನ್‌ನಲ್ಲಿ ನೀಡಲಾದ ಹೇಳಿಕೆಯೊಂದರಲ್ಲಿ ಅಲಿಬಾಬಾ ಕಂಪೆನಿ ಹೇಳಿಕೊಂಡಿದೆ.

ಈ ತಂತ್ರಜ್ಞಾನವನ್ನು ಸಾಮರ್ಥ್ಯ ಪರೀಕ್ಷೆಗಾಗಿ ಮಾತ್ರ ಬಳಸಲಾಗಿದೆ ಹಾಗೂ ಅದನ್ನು ಯಾವುದೇ ಗ್ರಾಹಕರಿಗೆ ನೀಡಲಾಗಿಲ್ಲ ಎಂದು ಹೇಳಿರುವ ಕಂಪೆನಿ, ತನ್ನ ಉತ್ಪನ್ನಗಳಲ್ಲಿ ಇರುವ ಯಾವುದೇ ಜನಾಂಗೀಯ ಗುರುತನ್ನು ತೆಗೆದುಹಾಕಿರುವುದಾಗಿ ತಿಳಿಸಿದೆ.

‘‘ನಿರ್ದಿಷ್ಟ ಜನಾಂಗೀಯ ಗುಂಪುಗಳನ್ನು ಗುರುತಿಸುವುದಕ್ಕೆ ಅಥವಾ ಗುರಿಯಾಗಿಸುವುದಕ್ಕೆ ನಮ್ಮ ಸಾಫ್ಟ್‌ವೇರನ್ನು ಬಳಸಲು ನಾವು ಅವಕಾಶ ನೀಡುವುದಿಲ್ಲ’’ ಎಂದು ಹೇಳಿಕೆ ತಿಳಿಸಿದೆ.

ಚೀನಾದ ಮರುಶಿಕ್ಷಣ ಶಿಬಿರಗಳಲ್ಲಿ 10 ಲಕ್ಷಕ್ಕೂ ಅಧಿಕ ಉಯಿಘರ್ ಮುಸ್ಲಿಮರು ಮತ್ತು ಇತರ ಮುಸ್ಲಿಮ್ ಅಲ್ಪಸಂಖ್ಯಾತರನ್ನು ಕೂಡಿ ಹಾಕಲಾಗಿದೆ ಎಂದು ಅಂತರ್‌ರಾಷ್ಟ್ರೀಯ ಮಾನವಹಕ್ಕು ಗುಂಪುಗಳು ಹೇಳಿವೆ. ಆರಂಭದಲ್ಲಿ, ಇಂಥ ಶಿಬಿರಗಳು ಇರುವುದನ್ನು ಚೀನಾ ನಿರಾಕರಿಸಿತಾದರೂ, ಈಗ ಅವುಗಳನ್ನು ವೃತ್ತಿ ತರಬೇತಿ ಕೇಂದ್ರಗಳೆಂದು ಕರೆಯುತ್ತಿದೆ. ಧಾರ್ಮಿಕ ತೀವ್ರವಾದಕ್ಕೆ ಪರ್ಯಾಯವೊಂದನ್ನು ನೀಡಲು ಇಂಥ ವೃತ್ತಿ ತರಬೇತಿ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂದು ಅದು ಹೇಳುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X