Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನವರಿ 1 ರಿಂದ ಹತ್ತನೇ ತರಗತಿ ಮತ್ತು...

ಜನವರಿ 1 ರಿಂದ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ19 Dec 2020 1:54 PM IST
share
ಜನವರಿ 1 ರಿಂದ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭ

ಬೆಂಗಳೂರು,ಡಿ.19: ರಾಜ್ಯದಲ್ಲಿ 2021ರ ಜನವರಿ 1ನೆ ದಿನಾಂಕದಿಂದ 10ನೆ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿ ವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ರಾಜ್ಯದಲ್ಲಿ ಶಾಲೆ-ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಈ ತರಗತಿಗಳನ್ನು ಪ್ರಾರಂಭಿಸಿ, 15 ದಿನಗಳ ಕಾಲ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಇತರ ತರಗತಿಗಳನ್ನು ಪ್ರಾರಂಭಿಸುವ ಕುರಿತು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.

ಶಾಲೆಗಳನ್ನು ಮರುಪ್ರಾರಂಭಿಸುವ ಸಂದರ್ಭದಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ರಾಜ್ಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಮಕ್ಕಳು ಶಾಲೆಗೆ ಮತ್ತು ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ಕಡ್ಡಾಯ. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳಿಲ್ಲವೆಂದು ದೃಢೀಕರಿಸಬೇಕು.

ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು, ಪ್ರವೇಶ ಪಡೆಯುವ 72  ಗಂಟೆಗಳ ಅಂತರದಲ್ಲಿ ಕೋವಿಡ್ 19 ರ ಪರೀಕ್ಷೆ ಮಾಡಿಸಿ, ನೆಗೇಟಿವ್ ವರದಿಯನ್ನು ಸಲ್ಲಿಸಬೇಕು.

ಶಾಲೆ-ಕಾಲೇಜಿಗೆ ಹಾಜರಾತಿ ಕಡ್ಡಾಯವಲ್ಲ. ವಿದ್ಯಾರ್ಥಿಗಳು ಮನೆಯಲ್ಲಿಯೇ ಇದ್ದು ಆನ್ ಲೈನ್, ಯುಟ್ಯೂಬ್ ಚಾನೆಲ್ ಮತ್ತು ಇತರ ಮೂಲಗಳಿಂದಲೂ ಅಭ್ಯಾಸ ಮಾಡಬಹುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಶಾಲೆ-ಕಾಲೇಜುಗಳಲ್ಲಿ ತರಗತಿ ಕೊಠಡಿಗಳನ್ನು ಡಿಸ್-ಇನ್ಫೆಕ್ಷನ್ ಮಾಡಿಸುವ ಕುರಿತು ಮುನ್ನೆಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಅರ್ಧ ದಿನ ಮಾತ್ರ ತರಗತಿ ನಡೆಯಲಿದೆ. ಒಂದು ಕೊಠಡಿಯಲ್ಲಿ ಗರಿಷ್ಠ 15 ವಿದ್ಯಾರ್ಥಿಗಳಿಗೆ ತರಗತಿ ನಡೆಸಬೇಕು. ಬಿಸಿಯೂಟ ವಿತರಣೆ ಇರುವುದಿಲ್ಲ. ಬದಲಿಗೆ ಪ್ರಸ್ತುತ ಜಾರಿಯಲ್ಲಿರುವಂತೆ ಆಹಾರ ಸಾಮಗ್ರಿಯನ್ನು ಒದಗಿಸಲಾಗುವುದು.

ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತು ಶಿಕ್ಷಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಯಿತು.

ವಿದ್ಯಾಗಮ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ವಾರಕ್ಕೆ ಎರಡು ಬಾರಿ ಶಾಲೆಗೆ ಹಾಜರಾಗಬೇಕಾಗುವುದು.

ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಉಮಾಶಂಕರ್ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ; ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ. ಮುಖ್ಯಮಂತ್ರಿ @BSYBJP ಅಧ್ಯಕ್ಷತೆಯ ಇಂದಿನ ಸಭೆಯಲ್ಲಿ ತೀರ್ಮಾನ.

— CM of Karnataka (@CMofKarnataka) December 19, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X