Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಡಿಭಾಗದಿಂದ ನಗರ ಪ್ರವೇಶಿಸುವವರಿಗೆ...

ಗಡಿಭಾಗದಿಂದ ನಗರ ಪ್ರವೇಶಿಸುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಮನಪಾ ಆಯುಕ್ತ

ವಾರ್ತಾಭಾರತಿವಾರ್ತಾಭಾರತಿ19 Dec 2020 7:08 PM IST
share
ಗಡಿಭಾಗದಿಂದ ನಗರ ಪ್ರವೇಶಿಸುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಮನಪಾ ಆಯುಕ್ತ

ಮಂಗಳೂರು, ಡಿ.19: ಕೋವಿಡ್ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಗಡಿಭಾಗದಿಂದ ಮಂಗಳೂರು ನಗರ ಪ್ರವೇಶಿಸುವವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ ಶ್ರೀಧರ್ ಸೂಚಿಸಿದರು.

ಜಿಲ್ಲಾಡಳಿತ, ಜಿಪಂ, ಮಂಗಳೂರು ಮಹಾನಗರಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದ ವತಿಯಿಂದ ಕೋವಿಡ್-19 ಲಸಿಕೆಯ ಬಗ್ಗೆ ಪೂರ್ವ ತಯಾರಿ ಹಾಗೂ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಶನಿವಾರ ನಡೆದ ನಗರ ಲಸಿಕಾ ಕಾರ್ಯಪಡೆಯ ಚಾಲನಾ ಸಮಿತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಕಾಸರಗೋಡು ಸೇರಿದಂತೆ ಇನ್ನಿತರ ಗಡಿಭಾಗದ ಪ್ರದೇಶದಿಂದ ವ್ಯಾಪಾರ, ಉದ್ಯೋಗ ಇತ್ಯಾದಿ ಕೆಲಸಗಳ ನಿಮಿತ್ತ ನಗರಕ್ಕೆ ಪ್ರವೇಶಿಸುವ ಜನರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸುವ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಹಬ್ಬ, ಜಾತ್ರಾ ಮಹೋತ್ಸವ ಇರುವುದರಿಂದ ನಗರದ ಮಾರುಕಟ್ಟೆ, ಬೀದಿ ಬದಿ ವ್ಯಾಪಾರಿಗಳು ಹಾಗೂ ಬಂದರು ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟಿಗೆ ಹೆಚ್ಚು ಜನಸಂದಣಿ ಇರುವುದರಿಂದ ಈ ಪ್ರದೇಶದಲ್ಲಿ ಕೋವಿಡ್ ಸೋಂಕು ಹರಡುವ ಸಂಭವ ಇರುತ್ತದೆ. ಹಾಗಾಗಿ ಮುಂಜಾಗೃತ ಕ್ರಮವಾಗಿ ವ್ಯಾಪಾರಿಗಳಿಗೆ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆಯನ್ನು ಮಾಡಬೇಕು ಎಂದು ಅಕ್ಷಯ್ ಶ್ರೀಧರ್ ಹೇಳಿದರು.

ಮಂಗಳೂರು ನಗರ ಮಟ್ಟದಲ್ಲಿ ಕೋವಿಡ್-19 ಲಸಿಕೆಯ ವಿತರಣೆಗೆ ಎಲ್ಲಾ ರೀತಿಯ ಪೂರ್ವ ತಯಾರಿ ನಡೆಯುತ್ತಿದೆ, ಲಸಿಕೆಯ ಲಭ್ಯತೆ ಆಧಾರದಲ್ಲಿ ಹಾಗೂ ಆದ್ಯತೆಯ ಅನುಸಾರ ವಿತರಣೆ ಮಾಡಲಾಗುತ್ತದೆ ಎಂದು ಅಕ್ಷಯ್ ಶ್ರೀಧರ್ ಸ್ಪಷ್ಟಪಡಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ಮಾತನಾಡಿ ಸರಕಾರದ ನಿರ್ದೇಶನದಂತೆ ಲಸಿಕೆ ವಿತರಣೆಗೆ ಈಗಾಗಲೇ ಜಿಲ್ಲಾ, ನಗರ ಹಾಗೂ ತಾಲೂಕು ಟಾಸ್ಕ್ ಪೋರ್ಸ್ ತಂಡ ರಚಿಸಲಾಗಿದೆ. ಶೀಘ್ರವೇ ಲಸಿಕೆ ದೊರಕುವ ಸಾಧ್ಯತೆ ಇರುವುದರಿಂದ ಆದ್ಯತೆಯ ಮೇರೆಗೆ ಮೂರು ಹಂತದಲ್ಲಿ ಲಸಿಕೆಯು ವಿತರಣೆಯಾಗಲಿದೆ. ನೋಂದಣಿ ಮಾಡಿಕೊಂಡವರಿಗೆ ಲಸಿಕೆಯು ಪಡೆಯಲು ಅವಕಾಶ ಇರುತ್ತದೆ. ಈಗಾಗಲೇ ಲಸಿಕೆ ಹಂಚಿಕೆ ಸಂಬಂಧಿಸಿದಂತೆ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ವ್ಯವಸ್ಥಿತವಾಗಿ ತಯಾರು ಮಾಡಲಾಗುತ್ತಿದೆ ಎಂದರು.

ಜ.17ರಂದು 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲೀಯೋ ಕಾರ್ಯಕ್ರಮ ನಡೆಯಲಿದೆ. ಕೋವಿಡ್ ಮುಂಜಾಗೃತಾ ಕ್ರಮಗಳನ್ನು ಪಾಲಿಸಿ ಅಂಗನವಾಡಿ ಕೇಂದ್ರ, ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಮನೆ ಭೇಟಿಯ ಮೂಲಕ ಪಲ್ಸ್ ಪೋಲಿಯೋವನ್ನು ನೀಡಲಾಗುತ್ತದೆ. ಪ್ರತೀ 4 ಸಿಬ್ಬಂದಿಗಳ ಬೂತ್ ರಚಿಸಿದ್ದು, ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆಯುವ ಮಕ್ಕಳ ಸಂಖ್ಯೆ ಹೆಚ್ಚಿದರೆ ಬೂತ್ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಆರ್‌ಸಿಹೆಚ್ ಅಧಿಕಾರಿ ಡಾ. ರಾಜೇಶ್, ಆರ್‌ಎಂಒ ದುರ್ಗಾಪ್ರಸಾದ್, ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಡಾ.ಮಂಜಯ್ಯ ಶೆಟ್ಟಿ, ತಾಲೂಕು ವೈದ್ಯಾಧಿಕಾರಿ ಡಾ. ಸುಜಯ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X