Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಪ್ರತಿಭಟನೆ ಹಿಂದೆ ಕಾಂಗ್ರೆಸ್...

ರೈತರ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಷಡ್ಯಂತ್ರ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ19 Dec 2020 9:13 PM IST
share
ರೈತರ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಷಡ್ಯಂತ್ರ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಡಿ.19: ರೈತರ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ. ಪಕ್ಷದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಅಭಿವೃದ್ಧಿ ಯೋಜನೆಗಳ ಕುರಿತು ತಿಳಿಸುವ ಮೂಲಕ ಈ ಷಡ್ಯಂತ್ರಕ್ಕೆ ತಕ್ಕ ಉತ್ತರ ನೀಡಬೇಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.

ಶನಿವಾರ ಕೋರಮಂಗಲದ ಕಲಾದ್ವಾರಕ ಸಭಾಂಗಣದಲ್ಲಿ ನಡೆದ "ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ"ಯಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ದಿಲ್ಲಿಯಲ್ಲಿ ರೈತರ ಹೆಸರಿನಲ್ಲಿ ಸತ್ಯಾಗ್ರಹ ನಡೆಸುತ್ತಿರುವವರು ಪ್ರಧಾನಿಯವರು ಕೈಮುಗಿದು ಕೇಳಿದರೂ ಮಾತುಕತೆಗೆ ಬರುತ್ತಿಲ್ಲ. ಇದರ ಹಿಂದೆ ಕಾಂಗ್ರೆಸ್ ಪಕ್ಷದ ಪಿತೂರಿ ಇರುವುದೇ ಪ್ರತಿಭಟನೆಗೆ ಕಾರಣ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವವೇ ಇಲ್ಲ. ಅಧಿಕಾರ ಇಲ್ಲದ ಕಾರಣ ಕಾಂಗ್ರೆಸ್ಸಿಗರು ರೈತರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ದೇಶದ ಅತಿಹೆಚ್ಚು ಜನರು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ರೈತರ ಉತ್ಪನ್ನಗಳ ಇಳುವರಿ ಹೆಚ್ಚಳ ಹಾಗೂ ಆದಾಯ ದುಪ್ಪಟ್ಟು ಮಾಡಲು ಪ್ರಧಾನಿ ನರೇಂದ್ರ ಮೋದಿ ಅತ್ಯುಪಯುಕ್ತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದ ಅವರು, ನಮ್ಮದು ರೈತಪರ ಸರಕಾರ. ಕೃಷಿ, ಆರೋಗ್ಯ ಹಾಗೂ ಶಿಕ್ಷಣ ನಮ್ಮ ಆದ್ಯತೆಯಾಗಿದೆ. ಕೃಷಿಯನ್ನು ಲಾಭದಾಯಕ ಉದ್ದಿಮೆ ಮಾಡುವ ನಿಟ್ಟಿನಲ್ಲಿ ನಮ್ಮ ಸರಕಾರ ಗರಿಷ್ಠ ಪ್ರಯತ್ನ ಮಾಡುತ್ತಿದೆ ಎಂದರು.

ಪಕ್ಷದ ಸಂಘಟನೆಗಾಗಿ ಹಳ್ಳಿ ಹಳ್ಳಿಗೆ ಸುತ್ತಾಡಿದ್ದೇನೆ. ಅದರ ಪರಿಣಾಮವಾಗಿ ಪಕ್ಷದ ಶಾಸಕರ ಸಂಖ್ಯೆಯೂ ಹೆಚ್ಚಾಗುತ್ತಾ ಸಾಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಮತ್ತು ಕೇಂದ್ರದಲ್ಲಿ ನಮ್ಮ ಪಕ್ಷದ್ದೇ ಸರಕಾರ ರಚನೆ ಸಾಧ್ಯವಾಗಿದೆ. ರೈತರು ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶ ಮಾಡಿಕೊಡುವ ಕಾಯ್ದೆಯನ್ನು ಕೇಂದ್ರ ಸರಕಾರ ಅನುಷ್ಠಾನಕ್ಕೆ ತಂದಿದೆ. ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಕೇಂದ್ರ ಸರಕಾರವು ರೈತರಿಗೆ 6 ಸಾವಿರ ರೂಪಾಯಿ ನೀಡುತ್ತಿದ್ದು, ರಾಜ್ಯ ಸರಕಾರವು ಇದಕ್ಕೆ ಇನ್ನೂ 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿದೆ. ಆರ್ಥಿಕ ಸಂಕಷ್ಟ ಇದ್ದರೂ ರೈತರಿಗೆ ನೆರವಾಗುವ ವಿಚಾರದಲ್ಲಿ ಸರಕಾರ ಮುಂಚೂಣಿಯಲ್ಲಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್‍ಪಿ) ರೈತರ ಉತ್ಪನ್ನ ಖರೀದಿಗೆ ಮೋದಿ ಸರಕಾರವು ಆರು ವರ್ಷಗಳಲ್ಲಿ 8 ಲಕ್ಷ ಕೋಟಿ ರೂಪಾಯಿ ವ್ಯಯಸಿದೆ. ಆದರೆ, ಯುಪಿಎ ಸರಕಾರವು 10 ವರ್ಷಗಳಲ್ಲಿ 3.5 ಲಕ್ಷ ಕೋಟಿ ರೂಪಾಯಿಯನ್ನಷ್ಟೇ ಈ ಉದ್ದೇಶಕ್ಕೆ ಬಳಸಿತ್ತು ಎಂದು ಯಡಿಯೂರಪ್ಪ ತಿಳಿಸಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಕೃಷಿಯಲ್ಲಿ ಹೂಡಿಕೆ ಹೆಚ್ಚಳದ ದೃಷ್ಟಿಯಿಂದ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಕೈಗಾರಿಕಾ ಸ್ಥಾಪನೆಗೆ ಇದ್ದ ಸಮಸ್ಯೆಗಳನ್ನೂ ಬಗೆಹರಿಸಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಸೋತಾಗ ಇಲ್ಲಿ ರೈತರಿಗೆ ಶೋಷಣೆ ಆದುದೇ ಸೋಲಿಗೆ ಕಾರಣ ಎಂದು ಆ ಪಕ್ಷದ ಮುಖಂಡರು ಹೇಳಿದ್ದರು. ಕೇಂದ್ರ ಸರಕಾರವು ಹಿಂದಿನ ಯುಪಿಎ ಸರಕಾರ ಪ್ರಸ್ತಾಪಿಸಿದ್ದ ಕೃಷಿ ಸುಧಾರಣಾ ಕಾಯ್ದೆಗಳನ್ನು ಜಾರಿಗೊಳಿಸಿದೆ ಎಂಬುದನ್ನು ಆ ಪಕ್ಷದ ಮುಖಂಡರು ಮರೆತು ರೈತರ ಪ್ರತಿಭಟನೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದರು.

ನಾವು ಎಪಿಎಂಸಿ ರದ್ದು ಮಾಡಿಲ್ಲ. ಇಷ್ಟ ಬಂದವರಿಗೆ ರೈತರ ಉತ್ಪನ್ನ ಮಾರಾಟ ಮಾಡುವ ಅವಕಾಶವನ್ನಷ್ಟೇ ನೀಡಿದ್ದೇವೆ ಹಾಗೂ ಆ ಮೂಲಕ ದಲ್ಲಾಳಿಗಳ ಕಪಿಮುಷ್ಟಿಯಿಂದ ರೈತರನ್ನು ಹೊರತಂದಿದ್ದೇವೆ ಎಂದು ಅವರು ತಿಳಿಸಿದರು.

ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಪದಾಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X