ಐಎಸ್‌ಎಲ್: ಚೆನ್ನೈಯಿನ್‌ಗೆ ರೋಚಕ ಜಯ

ಪಣಜಿ, ಡಿ.20: ರಹೀಂ ಅಲಿ 53ನೇ ನಿಮಿಷದಲ್ಲಿ ಗಳಿಸಿದ ಗೋಲಿನ ನೆರವಿನಿಂದ ಚೆನ್ನೈಯಿನ್ ಎಫ್ ಸಿ ತಂಡ ಇಂಡಿಯನ್ ಸೂಪರ್ ಲೀಗ್(ಐಎಸ್‌ಎಲ್)ನಲ್ಲಿ ಆತಿಥೇಯ ಗೋವಾ ಎಫ್ ಸಿ ವಿರುದ್ಧ 2-1 ಗೋಲುಗಳ ಅಂತರದಿಂದ ಜಯ ಸಾಧಿಸಿದೆ.
ಇಲ್ಲಿನ ಫಟೊರ್ಡಾ ಸ್ಟೇಡಿಯಂನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ 5ನೇ ನಿಮಿಷದಲ್ಲಿ ಗೋಲು ಗಳಿಸಿದ ರಫೆಲ್ ಕ್ರಿವೆಲ್ಲಾವರೊ ಚೆನ್ನೈಯಿನ್‌ಗೆ 1-0 ಮುನ್ನಡೆ ಒದಗಿಸಿಕೊಟ್ಟರು. 9ನೇ ನಿಮಿಷದಲ್ಲಿ ಗೋಲು ಗಳಿಸಿದ ಜಾರ್ಜ್ ಒರಿಟ್ಜ್ ಮೆಂಡೊಝಾ ಅವರು ಗೋವಾ 1-1ರಿಂದ ಸಮಬಲ ಸಾಧಿಸಲು ನೆರವಾದರು.
ಮೊದಲಾರ್ಧದ ಅಂತ್ಯಕ್ಕೆ ಉಭಯ ತಂಡಗಳು 1-1ರಿಂದ ಸಮಬಲ ಸಾಧಿಸಿದ್ದವು. ರಹೀಂ ಅಲಿ 53ನೇ ನಿಮಿಷದಲ್ಲಿ ಗೋಲು ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
Next Story





