Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖಾಸಗಿ ಶಾಲಾ ಆಡಳಿತ ಮಂಡಳಿ ಜತೆ ಶಾಮೀಲಾದ...

ಖಾಸಗಿ ಶಾಲಾ ಆಡಳಿತ ಮಂಡಳಿ ಜತೆ ಶಾಮೀಲಾದ ಸರಕಾರ: ಸಿದ್ದರಾಮಯ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ20 Dec 2020 12:58 PM IST
share
ಖಾಸಗಿ ಶಾಲಾ ಆಡಳಿತ ಮಂಡಳಿ ಜತೆ ಶಾಮೀಲಾದ ಸರಕಾರ: ಸಿದ್ದರಾಮಯ್ಯ ಆರೋಪ

ಬೆಂಗಳೂರು, ಡಿ.20: ರಾಜ್ಯದ ಶಾಲೆಗಳಲ್ಲಿ ತರಗತಿಗಳು ನಡೆಯದೆ ಇದ್ದರೂ ಬೋಧನಾ ಶುಲ್ಕದ ಜೊತೆಯಲ್ಲಿ ಪ್ರಯೋಗಶಾಲೆ, ಲೈಬ್ರೆರಿ ಮತ್ತು ಪಠ್ಯೇತರ ಶುಲ್ಕ ವಸೂಲಿ ಮಾಡಲು ಹೊರಟಿರುವ ಖಾಸಗಿ ಶಾಲೆಗಳು ಸರಕಾರದ ಪೊಳ್ಳು ಬೆದರಿಕೆಗೆ ಜಗ್ಗುತ್ತಿಲ್ಲ. ಸರಕಾರವು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಜೊತೆ ಶಾಮೀಲಾಗಿರುವಂತಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಖಾಸಗಿ ಶಾಲೆಗಳ ಮೇಲೆ ಸರಕಾರಕ್ಕೆ ಯಾವ ನಿಯಂತ್ರಣವೂ ಇಲ್ಲ. ತರಗತಿಗಳು ನಡೆಯದೆ ಇದ್ದರೂ ಖಾಸಗಿ ಶಾಲೆಗಳು ಪೋಷಕರಿಂದ ನಿಗದಿತ ಪೂರ್ಣಶುಲ್ಕ ಪಾವತಿಸಲು ಒತ್ತಡ ಹೇರುತ್ತಿವೆ. ಈಗಾಗಲೇ ಖಾಸಗಿ ಶಾಲೆಗಳು ಆನ್ ಲೈನ್ ತರಗತಿಗಳನ್ನು ಕೂಡಾ ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡುತ್ತಿವೆ. ಶಿಕ್ಷಣ ಸಚಿವರು ಕಣ್ಣುಮುಚ್ಚಿಕೊಂಡು ಕೂತಿದ್ದಾರೆ ಎಂದವರು ದೂರಿದ್ದಾರೆ.

ರಾಜ್ಯ ಸರಕಾರದ ಎಡಬಿಡಂಗಿ ನಿಲುವುಗಳಿಂದಾಗಿ ವಿದ್ಯಾರ್ಥಿಗಳು, ಪೋಷಕರು ಮತ್ತು ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಎಲ್ಲರೂ ಬೀದಿಗಿಳಿಯುವಂತಾಗಿದೆ. ಈ ಗೊಂದಲದಿಂದಾಗಿ ಬಹಳ ಮುಖ್ಯವಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ರಾಜ್ಯ ಸರಕಾರ ತಕ್ಷಣ ಸ್ಪಷ್ಟನಿರ್ಧಾರ ಕೈಗೊಂಡು ಈ ಬಿಕ್ಕಟ್ಟನ್ನು ಬಗೆಹರಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ನೇರ ಹೊಣೆಗಾರರು. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.

ಶಾಲೆಗಳ ಪುನರಾರಂಭದ ಬಗ್ಗೆ ಸಭೆಗಳ ಮೇಲೆ ಸಭೆಗಳು ನಡೆಯುತ್ತಿವೆ, ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳು ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಪೋಷಕರನ್ನು ಗೊಂದಲಕ್ಕೆ ನೂಕಿದ್ದಾರೆ. ತಕ್ಷಣ ಶಿಕ್ಷಣ ಸಚಿವರು ಖಾಸಗಿ ಶಾಲೆಗಳ ಮಾಲಕರು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆಯನ್ನು ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದವರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X