Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಶಾಲಾ ಶುಲ್ಕ ಕಿರುಕುಳ...

ಬೆಂಗಳೂರು: ಶಾಲಾ ಶುಲ್ಕ ಕಿರುಕುಳ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 Dec 2020 7:58 PM IST
share
ಬೆಂಗಳೂರು: ಶಾಲಾ ಶುಲ್ಕ ಕಿರುಕುಳ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿಭಟನೆ

ಬೆಂಗಳೂರು, ಡಿ. 20: ಕೋವಿಡ್ ಸಂಕಷ್ಟದ ನಡುವೆಯು ಖಾಸಗಿ ಶಾಲಾ ಆಡಳಿತ ಮಂಡಳಿಗಳು ಶುಲ್ಕ ಕಟ್ಟುವಂತೆ ಒತ್ತಡ ಹಾಕುತ್ತಿರುವುದನ್ನು ಖಂಡಿಸಿ ಇಂದು ನಗರದ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಿದರು.

ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಉದ್ಯೋಗ ಇಲ್ಲವಾಗಿದೆ. ಮನೆಯ ಬಾಡಿಗೆ, ಆಹಾರ ಸಾಮಾಗ್ರಿಗಳನ್ನು ಒದಗಿಸಿಕೊಳ್ಳವುದೇ ಕಷ್ಟವಾಗಿದೆ. ಇದರ ನಡುವೆ ಶಾಲೆಗಳ ಆಡಳಿತ ಮಂಡಳಿಗಳು ಶಾಲಾ ಶುಲ್ಕವನ್ನು ಸಂಪೂರ್ಣವಾಗಿ ಕಟ್ಟಬೇಕೆಂದು ಒತ್ತಡ ಹಾಕುತ್ತಿವೆ ಎಂದು ಪ್ರತಿಭಟನಾ ನಿರತ ಪೋಷಕರು ಆರೋಪಿಸಿದರು.

ಐದು-ಹತ್ತು ವರ್ಷಗಳಿಂದ ನಮ್ಮ ಮಕ್ಕಳು ಒಂದೇ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಪ್ರತಿ ವರ್ಷವೂ ಶಾಲಾ ಶುಲ್ಕವನ್ನು ಸಮಯಕ್ಕೆ ಸರಿಯಾಗಿ ಕಟ್ಟಿದ್ದೇವೆ. ಆದರೆ, ಈ ವರ್ಷ ಕೋವಿಡ್‍ನಿಂದಾಗಿ ಉದ್ಯೋಗ ಇಲ್ಲವಾಗಿದೆ. ಹೀಗಾಗಿ ಶಾಲಾ ಶುಲ್ಕವನ್ನು ಕಂತುಗಳಲ್ಲಿ ಕಟ್ಟುತ್ತೇವೆಂದು ಮನವಿ ಮಾಡಿದರೂ ಶಾಲಾಗಳ ಆಡಳಿತ ಮಂಡಳಿ ಒಪ್ಪುತ್ತಿಲ್ಲವೆಂದು ಪೋಷಕರೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳಿಂದ ಹೊರಗಿಡಲಾಗಿದೆ. ಇದರಿಂದ ಮಕ್ಕಳ ಮನಸಿನ ಮೇಲೆ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂಬುದನ್ನು ಸೂಕ್ಷ್ಮವಾಗಿ ಅವಲೋಕಿಸಬೇಕು. ಮಕ್ಕಳಿಗೆ ವಿದ್ಯೆ ಕಲಿಸುವಾಗ ಹಣವೊಂದನ್ನೇ ಮಾನದಂಡವನ್ನಾಗಿ ಪರಿಗಣಿಸದೆ, ಎಲ್ಲ ವಿದ್ಯಾರ್ಥಿಗಳಿಗೂ ಸಮಾನವಾಗಿ ತರಗತಿ ನಡೆಸಬೇಕೆಂದು ಶಾಲಾ ಪೋಷಕರ ಸಂಘದ ಯೋಗಾನಂದ್ ಮನವಿ ಮಾಡಿದ್ದಾರೆ.

ಹಕ್ಕೋತ್ತಾಯಗಳು: ಆನ್‍ಲೈನ್ ತರಗತಿಗಳನ್ನು ನಿರ್ಬಂಧಿಸುತ್ತಿರುವ ಮತ್ತು ಆ ಮೂಲಕ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿಯುತ್ತಿರುವ ಖಾಸಗಿ ಕಾರ್ಪೊರೇಟ್ ಶಾಲೆಗಳ ವಿರುದ್ದ ಕ್ರಮ ಕೈಗೊಳ್ಳಬೇಕು.

-2020-21ನೇ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ಶಾಲೆಗಳು ಕೇವಲ ಆನ್‍ಲೈನ್ ತರಗತಿಗಳನ್ನು ಮಾತ್ರ ನಡೆಸಿರುವುದರಿಂದ ಬೋಧನಾ ಶುಲ್ಕದಲ್ಲಿ ವಾಸ್ತವಿಕ ಸಂಬಳದ ವೆಚ್ಚದ ಆಧಾರದ ಮೇಲೆ ಬೋಧನಾ ಶುಲ್ಕವನ್ನು ಶೇ.75ರಷ್ಟು ಕಡಿಮೆ ಮಾಡಬೇಕು.

-ಆರ್‍ಟಿಇ ಮಕ್ಕಳ ಪೋಷಕರಿಂದ ಕೆಲ ಖಾಸಗಿ ಶಾಲೆಗಳು ಇತರೆ ಚಟುವಟಿಕೆಗಳ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದು, ಅದರ ವಿರುದ್ಧ ಕ್ರಮ ಕೈಗೊಳ್ಳಬೇಕು.

-ಸರಕಾರ ಕೋಟ್ಯಂತರ ರೂ. ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಬೆಂಗಳೂರು ದಕ್ಷಿಣ ವಲಯ-1ರ ಭ್ರಷ್ಟ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪ್ರಕಾಶ್ ವಿರುದ್ದ ಸರಕಾರ ಕಾನೂನು ಕ್ರಮ ಕೈಗೊಳ್ಳಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X