Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೊದಲನೇ ಹಂತದ ಗ್ರಾ.ಪಂ ಚುನಾವಣೆಗೆ ಆಯೋಗ...

ಮೊದಲನೇ ಹಂತದ ಗ್ರಾ.ಪಂ ಚುನಾವಣೆಗೆ ಆಯೋಗ ಸಜ್ಜು

ವಾರ್ತಾಭಾರತಿವಾರ್ತಾಭಾರತಿ20 Dec 2020 8:07 PM IST
share
ಮೊದಲನೇ ಹಂತದ ಗ್ರಾ.ಪಂ ಚುನಾವಣೆಗೆ ಆಯೋಗ ಸಜ್ಜು

ಬೆಂಗಳೂರು, ಡಿ. 20: ರಾಜ್ಯಾದ್ಯಂತ ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆ ಕೈಗೊಂಡಿದ್ದು, ಡಿ.22 ನಡೆಯಲಿರುವ ಚುನಾವಣೆಗೆ ಆಯೋಗ ಸಜ್ಜಾಗಿದೆ.

ಮೊದಲ ಹಂತದಲ್ಲಿ ಡಿ.22 ರಂದು ನಡೆಯುವ 117 ತಾಲೂಕುಗಳ 3,019 ಗ್ರಾ.ಪಂ.ಗಳ ಚುನಾವಣೆಗೆ ಅಗತ್ಯ ಸಿದ್ಧತೆಯನ್ನು ಚುನಾವಣಾ ಆಯೋಗ ಮಾಡಿಕೊಂಡಿದ್ದು, ಅಂತಿಮ ಹಂತಕ್ಕೆ ತಲುಪಿದೆ. ಈಗಾಗಲೇ 5,847 ಚುನಾವಣಾ ಅಧಿಕಾರಿ ಹಾಗೂ 6,085 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಪ್ರಾಯೋಗಿಕವಾಗಿ ಬೀದರ್ ಜಿಲ್ಲೆಯಲ್ಲಿ ಈ ಬಾರಿ ಗ್ರಾಮ ಪಂಚಾಯತ್ ಚುನಾವಣೆಗೆ ವಿದ್ಯುನ್ಮಾನ ಮತಯಂತ್ರವನ್ನು ಬಳಕೆ ಮಾಡಲಾಗುತ್ತಿದೆ. ಉಳಿದ ಎಲ್ಲ ಕಡೆಗಳಲ್ಲಿ ಹಿಂದಿನ ಪದ್ಧತಿಯಂತೆ ಬ್ಯಾಲೆಟ್ ಪೇಪರ್‍ನಲ್ಲಿ ಚುನಾವಣೆ ನಡೆಸಲಾಗುತ್ತದೆ. 45, 128 ಮತಗಟ್ಟೆಗಳಿಗೆ ಸುಮಾರು 2,70,268 ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲಾಗಿದ್ದು, ಸೋಮವಾರ ಬೆಳಗ್ಗೆ ಮತಗಟ್ಟೆ ಸಿಬ್ಬಂದಿಗಳು ಪರಿಕರಗಳೊಂದಿಗೆ ಮತಗಟ್ಟೆ ಕೇಂದ್ರಗಳಿಗೆ ತೆರಳಲಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚುನಾವಣೆಗಾಗಿ ಈ ಬಾರಿ 45 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮತಗಟ್ಟೆ ಪ್ರವೇಶಿಸುವ ಮೊದಲು ತಮ್ಮ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡು ಮತಗಟ್ಟೆ ಪ್ರವೇಶಿಸಬೇಕು. ಕೋವಿಡ್ ಸೋಂಕಿತರು ಮತ್ತು ಶಂಕಿತರನ್ನು ಅಗತ್ಯ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಮತದಾನದ ಒಂದು ಗಂಟೆಯ ಅವಧಿಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಿದೆ.

ರಾಜ್ಯದಲ್ಲಿ ಒಟ್ಟು ಮೊದಲ ಹಂತದಲ್ಲಿ ನಡೆಯುವ ಚುನಾವಣೆಯ 48,048 ರಷ್ಟು ಸ್ಥಾನಗಳಿಗೆ 1,64,550 ನಾಮಪತ್ರಗಳು ಸಲ್ಲಿಕೆಯಾಗಿದ್ದು 4,377 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 43,238 ಚುನಾವಣೆ ನಡೆಯಲಿದ್ದು, 1,17,383 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X