ಪ್ರತಿಭಟನೆಯಲ್ಲಿ ಭಾಗವಹಿಸಿ ಊರಿಗೆ ಮರಳಿದ್ದ ಪಂಜಾಬ್ ರೈತ ಆತ್ಮಹತ್ಯೆ

ಚಂಡಿಗಡ,ಡಿ.20: ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ದಿಲ್ಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಊರಿಗೆ ಮರಳಿದ್ದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಠಿಂಡಾ ಜಿಲ್ಲೆಯ ದಯಾಳಪುರ ಮಿರ್ಜಾ ಗ್ರಾಮದ ನಿವಾಸಿ ಗುರ್ಲಭ್ ಸಿಂಗ್(22) ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು,ಶುಕ್ರವಾರ ಸ್ವಗ್ರಾಮಕ್ಕೆ ವಾಪಸಾಗಿದ್ದ. ಶನಿವಾರ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಆತನನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದ. ಆತನ ಆತ್ಮಹತ್ಯೆಗೆ ಕಾರಣವೇನು ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ಪೊಲೀಸರು ತಿಳಿಸಿದರು.
Next Story





