ದ.ಕ. ಜಿಲ್ಲೆ : 33 ಮಂದಿಗೆ ಕೊರೋನ ಸೋಂಕು
ಮಂಗಳೂರು, ಡಿ.20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ 33 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. 27 ಮಂದಿ ಗುಣಮುಖರಾಗಿ ದ್ದಾರೆ. ರವಿವಾರ ಕೊರೋನದಿಂದ ಯಾವುದೇ ಸಾವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 32,589ಕ್ಕೆ ಏರಿಕೆಯಾಗಿದೆ. ಈ ಪೈಕಿ 443 ಚಿಕಿತ್ಸೆ ಪಡೆಯುತ್ತಿದ್ದಾರೆ. 732 ಮಂದಿ ಮೃತಪಟ್ಟಿ ದ್ದಾರೆ. 31,414 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 17,995 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 19,19,684 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story





