Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಾಕ್ಸಿಂಗ್ ಡೇ ಟೆಸ್ಟ್ ಗೆ ಶುಭಮನ್,...

ಬಾಕ್ಸಿಂಗ್ ಡೇ ಟೆಸ್ಟ್ ಗೆ ಶುಭಮನ್, ರಾಹುಲ್, ರಿಷಭ್ ಸಜ್ಜು

ವಾರ್ತಾಭಾರತಿವಾರ್ತಾಭಾರತಿ21 Dec 2020 12:17 AM IST
share
ಬಾಕ್ಸಿಂಗ್ ಡೇ ಟೆಸ್ಟ್ ಗೆ ಶುಭಮನ್, ರಾಹುಲ್, ರಿಷಭ್ ಸಜ್ಜು

ಹೊಸದಿಲ್ಲಿ: ಅಡಿಲೇಡ್ ಟೆಸ್ಟ್ ನಲ್ಲಿ ಆಸ್ಟ್ರೇಲಿಯದ ಬೌಲಿಂಗ್ ದಾಳಿ ಎದುರಿಸಲಾಗದೆ ಕಂಗಾಲಾಗಿದ್ದ ಟೀಮ್ ಇಂಡಿಯಾದಲ್ಲಿ ಭಾರೀ ಬದಲಾವಣೆ ಮಾಡುವ ನಿರೀಕ್ಷೆಯಿದೆ. ಹಿರಿಯ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಹಾ ಹಾಗೂ ಯುವ ಆರಂಭಿಕ ಆಟಗಾರ ಪೃಥ್ವಿ ಶಾ 4 ಪಂದ್ಯಗಳ ಸರಣಿಯ ಉಳಿದ ಪಂದ್ಯ ಗಳಿಂದ ಹೊರಗುಳಿಯುವ ಸಾಧ್ಯತೆಯಿದೆ.

ಹಿರಿಯ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಸಿಡ್ನಿಯಲ್ಲಿ ನಡೆಯುವ ಮೂರನೇ ಟೆಸ್ಟ್ ತನಕ ಲಭ್ಯವಿರದ ಹಿನ್ನೆಲೆಯಲ್ಲಿ ಅಭ್ಯಾಸ ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ ಯುವ ಬ್ಯಾಟ್ಸ್ ಮನ್ ಶುಭಮನ್ ಗಿಲ್ ಅವರು ಶಾ ಅವರ ಸ್ಥಾನ ತುಂಬುವ ಹುಮ್ಮಸ್ಸಿನಲ್ಲಿದ್ದಾರೆ.

ಸಹಾ ಅವರ ಬ್ಯಾಟಿಂಗ್ ಕೂಡ ಟೀಮ್ ಮ್ಯಾನೇಜ್‌ಮೆಂಟ್‌ಗೆ ವಿಶ್ವಾಸ ಮೂಡಿಸಿಲ್ಲ. ಈ ಹಿಂದಿನ ಆಸ್ಟ್ರೇಲಿಯ ಪ್ರವಾಸದಲ್ಲಿ ಶತಕ ಸಿಡಿಸಿದ್ದ ದಿಲ್ಲಿ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರತ್ತ ಟೀಮ್ ಮ್ಯಾನೇಜ್‌ಮೆಂಟ್ ಚಿತ್ತಹರಿಸುವ ಸಾಧ್ಯತೆಯಿದೆ.

ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿ ಹಾಗೂ ಹಿರಿಯ ವೇಗದ ಬೌಲರ್ ಮುಹಮ್ಮದ್ ಶಮಿ ಅವರ ಮಣಿಕಟ್ಟಿಗೆ ಗಾಯ ವಾಗಿರುವುದರಿಂದ ಕೆ.ಎಲ್.ರಾಹುಲ್ ಹಾಗೂ ಮುಹಮ್ಮದ್ ಸಿರಾಜ್ ಆಡುವ 11ರ ಬಳಗಕ್ಕೆ ಪ್ರವೇಶಿಸಲು ಎದುರು ನೋಡುತ್ತಿದ್ದಾರೆ.

36ರ ಹರೆಯದ ಸಹಾ ನಿವೃತ್ತಿ ಅಂಚಿನಲ್ಲಿದ್ದು, ತಂಡದ ಆಡಳಿತವು ಪಂತ್‌ರನ್ನು ಮುಂದಿನ 3 ಪಂದ್ಯಗಳಿಗೆ ಆಯ್ಕೆ ಮಾಡಬಹುದು. ಪಂತ್ ಉತ್ತಮ ಪ್ರದರ್ಶನ ನೀಡಿದರೆ ಇಂಗ್ಲೆಂಡ್ ವಿರುದ್ಧ ಸರಣಿಗೂ ಅವಕಾಶ ಪಡೆಯಬಹುದು.

‘‘ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯ ದಂತಹ ಸ್ಥಳಗಳಲ್ಲಿ ರಿಷಭ್ ಪಂತ್ ಮೊದಲ ಆಯ್ಕೆ ಯಾಗಿದ್ದಾರೆಂಬ ನಮ್ಮ ಸಮಿತಿಯ ನಿರ್ಧಾರ ಸ್ಪಷ್ಟವಾಗಿದೆ ಎನ್ನುವುದು ಈಗ ಸಾಬೀತಾಗಿದೆ. ಮುಂದಿನ 3 ಟೆಸ್ಟ್ ಗಳಲ್ಲಿ ಪಂತ್‌ಗೆ ಅವಕಾಶ ನೀಡಿದರೆ ಅದನ್ನು ನಾನು ಒಪ್ಪುತ್ತೇನೆ’’ ಎಂದು ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಎಂ.ಎಸ್.ಕೆ.ಪ್ರಸಾದ್ ಹೇಳಿದ್ದಾರೆ.

ಮುಂಬೈಯ 21ರ ಹರೆಯದ ಶಾ ಅಂದು ಕೊಂಡಿದ್ದೆಲ್ಲವೂ ಆಗುತ್ತಿಲ್ಲ. ಅವರ ತಂತ್ರಗಾರಿಕೆ, ಪಂದ್ಯದಲ್ಲಿ ಅವರ ಒಟ್ಟಾರೆ ವರ್ತನೆಯ ಕುರಿತು ಗಂಭೀರ ಪ್ರಶ್ನೆ ಎದ್ದಿವೆ. ಕೊಹ್ಲಿ ಅನುಪಸ್ಥಿತಿಯಲ್ಲಿ ಹನುಮ ವಿಹಾರಿಯನ್ನು ಅಗ್ರ ಕ್ರಮಾಂಕದಲ್ಲಿ ಆಡಿಸಬೇಕೆಂಬ ಮಾತು ಕೇಳಿಬರುತ್ತಿದೆ. ವಿಹಾರಿಯನ್ನು 5ನೇ ಕ್ರಮಾಂಕದಲ್ಲಿ ಆಡಿಸುವುದು ಉತ್ತಮ ಯೋಚನೆಯಾ ಗಿದೆ ಎಂದು ಪ್ರಸಾದ್ ಹೇಳಿದ್ದಾರೆ.

ಭಾರತದ ಪರ ಆರು ಬಾರಿ ಐದು ವಿಕೆಟ್ ಗೊಂಚಲನ್ನು ಪಡೆದಿರುವ ಮುಹಮ್ಮದ್ ಸಿರಾಜ್ ಎಂಸಿಜಿಯಲ್ಲಿ ಶಮಿ ಸ್ಥಾನ ತುಂಬುವ ಮೂಲಕ ಚೊಚ್ಚಲ ಟೆಸ್ಟ್ ಆಡಲು ಸಜ್ಜಾಗಿದ್ದಾರೆ. ಆದರೆ, ಸಿರಾಜ್ ಹಾಗೂ ನವದೀಪ್ ಸೈನಿ ನಡುವೆ ಪೈಪೋಟಿ ಏರ್ಪಟ್ಟಿದೆ. ಎರಡು ಅಭ್ಯಾಸ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಸಿರಾಜ್ ಅವರತ್ತ ಹೆಚ್ಚು ಒಲವು ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X