Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.22ರಂದು ಉಡುಪಿ ಜಿಲ್ಲೆಯ 66 ಗ್ರಾಪಂಗಳ...

ಡಿ.22ರಂದು ಉಡುಪಿ ಜಿಲ್ಲೆಯ 66 ಗ್ರಾಪಂಗಳ 1066 ಸ್ಥಾನಗಳಿಗೆ ಚುನಾವಣೆ

► ನಾಲ್ಕು ಕೇಂದ್ರಗಳಲ್ಲಿ ಮಸ್ಟರಿಂಗ್ ► ಕೋವಿಡ್ ಮಾರ್ಗಸೂಚಿ ಪಾಲನೆ

ವಾರ್ತಾಭಾರತಿವಾರ್ತಾಭಾರತಿ21 Dec 2020 5:34 PM IST
share
ಡಿ.22ರಂದು ಉಡುಪಿ ಜಿಲ್ಲೆಯ 66 ಗ್ರಾಪಂಗಳ 1066 ಸ್ಥಾನಗಳಿಗೆ ಚುನಾವಣೆ

ಉಡುಪಿ, ಡಿ.21: ಕೊರೋನ ಭೀತಿಯ ಮಧ್ಯೆ ಜಿಲ್ಲೆಯಲ್ಲಿ ಡಿ.22ರಂದು ಒಟ್ಟು 66 ಗ್ರಾಪಂಗಳಲ್ಲಿ ನಡೆಯುವ ಮೊದಲ ಹಂತದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ, ಬೈಂದೂರು, ಹೆಬ್ರಿ ಹಾಗೂ ಬ್ರಹ್ಮಾವರ ತಾಲೂಕು ಗಳಲ್ಲಿ ಇಂದು ಮಸ್ಟರಿಂಗ್ ಕಾರ್ಯ ನಡೆಯಿತು. ಮತದಾನ ಕೇಂದ್ರಗಳಲ್ಲಿ ಕೋವಿಡ್ -19 ನಿಯಮ ಪಾಲನೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗಿದೆ.

ಜಿಲ್ಲೆಯಲ್ಲಿ ನಾಲ್ಕು ತಾಲೂಕುಗಳ ಒಟ್ಟು 66 ಗ್ರಾಪಂಗಳ 402 ಕ್ಷೇತ್ರಗಳ 1066 ಸ್ಥಾನಗಳಿಗೆ ಒಟ್ಟು 543 ಮತಗಟ್ಟೆಗಳಲ್ಲಿ ಮತದಾನ ನಡೆಯ ಲಿದ್ದು, 370323 ಮಂದಿ ಮತದಾರರ ಮತ ಚಲಾಯಿಸಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2349 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು, 63 ಮಂದಿ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಡುಪಿಯ ಬ್ರಹ್ಮಗಿರಿ ಸಂತ ಸಿಸಿಲೀಸ್ ವಿದ್ಯಾಸಂಸ್ಥೆ, ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು, ಬ್ರಹ್ಮಾವರ ಎಸ್.ಎಂ.ಎಸ್. ಪದವಿ ಪೂರ್ವ ಕಾಲೇಜುಗಳಲ್ಲಿರುವ ಮಸ್ಟರಿಂಗ್ ಕೇಂದ್ರಗಳಿಂದ ಅಧಿಕಾರಿಗಳು ಸಿಬ್ಬಂದಿಗಳು ಬ್ಯಾಲೆಟ್ ಪೇಪರ್, ಡಬ್ಬಿ ಹಾಗೂ ಪರಿಕರಗಳೊಂದಿಗೆ ಪೊಲೀಸ್ ಭದ್ರತೆಯಲ್ಲಿ ಮತಗಟ್ಟೆಗಳಲ್ಲಿ ತೆರಳಿ ದರು. ಅದಕ್ಕಾಗಿ ಸರಕಾರಿ ಬಸ್, ಮ್ಯಾಕ್ಸಿಕ್ಯಾಬ್, ಜೀಪುಗಳ ವ್ಯವಸ್ಥೆಯನ್ನು ಮಾಡಲಾಗಿತ್ತು.

ಉಡುಪಿ ತಾಲೂಕಿನ 16 ಗ್ರಾಪಂಗಳ 121 ಕ್ಷೇತ್ರಗಳ 324 ಸ್ಥಾನಗಳಿಗೆ ಒಟ್ಟು 161 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. 1,11,936 ಮಂದಿ ಮತದಾರರು ಮತ ಚಲಾಯಿಸಲಿದ್ದಾರೆ. ಇದಕ್ಕಾಗಿ ಒಟ್ಟು ಅಧಿಕಾರಿಗಳನ್ನು ಮತ್ತು 300 ಪೊಲೀಸರನ್ನು ನಿಯೋಜಿಸಲಾಗಿದ್ದು, ಇವರು ಮಸ್ಟರಿಂಗ್ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾದ 22 ಬಸ್, ಮೂರು ಮ್ಯಾಕ್ಸಿ ಕ್ಯಾಬ್ ಮತ್ತು ನಾಲ್ಕು ಜೀಪುಗಲ್ಲಿ ಮತಗಟ್ಟೆಗಳಿಗೆ ತೆರಳಿದರು.

ಹೆಬ್ರಿ ತಾಲೂಕಿನ 9 ಗ್ರಾಪಂಗಳ 46 ಕ್ಷೇತ್ರಗಳ 122 ಸ್ಥಾನಗಳಿಗೆ ಒಟ್ಟು 60 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. 40555 ಮಂದಿ ಮತದಾರರು ಮತ ಚಲಾಯಿಸಲಿದ್ದಾರೆ. ಒಟ್ಟು 264 ಅಧಿಕಾರಿಗಳನ್ನು ಮತ್ತು ಸುಮಾು 130 ಪೊಲೀಸರು ನಿಯೋಜಿಸಲಾಗಿದೆ.

ಬೈಂದೂರು ತಾಲೂಕಿನ 15 ಗ್ರಾಪಂಗಳ 93 ಕ್ಷೇತ್ರಗಳ 259 ಸ್ಥಾನಗಳಿಗೆ ಒಟ್ಟು 128 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. 88659 ಮಂದಿ ಮತದಾರರು ಮತ ಚಲಾಯಿಸಲಿದ್ದಾರೆ. ಒಟ್ಟು 616 ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅದೇ ರೀತಿ ಪ್ರತಿ ಮತಗಟ್ಟೆಗೆ ಒಬ್ಬರು ಡಿ ಗ್ರೂಪ್ ನೌಕಕರು ಮತ್ತು ಆಶಾ ಕಾರ್ಯರ್ತರನ್ನು ನೇಮಕ ಮಾಡಲಾಗಿದೆ.

ಬ್ರಹ್ಮಾವರ ತಾಲೂಕಿನ 26 ಗ್ರಾಪಂಗಳ 142 ಕ್ಷೇತ್ರಗಳ 361 ಸ್ಥಾನಗಳಿಗೆ ಒಟ್ಟು 194 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. 1,29,173 ಮಂದಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಇದಕ್ಕಾಗಿ 800 ಒಟ್ಟು ಅಧಿಕಾರಿಗಳನ್ನು ಮತ್ತು 300 ಪೊಲೀಸರನ್ನು ನಿಯೋಜಿಸ ಲಾಗಿದೆ ಎಂದು ಆಯಾ ತಹಶೀಲ್ದಾರರು ಮಾಹಿತಿ ನೀಡಿದರು.

ಕೇಂದ್ರಗಳಿಗೆ ಡಿಸಿ, ವೀಕ್ಷಕರು ಭೇಟಿ

ಜಿಲ್ಲೆಯ ಮಸ್ಟರಿಂಗ್ ಕೇಂದ್ರಗಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ವೀಕ್ಷಕ ಜಿ.ಟಿ.ದಿನೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉಡುಪಿ, ಹೆಬ್ರಿ, ಬ್ರಹ್ಮಾವರ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಸುರಕ್ಷಿತ ಅಂತರ ಕಾಪಾಡ ಬೇಕು ಎಂದು ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿ ಸೂಚನೆ ನೀಡಿದರು. ಮತದಾನ ಮಾಡಲು ಬರುವ ಮತದಾರರಿಗೂ ಮಾಸ್ಕ್ ಧರಿಸುವಂತೆ ಹೇಳಬೇಕು. ಮತ ದಾನ ಕೇಂದ್ರದಲ್ಲಿ ಸುರಕ್ಷಿತ ಅಂತರ ಕಾಪಾಡುವಂತೆ ಮತದಾರರಿಗೆ ತಿಳಿಸ ಬೇಕೆಂದು ಅವು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೊದಲ ಹಂತದ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳಿಗೆ ಸುಮಾರು ಒಂದು ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾ ಗಿದೆ. ಅದೇ ರೀತಿ ಜಿಲ್ಲೆಯಾದ್ಯಂತ ನಾಲ್ಕು ಕೆಎಸ್‌ಆರ್‌ಪಿ, ಎಂಟು ಡಿಎಆರ್ ತುಕಡಿಯನ್ನು ನಿಯೋಜಿಸಲಾಗಿದೆ. ಹೊರ ಜಿಲ್ಲೆಯಿಲ್ಲಿ 370 ಪೊಲೀಸ್ ಸಿಬ್ಬಂದಿಗಳನ್ನು ಕರೆಸಲಾಗಿದೆ.
-ಕುಮಾರಚಂದ್ರ, ಹೆಚ್ಚುವರಿ ಎಸ್ಪಿ, ಉಡುಪಿ ಜಿಲ್ಲೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X