ಈ ಗ್ರಾಮ ಪಂಚಾಯತ್ ನ ಎಲ್ಲಾ 32 ಅಭ್ಯರ್ಥಿಗಳು ಅವಿರೋಧ ಆಯ್ಕೆ !

ಕಲಬುರಗಿ, ಡಿ.21: ಜಿಲ್ಲೆಯ ಚಿತ್ತಾಪೂರ ತಾಲೂಕಿನ ರೇವೂರ ಗ್ರಾಮ ಪಂಚಾಯತ್ ನ ಎಲ್ಲಾ 32 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಗೆ 56 ಮಂದಿ ಸ್ಪರ್ಧಿಸಿದ್ದರು, 24 ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ್ ಪಡೆದಿದ್ದು, ಹೀಗಾಗಿ 32 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಹಶೀಲ್ದಾರ್ ಉಮಾಕಾಂತ್ ಹಳ್ಳಿ ತಿಳಿಸಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಶನಿವಾರ ಕೊನೆಯ ದಿನವಾಗಿದ್ದು, 24 ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ್ ಪಡದಿದ್ದಾರೆ.
ಚಿತ್ತಾಪುರ ತಾಲೂಕಿನ 410 ಪಂಚಾಯತ್ ಗ್ರಾಮ ಪಂಚಾಯತ್ ಗಳ ಪೈಕಿ 132 ಗ್ರಾಮ ಪಂಚಾಯತ್ ಸ್ಥಾನಕ್ಕೆ ಸ್ಪರ್ಧೆ ನಡೆಯುತ್ತಿದೆ, 91 ಅಭ್ಯರ್ಥಿಗಳು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದ್ದಾರೆ.
ರಾವೂರ್ ಗ್ರಾಮ ಪಂಚಾಯತ್ ಅಡಿಯಲ್ಲಿ ಬರುವ ಗ್ರಾಮಗಳ ಮುಖಂಡರು ಚುನಾಯಿತ ಸದಸ್ಯರನ್ನು ಸನ್ಮಾನಿಸಿ, ನಾಮಪತ್ರ ಹಿಂತೆಗೆದುಕೊಂಡ 24 ಅಭ್ಯರ್ಥಿಗಳಿಗೆ ಧನ್ಯವಾದ ಅರ್ಪಿಸಿದರು. ಅವಿರೋಧ ಚುನಾವಣೆಯು ಗ್ರಾಮ ಪಂಚಾಯತ್ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.





