Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಭಿವೃದ್ಧಿ ಮರೀಚಿಕೆ: ಭಿಕ್ಷುಕನನ್ನು...

ಅಭಿವೃದ್ಧಿ ಮರೀಚಿಕೆ: ಭಿಕ್ಷುಕನನ್ನು ಗ್ರಾಮ ಪಂಚಾಯತ್ ಚುನಾವಣೆಗೆ ನಿಲ್ಲಿಸಿದ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ21 Dec 2020 6:40 PM IST
share
ಅಭಿವೃದ್ಧಿ ಮರೀಚಿಕೆ: ಭಿಕ್ಷುಕನನ್ನು ಗ್ರಾಮ ಪಂಚಾಯತ್ ಚುನಾವಣೆಗೆ ನಿಲ್ಲಿಸಿದ ಗ್ರಾಮಸ್ಥರು

ಮೈಸೂರು,ಡಿ.21: ಗ್ರಾ.ಪಂ. ಸದಸ್ಯರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಿಲ್ಲ ಎಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬೊಕ್ಕಹಳ್ಳಿ ಗ್ರಾಮಸ್ಥರು ಭಿಕ್ಷುಕರೊಬ್ಬರನ್ನು ಗ್ರಾಮ ಪಂಚಾಯತ್ ಚುನಾವಣಾ ಅಖಾಡಕ್ಕೆ ಇಳಿಸಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹುಳಿಮಾವು ಗ್ರಾ.ಪಂನ ಬೊಕ್ಕಹಳ್ಳಿ ಗ್ರಾಮದಲ್ಲಿ ಅಲ್ಲಿನ ಯುವಕರ ತಂಡ ಮತ್ತು ಗ್ರಾಮಸ್ಥರು ಅದೇ ಗ್ರಾಮದ ಅಂಗವಿಕಲತೆಗೆ ಒಳಗಾಗಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಅಂಕನಾಯಕ ಎಂಬ ವ್ಯಕ್ತಿಯನ್ನು ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಗೆ ನಿಲ್ಲಿಸಿ, ಹಾಲಿ ಗ್ರಾ.ಪಂ. ಸದಸ್ಯರಿಗೆ ಸವಾಲು ಹಾಕಿದ್ದಾರೆ.

ಹುಳಿಮಾವು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಡುವ ಬೊಕ್ಕಹಳ್ಳಿ ಗ್ರಾಮದಲ್ಲಿನ ಒಂದು ಚರಂಡಿ ವಿಚಾರವಾಗಿ ಹಲವು ವರ್ಷಗಳಿಂದ ಸಮಸ್ಯೆ ಎದುರಾಗಿತ್ತು. ಇದು ಊರಿನ ಪ್ರಮುಖ ಚರಂಡಿಯಾಗಿದ್ದು, ಹಲವು ವರ್ಷಗಳಿಂದ ಚರಂಡಿ ನೀರು ಹೋಗದೆ ಕಟ್ಟಿಕೊಂಡಿತ್ತು. ಇದನ್ನು ಸರಿಪಡಿಸುವಂತೆ ಈ ಹಿಂದೆ ಆಯ್ಕೆಯಾಗಿದ್ದ ಗ್ರಾ.ಪಂ. ಸದಸ್ಯರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಎನ್ನಲಾಗಿದೆ. ಹಾಗಾಗಿ ಅಲ್ಲಿನ ಯುವಕರ ತಂಡವೊಂದು ತೀರ್ಮಾನ ಮಾಡಿ, ಭಿಕ್ಷೆ ಬೇಡಿ ಬದುಕುತ್ತಿರುವ ಅಂಕನಾಯಕನನ್ನು ಚುನಾವಣೆಗೆ ನಿಲ್ಲಿಸಿದ್ದಾರೆ.

ತಂದೆ, ತಾಯಿ ಸೇರಿದಂತೆ ಹತ್ತಿರದ ಸಂಬಂಧಿಕರೂ ಇಲ್ಲದ ಅವಿವಾಹಿತ ಅಂಕನಾಯಕ ಅಂಗವಿಕಲರಾಗಿದ್ದು, ಇದ್ದ ಸಹೋದರನೂ ಇತ್ತೀಚೆಗಷ್ಟೆ ನಿಧನರಾಗಿದ್ದಾರೆ. ಇವರು ಊರಿನ ಮನೆ ಮನೆಗಳಲ್ಲಿ ಭಿಕ್ಷೆ ಬೇಡಿ ಅಥವಾ ಅವರಿವರ ಮನೆಗಳಲ್ಲಿ ಕೆಲಸ ಮಾಡಿ ಒಂದು ಹೊತ್ತಿನ ಊಟ ಮಾಡುತ್ತಿದ್ದು, ಜನರು ನೀಡುವ ಹಣದಿಂದ ಬದುಕು ದೂಡುತ್ತಿದ್ದರಿಂದ ಗ್ರಾಮದ ಎಲ್ಲರಿಗೂ ಅವರು ಪರಿಚಯಸ್ಥ ವ್ಯಕ್ತಿ.

ಡಿ.27ರ ರವಿವಾರ ನಡೆಯಲಿರುವ ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಭಿಕ್ಷುಕ ಅಂಕನಾಯಕರನ್ನು ಹುಳಿಮಾವು ಗ್ರಾಮಪಂಚಾಯತ್  ಬೊಕ್ಕಹಳ್ಳಿ ಗ್ರಾಮದ ಒಂದನೇ ಬ್ಲಾಕ್ ಸಾಮಾನ್ಯ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿಸಲಾಗಿದೆ. ಇಲ್ಲಿನ ವಿಷ್ಣುವರ್ಧನ್ ಯುವಕರ ಸಂಘದ ತಂಡ ಇವರಿಗೆ ಹೊಸ ಬಟ್ಟೆ ತೊಡಿಸಿ ಶಾಲು, ಹಾರ ಹಾಕಿ, ಕೂಲಿಂಗ್ ಗ್ಲಾಸ್ ಹಾಕಿಸಿ, ಊರಿನಲ್ಲಿ ಮೆರವಣಿಗೆ ಮಾಡಿ ಕಾರಿನಲ್ಲಿ ಕರೆದುಕೊಂಡು ಬಂದು ನಾಮಪತ್ರ ಸಲ್ಲಿಸಿದ್ದಾರೆ.

ಈ ಹಿಂದೆ ಆಯ್ಕೆಯಾಗಿದ್ದ ಗ್ರಾ.ಪಂ.ಸದಸ್ಯರು ಅಭಿವೃದ್ಧಿ ಮಾಡದೆ ಇರುವುದರಿಂದ ಯುವಕರ ತಂಡ ನಮ್ಮೂರಿನ ಸೊತ್ತ ಅಂಗವಿಕಲ ಅಂಕನಾಯಕನನ್ನು ಚುನಾವಣೆಗೆ ನಿಲ್ಲಿಸಿದ್ದಾರೆ. ಈತನಿಗೆ ಯಾರೂ ಇಲ್ಲ ಮನೆ ಮನೆಗಳಲ್ಲಿ ಊಟ ಮಾಡಿ ಇಷ್ಟಬಂದ ಕಡೆ ಓಡಾಡಿಕೊಂಡು ಚಾವಡಿ ಸ್ಕೂಲ್ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಮಲಗುತ್ತಾನೆ

-ಬೊಕ್ಕಹಳ್ಳಿ ನಂಜುಂಡಸ್ವಾಮಿ, ರೈತ ಮುಖಂಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X