ಗ್ರಾಪಂ ಚುನಾವಣೆ; ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ
ಉಡುಪಿ, ಡಿ.21: ಗ್ರಾಪಂಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಡಿ.22ರಂದು ಉಡುಪಿ, ಹೆಬ್ರಿ, ಬ್ರಹ್ಮಾವರ ಹಾಗೂ ಬೈಂದೂರು ತಾಲೂಕುಗಳಲ್ಲಿ ನಡೆಯುವ ಮೊದಲ ಹಂತದ ಚುನಾವಣೆಗೆ ಡಿ.21ರ ಸಂಜೆ 5 ಗಂಟೆಯಿಂದ ಡಿ.22ರ ಸಂಜೆ 5 ಗಂಟೆಯವರೆಗೆ ಹಾಗೂ ಡಿ.27 ರಂದು ಕುಂದಾಪುರ, ಕಾರ್ಕಳ ಹಾಗೂ ಕಾಪು ತಾಲೂಕುಗಳಲ್ಲಿ ನಡೆಯುವ ಎರಡನೇ ಹಂತದ ಚುನಾವಣೆಗೆ ಡಿ.26ರ ಸಂಜೆ 5 ರಿಂದ ಡಿ.27ರ ಸಂಜೆ 5 ರವರೆಗೆ ಮತದಾನ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಪ್ರದತ್ತವಾದ ಅಧಿಕಾರದಂತೆ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
Next Story





