ದ.ಕ.: 24 ಮಂದಿಗೆ ಕೊರೋನ ಸೋಂಕು
ಮಂಗಳೂರು, ಡಿ.21: ದ.ಕ. ಜಿಲ್ಲೆಯಲ್ಲಿ ಮತ್ತೆ 24 ಮಂದಿಗೆ ಕೊರೋನ ಸೋಂಕು ತಗುಲಿದೆ. ಸೋಮವಾರ 30 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 32,613 ಸೋಂಕಿತರ ಪೈಕಿ 31,444 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ಗೆ 732 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 437 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 18,003 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 19,20,484 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story