Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಭಿವೃದ್ಧಿಯೇ ಮತದಾರರ ಶ್ರೀರಕ್ಷೆ : ಶಾಸಕ...

ಅಭಿವೃದ್ಧಿಯೇ ಮತದಾರರ ಶ್ರೀರಕ್ಷೆ : ಶಾಸಕ ಸುನೀಲ್‍ ಕುಮಾರ್

ವಾರ್ತಾಭಾರತಿವಾರ್ತಾಭಾರತಿ21 Dec 2020 10:48 PM IST
share
ಅಭಿವೃದ್ಧಿಯೇ ಮತದಾರರ ಶ್ರೀರಕ್ಷೆ : ಶಾಸಕ ಸುನೀಲ್‍ ಕುಮಾರ್

ಕಾರ್ಕಳ : ರಾಜ್ಯಕ್ಕೆ ಮಾದರಿಯಾಗಿರುವ ಕಾರ್ಕಳ ವಿಧಾನ ಸಭಾ ಕ್ಷೇತ್ರವು ಐತಿಹಾಸದಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ. 2020ರಲ್ಲಿ ರೂ. 81 ಕೋಟಿ ವೆಚ್ಚದಲ್ಲಿ 87 ಕಿಂಡಿ ಅಣೆಕಟ್ಟು ನಿರ್ಮಾಣ, ರಾಮಸಮುದ್ರ ಸ್ವಚ್ಚತೆ ನಿರ್ಧಾರ,  ತಾಲೂಕಿನಲ್ಲಿ ಸುಸಜ್ಜಿತ ಸರಕಾರಿ ಆಸ್ಪತ್ರೆ ನಿರ್ಮಾಣ, ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಅಭಿವೃದ್ಧಿ, ತಾಲೂಕು ಒಳಾಂಗಣ ಕ್ರೀಡಾಂಗಣ ಸೇರಿದಂತೆ ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣ ಒಳಗೊಂಡಂತೆ ಶೇ.90 ರಷ್ಟು ಜನರ ನಿರೀಕ್ಷೆ ಯಂತೆ ಕೆಲಸ ಕಾರ್ಯಗಳನ್ನು ಮಾಡಿರುವುದಾಗಿ ಶಾಸಕ ಹಾಗೂ ಸರಕಾರದ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್ ಹೇಳಿದರು. 

ಮಂಜುನಾಥ ಪೈ ಸಭಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಕಳ ತಾಲೂಕು ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ   ಅವರು ಮಾತನಾಡಿದರು.

ನೆನೆಗುದ್ದಿಗೆ ಬಿದ್ದಿರುವ ಡೀಮ್ಡ್ ಫಾರೆಸ್ಟ್ ಸಮಸ್ಸೆ ಹಾಗೂ ಕುಮ್ಕಿ ಹಕ್ಕು ನೀಡುವ ವಿಚಾರದಲ್ಲಿ ಸರಕಾರ ಜನರಪರವಾಗಿಯೇ ಕಾರ್ಯನಿರ್ವಹಿಸಲಿದೆ. ಮುಂದಿನ ಕೆಲ ತಿಂಗಳ ಅವಧಿಯೊಳಗಾಗಿ ಸರಕಾರದ ಹೊಸ ಅದೇಶ ಹೊರಬೀಳಲಿರುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಕಾರ್ಕಳ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 492 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಹೆಬ್ರಿ ತಾಲೂಕಿನಲ್ಲಿ 93 ಹಾಗೂ ಕಾರ್ಕಳ ತಾಲೂಕಿನಲ್ಲಿ 399 ಸ್ಥಾನಗಳಿವೆ. ಅದರಲ್ಲಿ ಬಿಜೆಪಿ ಬೆಂಬಲಿತ 36 ಸ್ಥಾನಗಳಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ.

34 ಗ್ರಾಮ ಪಂಚಾಯತ್ ಗಳೆಲ್ಲವೂ ಬಿಜೆಪಿ ಗೆಲ್ಲಲ್ಲೇ ಬೇಕು. ನಲ್ಲೂರು ಗ್ರಾಮ ಪಂಚಾಯತ್ ವ್ಯಾಫ್ತಿಯ 15 ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಬಿಜೆಪಿ ಬೆಂಬಲಿಗರು ಅವಿರೋಧ ಆಯ್ಕೆಯಾಗಿರುವ ಮೂಲಕ ಕಾರ್ಕಳ ತಾಲೂಕಿನಲ್ಲಿ ಮೊಟ್ಟ ಮೊದಲ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿಗರು ತಮ್ಮ ಬಗಲಿಗೆ ಹಾಕಿ ಕೊಂಡಿರುವುದು ಮೊದಲ ವಿಜಯ ಎಂದು ಇದೇ ಸಂದರ್ಭದಲ್ಲಿ ಶಾಸಕ ವಿ.ಸುನೀಲ್ ಕುಮಾರ್ ಕೊಂಡಾಡಿದರು.

ಹಿರಿಯ ನೇತಾರ ಬೋಳ ಪ್ರಭಾಕರ ಕಾಮತ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಕೀಲರಾದ ಎಂ.ಕೆ.ವಿಜಯಕುಮಾರ್, ಮಣಿರಾಜ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ ಸಭೆಯನ್ನು ಉದ್ದೇಶಿ ಮಾತನಾಡಿದರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದರು.

ರೇಶ್ಮಾ ಶೆಟ್ಟಿ, ವಿಖ್ಯಾತ್ ಶೆಟ್ಟಿ, ಜಯರಾಮ ಸಲ್ಯಾನ್,ಕುತ್ಯಾರು ನವೀನ್ ಶೆಟ್ಟಿ, ರವಿ ಅಮೀನ್ ಉಪಸ್ಥಿತರಿದ್ದರು. ಸುಮ ವಂದೇಮಾತರಂ ಹಾಡಿದರು. ನವೀನ್ ನಾಯಕ್ ನಿರೂಪಣೆ ರವೀಂದ್ರ ಕುಮಾರ್ ಸ್ವಾಗತ, ಸತೀಶ್ ಮುಟ್ಲುಪ್ಪಾಡಿ ಧನ್ಯವಾದ ಸಮರ್ಪಣೆ ಸರ್ಮಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X